ETV Bharat / state

ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ: ಇಂದಿನಿಂದ ಮೂರು ದಿನ ಅಂಚೆ ಮತದಾನ - Postal Voting - POSTAL VOTING

ರಾಜ್ಯದಲ್ಲಿನ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಅಂಚೆ ಮತದಾನ ನಡೆಯಲಿದೆ.

postal-voting
ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ: ಇಂದಿನಿಂದ ಮೂರು ದಿನ ಅಂಚೆ ಮತದಾನ
author img

By ETV Bharat Karnataka Team

Published : May 1, 2024, 12:22 PM IST

ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಅಗತ್ಯ ಸೇವೆಗಳ ಇಲಾಖೆ ಸಿಬ್ಬಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡು, ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಭಾಗ ಸೇರಿ 14 ಲೋಕಸಭಾ ಕ್ಷೇತ್ರಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ಇಂದಿನಿಂದ ಮೇ 3ರ ವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಅಂಚೆ ಮತದಾನ ಮಾಡಬಹುದಾಗಿದೆ.

ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಳಾಖೆಗಳ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಂಚೆ ಮತದಾನ ಕೇಂದ್ರಗಳನ್ನು ತೆರೆದಿದೆ. ಅರ್ಹ ಮತದಾರರು ಅಂಚೆ ಮತಪತ್ರಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ರಾಜ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಹಂತದ ಮತದಾನಕ್ಕೆ ಸಿದ್ಧತೆ : ಚುನಾವಣಾ ಆಯೋಗವು ಮೇ 7 ರಂದು ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಇವಿಎಂಗಳನ್ನು ಸಜ್ಜುಗೊಳಿಸಿಕೊಳ್ಳಲಾಗಿದೆ. ಚುನಾವಣಾ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದ್ದು, ನಿಯೋಜನೆ ಕಾರ್ಯ ನಡೆದಿದೆ. ಇದಲ್ಲದೆ, ಚುನಾವಣಾ ಆಯೋಗದಿಂದ ಮನೆ, ಮನೆಗೆ ಮತದಾರರ ಚೀಟಿ ಹಂಚುವ ಕಾರ್ಯ ನಡೆದಿದೆ.

ಇದನ್ನೂ ಓದಿ: ಇಂದು ಹಾವೇರಿಗೆ ಚುನಾವಣಾ ಚಾಣಕ್ಯ ಅಮಿತ್​ ಶಾ ಎಂಟ್ರಿ: ಬೊಮ್ಮಾಯಿ ಪರ ಮತಭೇಟೆ - Amit Shah Campaign

ಜೊತೆಗೆ, ಚುನಾವಣಾ ಅಕ್ರಮಗಳ ಮೇಲೆ ನಿಗಾ ಇಡಲು ಪೊಲೀಸ್‌, ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೇಂದ್ರದಿಂದ ನಿಯೋಜನೆಗೊಂಡಿರುವ ಚುನಾವಣಾ ವೀಕ್ಷಕರು ಆಯಾ ಕ್ಷೇತ್ರಗಳಲ್ಲೇ ಮೊಕ್ಕಾಂ ಹೂಡಿದ್ದಾರೆ.

ಕಟ್ಟೆಚ್ಚರ: ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ರಾಯಚೂರು, ಬಳ್ಳಾರಿ, ಬೀದರ್‌, ಬೆಳಗಾವಿ, ಉತ್ತರ ಕನ್ನಡ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕಕ್ಕೆ ಹೊಂದಿಕೊಂಡ ಗಡಿ ರಾಜ್ಯದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನೀತಿ ಸಂಹಿತೆ ಜಾರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆ ನಡೆದು, ಅತಿ ಹೆಚ್ಚು ಮತದಾನ ಆಗುವ ನಿರೀಕ್ಷೆಯಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ಧಾರೆ.

ಇದನ್ನೂ ಓದಿ: ಮೋದಿ ಸೋಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ: ಸಿ.ಎಂ. ಇಬ್ರಾಹಿಂ - CM Ibrahim

ETV Bharat Logo

Copyright © 2024 Ushodaya Enterprises Pvt. Ltd., All Rights Reserved.