ETV Bharat / state

ಹುಬ್ಬಳ್ಳಿ: ಮೀಟರ್ ಬಡ್ಡಿ ದಂಧೆ, 25 ಮಂದಿ ಸೆರೆ - Hubballi Police Raid - HUBBALLI POLICE RAID

ಹುಬ್ಬಳ್ಳಿ-ಧಾರವಾಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ 25 ಜನರನ್ನು ಬಂಧಿಸಿದ್ದಾರೆ.

police-arrested-25-people-for-meter-and-monthly-interest-in-dharwad
ಮೀಟರ್ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ದಾಖಲೆ ಪತ್ರ , ಮೊಬೈಲ್ ವಶ (ETV Bharat)
author img

By ETV Bharat Karnataka Team

Published : Aug 22, 2024, 11:03 PM IST

ಹು-ಧಾ ಪೊಲೀಸ್‌ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ (ETV Bharat)

ಹುಬ್ಬಳ್ಳಿ: ಮೀಟರ್ ಬಡ್ಡಿ ದಂಧೆಕೋರರ ಮೇಲೆ ಅವಳಿ ನಗರದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಾಗಿದ್ದು, 25 ಮಂದಿ ಮೀಟರ್ ಬಡ್ಡಿ ದಂಧೆಕೋರರನ್ನು ಬಂಧಿಸಲಾಗಿದೆ ಎಂದು ಹು-ಧಾ ಪೊಲೀಸ್‌ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಅಪ್ರಾಪ್ತ ವಿದ್ಯಾರ್ಥಿಗಳನ್ನು ಮೀಟರ್ ಬಡ್ಡಿ ದಂಧೆಯಲ್ಲಿ ಬಳಸಿಕೊಂಡ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಅವಳಿ‌ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಳು ಪ್ರಕರಣ ದಾಖಲಿಸಲಾಗಿದೆ ಎಂದರು.

ಧಾರವಾಡದ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲಾಗಿದ್ದು, 4 ಜನರ ಬಂಧನ ಮಾಡಲಾಗಿದೆ. ಧಾರವಾಡದ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲು ಮಾಡಿ, ನಾಲ್ವರ ಬಂಧನ ಮಾಡಲಾಗಿದೆ. ಧಾರವಾಡ ಉಪ ನಗರ ಠಾಣಾ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲು ಮಾಡಿ, ಐವರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಬೆಂಡಿಗೇರಿ ಠಾಣಾ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಿಸಿ, 12 ಜನರ ಬಂಧನ ಮಾಡಿ ಬಂಧಿತರಿಂದ 10 ಬೈಕ್ ಮತ್ತು 10 ಮೊಬೈಲ್ ವಶಕ್ಕೆ ಪಡೆದಿದ್ದೇವೆ. ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ದಾಖಲೆ ಪತ್ರ, ಎರಡು ಹರಿತ ಆಯುಧ, ಖಾಲಿ ಚೆಕ್, ಬಾಂಡ್ ಪೇಪರ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು: ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆಗಳ ಮೇಲೆ ಸಿಸಿಬಿ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.