ETV Bharat / state

ಹೈಕೋರ್ಟ್​ನಲ್ಲಿಂದು ಸಿಎಂ ಸಿದ್ದರಾಮಯ್ಯ ಅರ್ಜಿಯ ತೀರ್ಪು: ರಾಜ್ಯಾದ್ಯಂತ ಖಾಕಿ ಕಟ್ಟೆಚ್ಚರ - CM Siddaramaiah Prosecution Verdict

author img

By ETV Bharat Karnataka Team

Published : 2 hours ago

ಮುಡಾ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ಹೈಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ.

ಹೈಕೋರ್ಟ್​ನಲ್ಲಿ ಇಂದು ಸಿಎಂ ಅರ್ಜಿಯ ತೀರ್ಪು ಪ್ರಕಟ
ಹೈಕೋರ್ಟ್​ನಲ್ಲಿಂದು ಸಿಎಂ ಅರ್ಜಿಯ ತೀರ್ಪು (ETV Bharat)

ಬೆಂಗಳೂರು: ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ತೀರ್ಪು ಹೈಕೋರ್ಟ್​ನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ತೀರ್ಪಿನ ಬಳಿಕ ಪರ, ವಿರೋಧ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸುವಂತೆ ಎಸ್​​ಪಿ ಹಾಗೂ ಡಿಸಿಪಿಗಳಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚಿಸಿದ್ದಾರೆ.

ನ್ಯಾಯಾಲಯದ ತೀರ್ಪು ಮುಖ್ಯಮಂತ್ರಿಗಳ ಅರ್ಜಿಗೆ ವ್ಯತಿರಿಕ್ತವಾಗಿ ಬಂದರೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸುವ ಸಾಧ್ಯತೆಯಿದೆ. ಒಂದು ವೇಳೆ ಮುಖ್ಯಮಂತ್ರಿಗಳ ಪರವಾಗಿ ಬಂದರೆ ಪ್ರತಿಪಕ್ಷಗಳು ಪ್ರತಿಭಟಿಸುವ ಸಾಧ್ಯತೆ ಇದೆ. ಹೀಗಾಗಿ, ಅಗತ್ಯ ಸ್ಥಳಗಳಲ್ಲಿ ಕೆಎಸ್ಆರ್​ಪಿ ತುಕಡಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಪ್ರಾಸಿಕ್ಯೂಷನ್ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಇಂದು ಪ್ರಕಟ - CM Siddaramaiah Prosecution Verdict

ETV Bharat Logo

Copyright © 2024 Ushodaya Enterprises Pvt. Ltd., All Rights Reserved.