ETV Bharat / state

ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ)ಕಾಯಿದೆ 2021 ಪ್ರಶ್ನಿಸಿ ಹೈಕೋರ್ಟ್​ಗೆ ಪಿಐಎಲ್​ ಅರ್ಜಿ ಸಲ್ಲಿಕೆ - RELIGIOUS STRUCTURES PROTECTION ACT

ಕರ್ನಾಟಕ ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ)ಕಾಯಿದೆ 2021 ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ ನೀಡಿದೆ.

HIGH COURT
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jan 29, 2025, 9:35 PM IST

ಬೆಂಗಳೂರು: ಕರ್ನಾಟಕ ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ)ಕಾಯಿದೆ 2021 ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಡಿ. ಕೇಶವಮೂರ್ತಿ ಎಂಬುವರು ಕಾಯಿದೆ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರ ವಿಭಾಗೀಯ ಪೀಠ ನಡೆಸಿತು. ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಅಲ್ಲದೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎತ್ತಿರುವ ವಿಚಾರವು ಮಹತ್ವದ್ದಾಗಿದ್ದು, ಸಾಂವಿಧಾನಿಕ ಕಾನೂನಿನ ಕಾರ್ಯಾಚರಣೆಯಲ್ಲಿ ದೂರಗಾಮಿ ಆಯಾಮಗಳನ್ನು ಹೊಂದಿದೆ. ಸುಪ್ರೀಂಕೋರ್ಟ್‌ ಆದೇಶವು ನೆಲದ ಕಾನೂನಾಗಿದ್ದು, ಅದನ್ನು ಶಾಸನಸಭೆಗಳೂ ಸೇರಿದಂತೆ ಎಲ್ಲರೂ ಪಾಲಿಸಬೇಕು ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನಿನ ಅನ್ವಯ ಅನುಮತಿ ಪಡೆಯದೇ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ದೇವಾಲಯಗಳು, ಚರ್ಚ್‌, ಮಸೀದಿ, ಗುರುದ್ವಾರ, ಬುದ್ಧ ವಿಹಾರ ಇತ್ಯಾದಿಗಳನ್ನು ರಕ್ಷಿಸುವ ಉದ್ದೇಶದಿಂದ ಆಕ್ಷೇಪಾರ್ಹ ಕಾಯಿದೆ ಜಾರಿಗೊಳಿಸಲಾಗಿದೆ ಎಂದು ವಾದ ಮಂಡಿಸಿದರು.

ಭಾರತ ಸರ್ಕಾರ ವರ್ಸಸ್‌ ಗುಜರಾತ್‌ ಸರ್ಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಈ ವಿಚಾರದ ಸಂಬಂಧ ಈಗಾಗಲೇ ತೀರ್ಪು ನೀಡಿದೆ. ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕ್ರಿಯೆ ಆರಂಭಿಸಿದೆ. ಆದಾಗ್ಯೂ, ರಾಜ್ಯ ಸರ್ಕಾರ ಕಾನೂನು ರೂಪಿಸಿದ್ದು, ಅದನ್ನು ಪಿಐಎಲ್‌ನಲ್ಲಿ ಪ್ರಶ್ನಿಸಲಾಗಿದೆ ಎಂದರು.

ಸರ್ಕಾರದ ಪರ ವಕೀಳರು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈಗಾಗಲೇ ನೋಟಿಸ್‌ ಜಾರಿಗೊಳಿಸಲಾಗಿದ್ದು, ಪ್ರಕರಣದ ಗಂಭೀರತೆ ಮತ್ತು ಸುಪ್ರೀಂಕೋರ್ಟ್‌ ನಿರ್ದೇಶನ ಗಮನದಲ್ಲಿಟ್ಟು ಕೊಂಡು ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸಬೇಕು ಎಂದಿರುವ ನ್ಯಾಯಾಲಯವು ವಿಚಾರಣೆಯನ್ನು ಮಾರ್ಚ್‌ 3ಕ್ಕೆ ಮುಂದೂಡಿತು.

ಇದನ್ನೂ ಓದಿ: ಪಿಸ್ತೂಲ್ ಮುಟ್ಟುಗೋಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಇದನ್ನೂ ಓದಿ: ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾ. ದೇಸಾಯಿ ಡಿಬಾರ್‌ ಮಾಡಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.