ETV Bharat / state

ಹುಬ್ಬಳ್ಳಿ: ಮಹಿಳೆ ಜೊತೆ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ - Police Constable Suicide

ಪೊಲೀಸ್ ಕಾನ್ಟ್​ಟೇಬಲ್ ಮತ್ತು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಘಟನಾ ಸ್ಥಳ
ಘಟನಾ ಸ್ಥಳ (ETV Bharat)
author img

By ETV Bharat Karnataka Team

Published : May 21, 2024, 9:44 PM IST

ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್​​ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಮಹೇಶ ಹೆಸರೂರು ಮತ್ತು ವಿಜಯಲಕ್ಷ್ಮೀ (30) ಎಂಬುವರು ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ.

ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದು ನೋಡಿದಾಗ ಮಹಿಳೆ ಮತ್ತು ಕಾನ್ಸ್​ಟೇಬಲ್​ ಮಹೇಶ್ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ.

ಮಹೇಶ್​ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜೊತೆ ಸಂಬಂಧ ಹೊಂದಿದ್ದರು. 15 ದಿನದ ಹಿಂದೆ ವಿಜಯಲಕ್ಷ್ಮೀ ಜೊತೆ ಮನೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗುವುದು: ಗೃಹ ಸಚಿವ ಜಿ.ಪರಮೇಶ್ವರ - Minister G Parmeshwar visited Hubli

ETV Bharat Logo

Copyright © 2024 Ushodaya Enterprises Pvt. Ltd., All Rights Reserved.