ETV Bharat / state

ಮುಂದೂಡಿಕೆಯಾಗಿದ್ದ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶ ಜ.21ಕ್ಕೆ: ಡಿ.ಕೆ.ಶಿವಕುಮಾರ್ - JAI BAPU JAI BHIM JAI CONSTITUTION

ಮುಂದೂಡಿಕೆಯಾಗಿದ್ದ 'ಗಾಂಧಿ ಭಾರತ' ಕಾರ್ಯಕ್ರಮ ಇದೇ ಜನವರಿ 21ರಂದು ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ನಡೆಯಲಿದೆ.

d k shivakumar
ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Jan 9, 2025, 7:07 AM IST

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ 'ಗಾಂಧಿ ಭಾರತ' ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸಂಜೆ ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದೆ. ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸೆಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು'' ಎಂದರು.

ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ (ETV Bharat)

''ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗಿತ್ತು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚಿಸಿ ಇದೇ ತಿಂಗಳು 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು'' ಎಂದು ತಿಳಿಸಿದರು.

''ಜನವರಿ 21ರಂದು ಬೆಳಗ್ಗೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ಎಐಸಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡುತ್ತಿದ್ದೇವೆ. ಈ ಸಮಾವೇಶದಲ್ಲಿ ಬಾಗವಹಿಸುವ ನಾಯಕರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು'' ಎಂದರು.

''ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜ.13ರಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು, ಬ್ಲಾಕ್ ಹಾಗೂ ಜಿಲ್ಲಾಧ್ಯಕ್ಷರು, ಶಾಸಕರು, ವಿವಿಧ ಘಟಕಗಳ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಶಾಸಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಲಿದ್ದು, ಸಂಜೆ 6 ಗಂಟೆಗೆ ಮುಖ್ಯಮಂತ್ರಿಗಳು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ'' ಎಂದು ಡಿಸಿಎಂ ಮಾಹಿತಿ ನೀಡಿದರು.

ಪಕ್ಷ ಸಂಘಟನೆಗೆ ಪೂರ್ವಭಾವಿ ಸಭೆ: ''ಈ ಮಧ್ಯೆ ಜ.15 ಹಾಗೂ 16ರಂದು ಎಲ್ಲಾ ಶಾಸಕರು, ಪರಾಜಿತ ಅಭ್ಯರ್ಥಿಗಳು ತಮ್ಮ ಕಾರ್ಯಕ್ರಮ ರದ್ದು ಮಾಡಿ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಪೂರ್ವಭಾವಿ ಸಭೆ ನಡೆಸಬೇಕು. ಈ ಸಭೆಯಲ್ಲಿ ಸಂಬಂಧಪಟ್ಟ ಎಲ್ಲಾ ಪದಾಧಿಕಾರಿಗಳು, ಉಸ್ತುವಾರಿ ಹಾಗೂ ವೀಕ್ಷಕರು ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಮಂತ್ರಿಗಳು, ಶಾಸಕರು. ಪರಿಷತ್ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು ತಮ್ಮ ಜವಾಬ್ದಾರಿ ಮುಂದುವರಿಸಬೇಕಿದೆ'' ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಕಡಿಮೆ ಸಮಯವಿದೆಯಲ್ಲವೇ ಎಂದು ಕೇಳಿದಾಗ, ''ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜ.26ರಂದು ಮಧ್ಯ ಪ್ರದೇಶದಲ್ಲಿ ಕಾರ್ಯಕ್ರಮ ಮಾಡಲು ಅಂತಿಮಗೊಳಿಸಲಾಗಿದೆ. ಉಳಿದ ದಿನಗಳು ಬೇರೆ ಕಾರ್ಯಕ್ರಮಗಳನ್ನು ನಡೆಸಲು ಸೂಚನೆ ನೀಡಲಾಗಿದೆ. ಇನ್ನು 15 ದಿನಗಳ ಕಾಲಾವಕಾಶವಿದ್ದು, ಶಾಸಕರು, ಸಚಿವರು ಸೇರಿ ಸಿದ್ಧತೆ ಮಾಡಲಾಗುವುದು'' ಎಂದು ತಿಳಿಸಿದರು.

ಒಬಾಮಾ ಆಗಮನ?: ಆ ಕಾರ್ಯಕ್ರಮಕ್ಕೆ ಅಮೆರಿಕ ಮಾಜಿ ಅಧ್ಯಕ್ಷ ಒಬಾಮಾ ಅವರು ಆಗಮಿಸುತ್ತಾರಾ ಎಂದು ಕೇಳಿದಾಗ, "ಗಾಂಧಿ ಭಾರತ ಕಾರ್ಯಕ್ರಮವನ್ನು ಇಡೀ ವರ್ಷ ಆಚರಣೆ ಮಾಡಲಾಗುವುದು. ಅವರನ್ನು ಪಕ್ಷದ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಆಗುವುದಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಅವರ ಜೊತೆ ಚರ್ಚಿಸಿ ಮುಂದೆ ಮಾಹಿತಿ ನೀಡಲಾಗುವುದು'' ಎಂದರು.

