ETV Bharat / state

ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ : ಸಿಎಂ ಸಿದ್ದರಾಮಯ್ಯ - Chief Minister Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯ ಕುರಿತು ಮಾತನಾಡಿದ್ದಾರೆ. ಅನುದಾನ ಹಂಚಿಕೆ ಸರಿಪಡಿಸುವಂತೆ 16ನೇ ಹಣಕಾಸು ಆಯೋಗವನ್ನು ಕೋರಲಾಗಿದೆ ಎಂದಿದ್ದಾರೆ.

chief-minister-siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 29, 2024, 8:42 PM IST

Updated : Aug 29, 2024, 9:33 PM IST

ಸಿಎಂ ಸಿದ್ದರಾಮಯ್ಯ (ETV BHARAT)

ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ರೂ. ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದೆ. ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿವಿಸಿಬಲ್ ಪೂಲ್​ಗೆ ಸೆಸ್ ಮತ್ತು ಸರ್ಜಾಜ್​​ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್​ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರದಿಂದ ಪ್ರತಿ ವರ್ಷ 5000 ಕೋಟಿ ರೂಪಾಯಿಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣಾ ಅನುದಾನಕ್ಕೆ ಮನವಿ: ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡ ವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3,647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದು ತಿಳಿಸಿದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ.50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಯೋಗ ಹೇಳಿದ್ದೇನು; ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪಂಗಾರಿಯ, ಕರ್ನಾಟಕ ಸರ್ಕಾರ ಪ್ರಸ್ತಾವನೆ ಕೊಟ್ಟಿದೆ. ಹಿಂದಿ‌ನ ನಷ್ಟಕ್ಕೆ ಪರಿಹಾರ ಕೊಡುವ ವ್ಯವಸ್ಥೆ ಇಲ್ಲ. ಸೆಸ್ ಹಾಗೂ ಸರ್ಚಾರ್ಜ್ ಬಗ್ಗೆ ಹಿಂದಿನ ಹಣಕಾಸು ಆಯೋಗ ಬದಲಾವಣೆ ಮಾಡಲು ಶಿಫಾರಸ್ಸು ಮಾಡಿಲ್ಲ. ಹೀಗಾಗಿ ಇದರ ಬಗ್ಗೆ ಈಗ ಮಾತನಾಡಲ್ಲ ಎಂದು ತಿಳಿಸಿದರು.

ಇದನ್ನೂ ಓದಿ : ಹಿಂದಿನ ಹಣಕಾಸು ಆಯೋಗದ ನಿರ್ಧಾರಕ್ಕೆ 16ನೇ ಹಣಕಾಸು ಆಯೋಗ ಜವಾಬ್ದಾರನಲ್ಲ: ಅರವಿಂದ ಪಂಗಾರಿಯ - 16th Finance Commission

Last Updated : Aug 29, 2024, 9:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.