ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು, ನ್ಯಾಯಾಲಯದ ಅನುಮತಿ ಮೇರೆಗೆ ನಟ ದರ್ಶನ್ ವಿಶ್ರಾಂತಿ ಪಡೆಯಲು ಮೈಸೂರಿನಲ್ಲಿರುವ ತಮ್ಮ ಫಾರ್ಮ್ ಹೌಸ್ಗೆ ತೆರಳಿದ್ದಾರೆ. "ಹತ್ಯೆ ಪ್ರಕರಣದಲ್ಲಿ 7 ಮಂದಿ ಆರೋಪಿಗಳಿಗೆ ಜಾಮೀನು ದೊರೆತಿದ್ದು, ಎಲ್ಲರೂ ಬಿಡುಗಡೆಯಾಗಿದ್ದಾರೆ. ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು" ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.
"ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ": ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ವೈಫಲ್ಯವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು, "ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಅಲ್ಲದೇ ಪ್ರಾಸಿಕ್ಯೂಷನ್ ವೈಫಲ್ಯ ಎಂಬುದು ವಿಚಾರಣೆ ಪೂರ್ಣಗೊಂಡ ಬಳಿಕ ನಿರ್ಧಾರವಾಗುತ್ತದೆ" ಎಂದರು.
ಮತ್ತೊಂದೆಡೆ, ಪ್ರಕರಣದ ಆರು ಹಾಗೂ ಏಳನೇ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದರು. ಇವರು ಚಿತ್ರದುರ್ಗದ ನಿವಾಸಿಗಳಾಗಿದ್ದು, ಅಲ್ಲಿಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು 57ನೇ ಸಿಸಿಹೆಚ್ ನ್ಯಾಯಾಲಯ ಮಾನ್ಯ ಮಾಡಿದ್ದು, ಜನವರಿ 10ರವರೆಗೆ ಆರೋಪಿಗಳು ಅಲ್ಲಿರುವಂತೆ ಆದೇಶಿಸಿದೆ.
ಇದನ್ನೂ ಓದಿ: ದರ್ಶನ್ಗೆ 2 ವಾರ ಮೈಸೂರಿಗೆ ತೆರಳಲು ನ್ಯಾಯಾಲಯ ಅನುಮತಿ - DARSHAN CAN ENTER MYSURU