ETV Bharat / state

ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರಿಂದ ಕ್ರಮ: ಡಿ.ಕೆ.ಶಿವಕುಮಾರ್

ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ. ಕೂಗಿದ್ದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

DCM DK Shivakumar  pro Pakistan slogan issue  Police take action  ಎಂದು ಡಿಸಿಎಂ ಡಿಕೆ ಶಿವಕುಮಾರ್  ಪಾಕಿಸ್ತಾನದ ಪರ ಘೋಷಣೆ ವಿವಾದ
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
author img

By ETV Bharat Karnataka Team

Published : Feb 28, 2024, 10:02 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು: "ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಇಂದು ಹಿಮಾಚಲ ಪ್ರದೇಶಕ್ಕೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಘಟನೆಯನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ" ಎಂದರು.

"ಈ ವಿಚಾರವಾಗಿ ತನಿಖೆ ಮಾಡುವಂತೆ ಸೂಚಿಸಿದ್ದೇವೆ. ಆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸುಳ್ಳು ಸುದ್ದಿ ಹಬ್ಬಿಸಿದ್ದರೆ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

ಹಿಮಾಚಲ ಪ್ರದೇಶಕ್ಕೆ ವೀಕ್ಷಕರಾಗಿ ತೆರಳುತ್ತಿರುವ ಬಗ್ಗೆ ಕೇಳಿದಾಗ, "ನಾನು ಅಲ್ಲಿಗೆ ಹೋಗುವಂತೆ ಕಾಂಗ್ರೆಸ್ ಪಕ್ಷ ನನಗೆ ಸೂಚನೆ ನೀಡಿದ್ದು, ಅದರಂತೆ ತೆರಳುತ್ತಿದ್ದೇನೆ. ಎರಡು ಮೂರು ರಾಜ್ಯಗಳಲ್ಲಿ ಸರ್ಕಾರ ಕೆಡವಲು ಬಿಜೆಪಿ ಆತುರದಲ್ಲಿದೆ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ವಿರೋಧ ಪಕ್ಷ ಇರಬೇಕು. ಈ ದೇಶದಲ್ಲಿ ಕೆಟ್ಟ ಸಂಪ್ರದಾಯವನ್ನು ಬಿಜೆಪಿ ಪಾಲಿಸುತ್ತದೆ. ನಮ್ಮ ಪಕ್ಷದ ಎಲ್ಲಾ ಶಾಸಕರು ನಮ್ಮ ಜತೆಯೇ ಇರುತ್ತಾರೆ. ಪಕ್ಷಕ್ಕೆ ನಿಷ್ಠರಾಗಿ ಇರುತ್ತಾರೆ ಎಂಬ ನಂಬಿಕೆ ನನಗಿದೆ" ಎಂದು ಹೇಳಿದರು.

ಇದನ್ನೂ ಓದಿ: ಪಾಕ್ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಬಳ್ಳಾರಿಯಲ್ಲಿ ನಾಸಿರ್ ಹುಸೇನ್ ನಾಮಫಲಕಕ್ಕೆ ಮಸಿ ಬಳಿಯಲು ಯತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.