ETV Bharat / state

ಭದ್ರಾವತಿ: ರೌಡಿಶೀಟರ್‌ಗೆ ಪೊಲೀಸರಿಂದ ಗುಂಡೇಟು - ROWDY SHEETER SHOT

ರೌಡಿಶೀಟರ್ ರವಿ ಎಂಬಾತನ ಮೇಲೆ ಹೊಸಮನೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

Police firing on rowdy sheeter Ravi in Shivamogga
ರೌಡಿಶೀಟರ್ ರವಿಯನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುತ್ತಿರುವುದು. (ETV Bharat)
author img

By ETV Bharat Karnataka Team

Published : Feb 21, 2025, 8:03 PM IST

ಶಿವಮೊಗ್ಗ: ರವಿ ಅಲಿಯಾಸ್​ ಗುಂಡ ಎಂಬ ರೌಡಿಶೀಟರ್​ ಮೇಲೆ ಭದ್ರಾವತಿಯ ಹೊಸಮನೆ ಪೊಲೀಸರು ಇಂದು ಫೈರಿಂಗ್ ಮಾಡಿದ್ದಾರೆ. ಪ್ರಕರಣವೊಂದರಲ್ಲಿ ಬಂಧಿಸಲು ತೆರಳಿದ್ದಾಗ ಆರೋಪಿ ಪೊಲೀಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಹೊಸಮನೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣ ತಮ್ಮ ಸಿಬ್ಬಂದಿಯ ರಕ್ಷಣೆಗಾಗಿ ಅನಿವಾರ್ಯವಾಗಿ ಫೈರಿಂಗ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದರ್ಶನ್ ಎಂಬ ಸಿಬ್ಬಂದಿಯ ಮೇಲೆ ಹಲ್ಲೆಗೆ ಮುಂದಾದಾಗ, ಪಿಎಸ್ಐ ಕೃಷ್ಣ ಅವರು ಶರಣಾಗತಿಗೆ ಎಚ್ಚರಿಕೆ ನೀಡಿದ್ದರು. ಇದನ್ನು ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದಾಗ ರವಿಯ ಬಲಗಾಲಿಗೆ ಪಿಎಸ್ಐ ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆ ದಾಖಲಿಸಿದರೆ, ಗಾಯಾಳು ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ : ಡ್ರಗ್ ಸ್ಮಗ್ಲರ್ ಮೇಲೆ ಪೊಲೀಸರಿಂದ ಫೈರಿಂಗ್​ - POLICE FIRING ON DRUG SMUGGLER

ETV Bharat Logo

Copyright © 2025 Ushodaya Enterprises Pvt. Ltd., All Rights Reserved.