ETV Bharat / state

ಗಾಜನೂರು ಬಳಿ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಯೋಜನೆ: ಸಚಿವ ಬೈರತಿ ಸುರೇಶ್ - WATER PURIFICATION PLANT

ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಒದಗಿಸಲು ಗಾಜನೂರು ಸಮೀಪ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಸಚಿವ ಬೈರತಿ ಸುರೇಶ್
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ಮಾತನಾಡಿದರು. (ETV Bharat)
author img

By ETV Bharat Karnataka Team

Published : Dec 13, 2024, 4:18 PM IST

ಬೆಂಗಳೂರು/ಬೆಳಗಾವಿ: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್​ಒಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್​ಒಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದರು.

ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂಎಲ್​ಡಿ, 1996ರಲ್ಲಿ 13.38 ಎಂಎಲ್​ಡಿ ಹಾಗೂ 2009ರಲ್ಲಿ 57 ಎಂಎಲ್​ಡಿ ಸೇರಿ ಒಟ್ಟು 84 ಎಂಎಲ್​ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 1976 ಮತ್ತು 1996ರಲ್ಲಿ ನಿರ್ಮಿಸಿರುವ ಶುದ್ಧೀಕರಣ ಘಟಕಗಳು ಶಿಥಿಲಾವಸ್ಥೆಯಲ್ಲಿವೆ ಎಂದರು.

ಇವುಗಳ ಬದಲು ಹೊಸದಾಗಿ ಶುದ್ಧೀಕರಣ ಘಟಕ ನಿರ್ಮಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ, ಗಾಜನೂರು ಅರಣ್ಯ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗಿದೆ. ಈ ಸ್ಥಳದಿಂದ ಗುರುತ್ವಾಕರ್ಷಣೆ ಮೂಲಕ ಶಿವಮೊಗ್ಗ ನೀರು ಸರಬರಾಜು ಮಾಡಬಹುದು. ಈ ಸಂಬಂಧ ಸರ್ವೆ ಕಾರ್ಯ ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ನಗರದಲ್ಲಿ ಶೇ.74ರಷ್ಟು ಒಳಚರಂಡಿ ವ್ಯವಸ್ಥೆ ಇದೆ. 115 ಕೋಟಿ ವೆಚ್ಚದಲ್ಲಿ 3ನೇ ಹಂತದ ಸಮಗ್ರ ಒಳಚರಂಡಿ ಯೋಜನೆಯಡಿ, ಏರಿಟೆಡ್ ಲಗೂನ್ ತಂತ್ರಜ್ಞಾನ ಆಧರಿಸಿ 35.58 ಎಂಎಲ್​ಡಿ ತ್ಯಾಜ್ಯ ನೀರು ಶುದ್ದೀಕರಣ ಘಟಕ, 3 ವೆಟ್‌ವೆಲ್, 262 ಕಿ.ಮೀ ಉದ್ದದ ಗ್ರಾಮಸಾರ ಕೊಳವೆ ಮಾರ್ಗವನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಅಮೃತ್ ಯೋಜನೆಯಡಿ 58 ಕೋಟಿ ರೂ ಹಾಗೂ 7 ಕೋಟಿ ರೂ ಹೆಚ್ಚುವರಿ ಅನುದಾನದಡಿ ಮಹಾನಗರ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಗೃಹ ಸಂಪರ್ಕಿತ ಒಳಚರಂಡಿ ಕೊಳವೆ ಮಾರ್ಗ, ಹಳೆ ಕೊಳವೆ ಮಾರ್ಗಗಳ ಪುನರುಜ್ಜೀವನ, 4 ವೆಟ್‌ವಲ್, 6 ಪಂಪಿಂಗ್ ಮೆಷಿನರಿ, ಡಿ.ಜಿ. ರೂಮ್, ಡಿ.ಜೆ.ಸೆಟ್ ಮತ್ತು ಟ್ರಾನ್ಸ್‌ಫಾರ್ಮರ್ ಸಬ್​ಸ್ಟೇಷನ್, 11 ಕೆ.ವಿ. ಎಕ್ಸ್​ಪ್ರೆಸ್ ಫೀಡರ್ ವಿದ್ಯುತ್ ಲೈನ್, 5.13 ಎಂಎಲ್​ಡಿ ಸಾಮರ್ಥ್ಯದ ತ್ಯಾಜ್ಯ ನೀರಿನ ಶುದ್ದೀಕರಣ ಘಟಕ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಹಾನಗರಗಳಿಗೆ ₹2 ಸಾವಿರ ಕೋಟಿ ಅನುದಾನ: ಸರ್ಕಾರ ರಾಜ್ಯ ಹಣಕಾಸು ನಿಗಮ ಬೃಹತ್ ಬೆಂಗಳೂರು ಸೇರಿ ಇತರೆ 10 ಮಹಾನಗರ ಪಾಲಿಕೆಗಳಿಗೆ ಒಟ್ಟು 2 ಸಾವಿರ ಕೋಟಿ ರೂ. ಅನುದಾನ ನೀಡಿದೆ. ಇದರಲ್ಲಿ ಶಿವಮೊಗ್ಗ ನಗರಕ್ಕೆ 140 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿನ 50 ಗ್ರಾಪಂ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೆ: ಸಚಿವ ಭೈರತಿ ಸುರೇಶ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.