ETV Bharat / state

ಕೃತಿಚೌರ್ಯ ಆರೋಪ: 'ಮೈದಾನ್' ಪ್ರದರ್ಶನಕ್ಕೆ ಹೈಕೋರ್ಟ್ ಹಸಿರು ನಿಶಾನೆ - Maidaan Movie - MAIDAAN MOVIE

ಅಜಯ್ ದೇವಗನ್ ಅಭಿನಯದ ಬಾಲಿವುಡ್​ ಚಿತ್ರ 'ಮೈದಾನ್' ಪ್ರದರ್ಶನಕ್ಕೆ ಹೈಕೋರ್ಟ್ ಗ್ರೀನ್​ ಸಿಗ್ನಲ್​ ಕೊಟ್ಟಿದೆ.

Maidaan movie
ಮೈದಾನ್
author img

By ETV Bharat Karnataka Team

Published : Apr 12, 2024, 7:00 AM IST

ಬೆಂಗಳೂರು: ಕೃತಿ ಚೌರ್ಯ ಆರೋಪ‌ ಕುರಿತಂತೆ ಬೈವೀವ್ ಪ್ರಾಜೆಕ್ಟ್ ಪ್ರೈವೆಟ್ ಲಿಮಿಟೆಡ್‌ನ ನಿರ್ಮಾಣದ ಅಜಯ್ ದೇವಗನ್ ಅಭಿನಯದ 'ಮೈದಾನ್' ಚಲನಚಿತ್ರ ಪ್ರದರ್ಶನಕ್ಕೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಅಲ್ಲದೇ, ಒಟಿಟಿ ಸೇರಿದಂತೆ ಯಾವುದೇ ವಿಧಾನದಲ್ಲಿ ಯಾವುದೇ ಭಾಷೆಯಲ್ಲೂ ಸಿನಿಮಾ ಪ್ರದರ್ಶನ ಮಾಡಬಾರದು ಎಂದು ಮೈಸೂರು ಸಿವಿಲ್ ಕೋರ್ಟ್ ನೀಡಿದ್ದ ಆದೇಶಕ್ಕೆ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.

ಮುಂಬೈನ ಬೈವೀವ್ ಪ್ರಾಜೆಕ್ಟ್ ಪ್ರೈವೆಟ್ ಲಿಮಿಟೆಡ್‌ನ ಬೋನಿ ಕಪೂರ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯಪೀಠ ಈ ಮಧ್ಯಂತರ ಆದೇಶ ಮಾಡಿದೆ. ಗುರುವಾರ ಹೈಕೋರ್ಟ್​​​ಗೆ ರಜೆ ಇದ್ದರೂ ತುರ್ತು ವಿಚಾರ ಎಂದು ಮಂಡನೆ ಮಾಡಿ, ವಿಚಾರಣೆ ನಡೆಸುವಂತೆ ಅರ್ಜಿದಾರರು ಕೋರಿದ್ದರು. ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ: ಭಾರತೀಯ ಫುಟ್ಬಾಲ್ ಕಥಾಹಂದರ ಹೊಂದಿರುವ ಚಿತ್ರಕತೆ ರೂಪಿಸಿದ್ದ ಮೈಸೂರಿನ ಅನಿಲ್ ಕುಮಾರ್ ಅವರು ತಮ್ಮ ಸಿನಿಮಾದ ಕತೆಯ ಸಾರಾಂಶ, ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣ ಲಿಂಕ್ಡ್​​ಇನ್​ನಲ್ಲಿ ಪ್ರಕಟಿಸಿದ್ದರು. ಇದನ್ನು ನೋಡಿ ಜಾಹೀರಾತು ನಿರ್ದೇಶಕ ಮತ್ತು ಸಿನಿಮಾ ನಿರ್ದೇಶಕ ಎಂದು ಹೇಳಿಕೊಂಡಿದ್ದ ಮೂಲ ದಾವೆಯಲ್ಲಿ ಮೂರನೇ ಪ್ರತಿವಾದಿ ಸುಖದಾಸ್ ಸೂರ್ಯವಂಶಿ ಅವರು ಅನಿಲ್ ಕುಮಾರ್ ಸಂಪರ್ಕಕ್ಕೆ ಬಂದಿದ್ದರು. ಅನಿಲ್ ಕುಮಾರ್ ಪೋಸ್ಟರ್ ಆಕರ್ಷಕವಾಗಿದ್ದು, ಕತೆಯ ಬಗ್ಗೆ ತಿಳಿದುಕೊಳ್ಳಲು ಮತ್ತು ಬಾಲಿವುಡ್ ಪ್ರಮುಖ ಸಿನಿಮಾಕರ್ತರನ್ನು ಭೇಟಿ ಮಾಡಿಸಲು ಮುಂಬೈಗೆ ಬರುವಂತೆ ಆಹ್ವಾನಿಸಿದ್ದರು.

