ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಜನರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಬೈಕ್ ಸೈಲೆನ್ಸರ್‌ಗಳನ್ನು ಪೊಲೀಸರು ನಾಶಪಡಿಸಿದ್ದಾರೆ. 200ಕ್ಕೂ ಹೆಚ್ಚು ಸೈಲೆನ್ಸರ್‌ಗಳನ್ನು ವಶಕ್ಕೆ ಪಡೆದಿದ್ದ ಸಂಚಾರಿ ಪೊಲೀಸರು, ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ರೋಡ್ ರೋಲರ್ ಹರಿಸಿ ಪುಡಿಗಟ್ಟಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಓಡಾಡುವುದನ್ನೇ ಟ್ರೆಂಡ್ ಮಾಡಿಕೊಂಡಿರುವ ಕೆಲವು ಫುಡಾರಿಗಳಿಗೆ ಹಾಗೂ ಬೈಕ್ ಸವಾರರಿಗೆ ಈ ಮೂಲಕ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹುಬ್ಬಳ್ಳಿಯ ಟ್ರಾಫಿಕ್ ಐರ್ಲೆಂಡ್ ಚೆನ್ನಮ್ಮ ವೃತ್ತದಲ್ಲಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ನೇತೃತ್ವದಲ್ಲಿ ಸೈಲೆನ್ಸರ್ ನಾಶಪಡಿಸಲಾಯಿತು.
ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾತನಾಡಿ, ''ಟ್ರಾಫಿಕ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದರ ಒಂದು ಭಾಗವಾಗಿ 200ಕ್ಕೂ ಹೆಚ್ಚು ಸೈಲೆನ್ಸರ್‌ಗಳನ್ನು ನಾಶಪಡಿಸಲಾಗಿದೆ. ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ತಯಾರಿಸುವವರು ನಗರದಲ್ಲಿದ್ದಾರೆ. ಅಂಥವರನ್ನು ಗುರುತಿಸಿ ಎಚ್ಚರಿಕೆ ನೀಡುವುದರ ಜೊತೆಗೆ ಕೇಸ್ ದಾಖಲಿಸುವ ಕೆಲಸ ಮಾಡುತ್ತಿದ್ದೇವೆ. ಈ ಕಾರ್ಯಾಚರಣೆ ಇಲ್ಲಿಗೆ ನಿಲ್ಲುವುದಿಲ್ಲ'' ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ಗಳ ಸೈಲೆನ್ಸರ್ ನಾಶ ಮಾಡಿದ ಪೊಲೀಸರು: ವಿಡಿಯೋ - Noisy Bike Silencer Destroyed