ETV Bharat / state

ಎಕೆ 56 ಗನ್, ಮದ್ದುಗುಂಡು ಸೇರಿ ಶರಣಾದ 6 ನಕ್ಸಲರ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಪೊಲೀಸ್ - NAXALITES WEAPONS SEIZED

ಸಮಾಜದ ಮುಖ್ಯವಾಹಿನಿಗೆ ಬಂದ ಆರು ಜನ ನಕ್ಸಲರ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

naxalites weapons seized
ವಶಕ್ಕೆ ಪಡೆದ ನಕ್ಸಲರ ಶಸ್ತ್ರಾಸ್ತ್ರಗಳು (ETV Bharat)
author img

By ETV Bharat Karnataka Team

Published : Jan 11, 2025, 1:10 PM IST

ಚಿಕ್ಕಮಗಳೂರು: ಕಳೆದ ಮೂರು ದಿನಗಳ ಹಿಂದೆ ಸಮಾಜದ ಮುಖ್ಯವಾಹಿನಿಗೆ ಬಂದು ಶರಣಾಗತರಾದ ಆರು ಮಂದಿ ನಕ್ಸಲರ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಿತ್ತಲೆಗುಲಿ ಬಳಿಯ ಅರಣ್ಯ ಪ್ರದೇಶದಲ್ಲಿ ಪಿಎಸ್ಐ ತಂಡ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದೆ. ಮುಖ್ಯವಾಹಿನಿಗೆ ಬಂದರೆ ಸಹಾನುಭೂತಿಯಿಂದ ನಡೆದುಕೊಳ್ಳಲಾಗುವುದು ಎಂಬ ರಾಜ್ಯ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ 6 ಮಂದಿ ನಕ್ಸಲರು ಜ.8ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಜದ ಮುಖ್ಯವಾಹಿನಿಗೆ ಪ್ರವೇಶಿಸಿದ್ದರು.

ಶಾಂತಿಗಾಗಿ ನಾವು ಸಂಘಟನೆ ಹಾಗೂ ಶರಣಾಗತಿ ನೀತಿ ಸಮಿತಿ ಸದಸ್ಯರು ಮನವೊಲಿಸಿದ ಬಳಿಕ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಕೆ. ವಸಂತ, ಜಿಶಾ ಹಾಗೂ ಮಾರೆಪ್ಪ ಅರೋಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು. ಈ ವೇಳೆ ಹೂಗುಚ್ಛ ಹಾಗೂ ಸಂವಿಧಾನ ಪುಸ್ತಕ ನೀಡಿ ಸ್ವಾಗತಿಸಲಾಗಿತ್ತು.

ವಶಕ್ಕೆ ಪಡೆದ ಶಸ್ತ್ರಾಸ್ತ್ರಗಳು: ಇದೀಗ ಪೊಲೀಸರು ಒಂದು ಎಕೆ - 56 ಗನ್​, ಮೂರು 303 - ರೈಫಲ್, ಒಂದು 12 - ಬೋರ್ ಎಸ್‌ಬಿಬಿಎಲ್ ಹಾಗೂ ಒಂದು ದೇಶ ನಿರ್ಮಿತ ಪಿಸ್ತೂಲ್ ಸೇರಿ 6 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಶಸ್ತ್ರಾಸ್ತ್ರ ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಪ್ರವೇಶಿಸಿದ ನಕ್ಸಲರು; ಕೊಟ್ಟ ಭರವಸೆ ಈಡೇರಿಸುವುದಾಗಿ ಸಿಎಂ ಅಭಯ

176 ಮದ್ದು ಗುಂಡುಗಳು ವಶಕ್ಕೆ:

  • 7.62 ಎಂಎಂ ಎಕೆ ಮದ್ದು ಗುಂಡುಗಳು - 11
  • 303 ರೈಫಲ್ ಮದ್ದುಗುಂಡುಗಳು - 133
  • 12 ಬೋರ್ ಕಾರ್ಟ್ರಿಜ್​​ಗಳು - 24
  • ದೇಶ ನಿರ್ಮಿತ ಪಿಸ್ತೂಲ್ ಮದ್ದು ಗುಂಡುಗಳು - 08

ಈ ಸಂಬಂಧ ಸೆಕ್ಷನ್ 3, 25 (1 ಬಿ), 7 ಮತ್ತು 25 (1 ಎ) ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿ ಜಯಪುರ​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನಕ್ಸಲರನ್ನು ಸಿಎಂ ಕಚೇರಿಯಲ್ಲಿ ಶರಣಾಗತಿ ಮಾಡಿಸಿದ್ದು ಸರಿಯಲ್ಲ: ನಿವೃತ್ತ ಐಪಿಎಸ್ ಅಧಿಕಾರಿ ಬೇಸರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.