ಇಲ್ಲಿ ಸಾಕಷ್ಟು ಚರ್ಚೆಯ ಬಳಿಕ 2019ರ ಫೆಬ್ರವರಿ 20ರಂದು ಕತೆಯನ್ನು ಅನಿಲ್ ಕುಮಾರ್ ಅವರು ಚಿತ್ರಕತೆ ಬರಹಗಾರರ ಸಂಘದಲ್ಲಿ ʼಪಟ್ಗಂಡುಗʼ ಹೆಸರಿನಲ್ಲಿ ನೋಂದಾಯಿಸಿದ್ದರು. 150 ಪುಟಗಳ ಚಿತ್ರಕತೆ, ಸಂಭಾಷಣೆಯನ್ನು ನೋಂದಾಯಿಸಲಾಗಿತ್ತು. ಕತೆಗಾರರ ಹೆಸರಿನಲ್ಲಿ ಚಿತ್ರದ ಹೆಸರನ್ನು ನೋಂದಾಯಿಸಲು ಆಗದ ಹಿನ್ನೆಲೆಯಲ್ಲಿ ಸೂರ್ಯವಂಶಿ ಅವರ ಹೆಸರಿನಲ್ಲಿ ಟೈಟಲ್ ನೋಂದಾಯಿಸಲಾಗಿತ್ತು ಎಂದು ಮೂಲ ದಾವೆಯಲ್ಲಿ ವಿವರಿಸಲಾಗಿದೆ.

ಆದರೆ, ಕಳೆದ ವಾರ ತಮ್ಮ ಚಿತ್ರಕತೆಯ ಹಂದರ ಹೊಂದಿರುವ 'ಮೈದಾನ್' ಹೆಸರಿನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ಗಮನಕ್ಕೆ ಬಂದಿದೆ. ಜೀ ಸ್ಟುಡಿಯೋಸ್ ಮತ್ತು ಬೋನಿ ಕಪೂರ್ ನಿರ್ಮಿಸಿರುವ ಚಿತ್ರದ ಟ್ರೇಲರ್ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾಗಿದೆ. ನಾನು ರೂಪಿಸಿದ ಕತೆಯನ್ನು ಅಲ್ಪಸ್ವಲ್ಪ ಬದಲಾವಣೆ ಮಾಡಿ, ಸಿನಿಮಾ ಬರಹಗಾರರು ಬಳಕೆ ಮಾಡಿಕೊಂಡಿದ್ದಾರೆ. ಎರಡು ಭಾಗದಲ್ಲಿ ತಾನು ಭಾರತೀಯ ಫುಟ್ಬಾಲ್​ಗೆ ಸಂಬಂಧಿಸಿದ ಕತೆ ಬರೆದಿದ್ದು, ಎರಡನೇ ಭಾಗದ ಕತೆ, ಸಂಭಾಷಣೆ ಮತ್ತು ಚಿತ್ರಕತೆ ಬಳಕೆ ಮಾಡುವ ಮೂಲಕ ಕೃತಿಚೌರ್ಯ ಎಸಗಲಾಗಿದೆ ಎಂದು ಅನಿಲ್ ಕುಮಾರ್ ಮೂಲ ದಾವೆ ಹೂಡಿದ್ದಾರೆ.

ಇದನ್ನೂ ಓದಿ: ಮೈಸೂರಿನ ಕಥೆಗಾರ ಅನಿಲ್ ಕುಮಾರ್ ದೂರು: 'ಮೈದಾನ್' ಚಿತ್ರ ಪ್ರದರ್ಶನಕ್ಕೆ ಕೋರ್ಟ್​ನಿಂದ ತಡೆ - Court Stay On Maidaan

ETV Bharat Logo

Copyright © 2025 Ushodaya Enterprises Pvt. Ltd., All Rights Reserved.