ETV Bharat / state

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ - Pink Strong Walkathon - PINK STRONG WALKATHON

ಫೋರ್ಟಿಸ್‌ ಆಸ್ಪತ್ರೆಯಿಂದ ಗೋಪಾಲನ್‌ ಮಾಲ್‌ವರೆಗೆ ಸಾಗಿದ ವಾಕಥಾನ್​ನಲ್ಲಿ ಸ್ತನ ಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು, ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಸೇರಿ 450ಕ್ಕೂ ಹೆಚ್ಚು ಜನರು ಭಾಗವಹಿಸಿದರು.

Pink Strong Walkathon in Bengaluru as part of Breast Cancer Awareness Month
ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಗರದಲ್ಲಿ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ (ETV Bharat)
author img

By ETV Bharat Karnataka Team

Published : Oct 6, 2024, 7:41 PM IST

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ಅನ್ನು ಭಾನುವಾರ ಆಯೋಜಿಸಲಾಯಿತು.

ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಸಾಗಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನ ಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450ಕ್ಕೂ ಹೆಚ್ಚು ಜನರು ಪಾಲ್ಗೊಂಡರು.

Pink Strong Walkathon in Bengaluru as part of Breast Cancer Awareness Month
ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಗರದಲ್ಲಿ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ (ETV Bharat)

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, "ಇಂದು ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನ ಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನ ಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದರೆ ಮಾತ್ರ ಇದರ ನಿರ್ಮೂಲನೆ ಸಾಧ್ಯವಿದೆ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಬೇಕಿದೆ. ಇಂದು ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ" ಎಂದರು.

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೋಲಾಜಿಯ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಮಾತನಾಡಿ, "ಸ್ತನ ಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ. ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿಯಾಗಿದೆ. ಹೆಣ್ಣು ಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು" ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಫುಡ್​ ಆರ್ಡರ್​ ಮಾಡ್ತೀರಾ? ಹುಷಾರ್!​ ಪ್ಯಾಕೇಜಿಂಗ್‌ನಲ್ಲಿದೆ ಸ್ತನ ಕ್ಯಾನ್ಸರ್‌ ಹರಡುವ 200 ರಾಸಾಯನಿಕ ಅಂಶಗಳು- ಸಂಶೋಧನೆ - Breast Cancer In Food Packaging

ETV Bharat Logo

Copyright © 2025 Ushodaya Enterprises Pvt. Ltd., All Rights Reserved.