ETV Bharat / state

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಮಂಗಳೂರಲ್ಲಿ ಪೊಲೀಸ್ ಬಂದೋಬಸ್ತ್

author img

By ETV Bharat Karnataka Team

Published : Jan 21, 2024, 9:14 PM IST

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿದೆ.

Etv Bharat
Etv Bharat

ಮಂಗಳೂರು: ಅಯೋಧ್ಯೆಯಲ್ಲಿ ಸೋಮವಾರ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಭಾನುವಾರ ವಿವಿಧ ಸ್ಥಳಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರಿನ ದೇವಸ್ಥಾನ, ಪ್ರಾರ್ಥನಾ ಮಂದಿರಗಳು ಸೇರಿದಂತೆ 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಂಗಳೂರಲ್ಲಿ ಪೊಲೀಸ್ ಬಂದೋಬಸ್ತ್
ಮಂಗಳೂರಲ್ಲಿ ಪೊಲೀಸ್ ಬಂದೋಬಸ್ತ್

ನಗರದಲ್ಲಿ ಕೆಟ್ಟಚ್ಚರ:

  • 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
  • ನಗರದಾದ್ಯಂತ 57 ಸೆಕ್ಟರ್ ಮೊಬೈಲ್​​ಗಳನ್ನು 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆ ಮಾಡಲಾಗಿದೆ. 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್​​ಗಳನ್ನು ನಿಯೋಜಿಸಲಾಗಿದೆ.
  • ನಗರದಾದ್ಯಂತ 9 ಸಿ.ಎ.ಆರ್ ಮತ್ತು 3 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ತಡರಾತ್ರಿ ಮತ್ತು ಬೆಳಗ್ಗೆ ವಿಶೇಷ ಗಸ್ತು ಆಯೋಜಿಸಲಾಗಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
  • ರಾಜ್ಯದಲ್ಲಿ ಅಳವಡಿಸಲಾಗಿರುವ ಕ್ರಮದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ‌್ಯಾಲಿಗಳಿಗೆ ಅನುಮತಿಸಿಲ್ಲ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎಸಿಪಿಯವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ. ಪ್ರತಿ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
  • ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾಧಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ.
  • ಜ.21ರ ಮಧ್ಯರಾತ್ರಿಯಿಂದ ಜ.23ರ ಮುಂಜಾನೆವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಾರ್ ಗಳು ಹಾಗೂ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
  • ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ ಮೂವರು ಡಿಸಿಪಿಗಳು, ಆರು ಎಸಿಪಿಗಳು, 11ಪೊಲೀಸ್ ಇನ್ಸ್​​ಪೆಕ್ಟರ್​​ಗಳು ಮತ್ತು 37 ಪಿಎಸ್ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಥಸಂಚಲನ: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ 6 ಕಡೆಗಳಲ್ಲಿ ಪೊಲೀಸ್ ಸಿಬ್ಬಂದಿ ಇಂದು ಪಥ ಸಂಚಲನ ನಡೆಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.