ಶಾಸಕಾಂಗ ಪಕ್ಷದ ಸಭೆ ಕರೆದಿರುವುದೇಕೆ ಎಂಬ ಪ್ರಶ್ನೆಗೆ, ''ಗಾಂಧೀಜಿ ಮೌಲ್ಯಗಳನ್ನು ಉಳಿಸಲು, ಗಾಂಧಿ, ಅಂಬೇಡ್ಕರ್ ಮೌಲ್ಯಗಳು, ಸಂವಿಧಾನ ರಕ್ಷಣೆ ಮಾಡಬೇಕಲ್ಲವೇ. ನಮ್ಮ ಪಕ್ಷದ ಆಚಾರ ವಿಚಾರ ಪ್ರಚಾರ ಮಾಡಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಜಾರಿಯಾದ ಕಾರಣ ನಾವು ಸಚಿವರಾಗಿದ್ದೇವೆ. ಮಾಧ್ಯಮಗಳಿಗೂ ಸ್ವಾತಂತ್ರ್ಯ ಸಿಕ್ಕಿದೆ. ಮುಂದಿನ ಪೀಳಿಗೆ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ತಿಳಿಸಬೇಕಲ್ಲವೇ. ಹೀಗಾಗಿ ಸಭೆ ಮಾಡುತ್ತೇವೆ'' ಎಂದರು.

ಜ‌.21ರ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಭಾಗವಹಿಸುತ್ತಾರಾ ಎಂಬುದಕ್ಕೆ, ''ಈ ಕಾರ್ಯಕ್ರಮಕ್ಕೆ ಯಾರೆಲ್ಲಾ ಆಗಮಿಸಲಿದ್ದಾರೆ ಎಂದು ದೆಹಲಿಯಿಂದಲೇ ಪಟ್ಟಿ ರವಾನೆಯಾಗಲಿದೆ. ಅದು ಬಂದ ನಂತರ ಮಾಹಿತಿ ನೀಡಲಾಗುವುದು'' ಎಂದು ತಿಳಿಸಿದರು.

ಪಕ್ಷದಲ್ಲಿನ ಬಿಕ್ಕಟ್ಟು ಶಮನಕ್ಕೆ ಸಿಎಲ್​ಪಿ ಸಭೆ ಮಾಡಲಾಗುವುದೇ ಎಂದು ಕೇಳಿದಾಗ, ''ನಮ್ಮಲ್ಲಿ ಯಾರಿಗೂ ಬಿಕ್ಕಟ್ಟಿಲ್ಲ. ಬಿಕ್ಕಟ್ಟಿದ್ದರೆ ನಿಮ್ಮಲ್ಲೇ (ಮಾಧ್ಯಮದವರಿಗೆ) ಇರಬೇಕು. ನಮ್ಮಲ್ಲಿ ಬಿಕ್ಕಟ್ಟಿದೆ ಎಂದು ಹೇಳಿದವರು ಯಾರು?'' ಎಂದರು.

ಅಧಿಕಾರ ಹಂಚಿಕೆ ಬಗ್ಗೆ ಬೇರೆ ಬೇರೆ ಹೇಳಿಕೆಗಳು ಕೇಳಿಬರುತ್ತಿವುದಕ್ಕೆ, ''ಯಾವ ಹೇಳಿಕೆಯೂ ಇಲ್ಲ. ಕಾಂಗ್ರೆಸ್ ಕಚೇರಿಯಲ್ಲಿ ನಾನು, ಸರ್ಕಾರದ ವಿಚಾರದಲ್ಲಿ ಸಿಎಂ ಅವರ ಹೇಳಿಕೆಯೇ ಅಂತಿಮ. ಬೇರೆ ಹೇಳಿಕೆಗಳಿಗೆ ಬೆಲೆ ಇರುವುದಿಲ್ಲ'' ಎಂದು ಸ್ಪಷ್ಟಪಡಿಸಿದರು.

ಡಿನ್ನರ್ ಮೀಟಿಂಗ್ ರದ್ದು ಮಾಡಲು ದಲಿತ ವಿರೋಧಿಗಳೇ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ, ''ನನಗೆ ಆ ವಿಚಾರವಾಗಿ ಗೊತ್ತಿಲ್ಲ. ಅದನ್ನು ತಿಳಿದುಕೊಂಡು ನಿಧಾನವಾಗಿ ಉತ್ತರಿಸುತ್ತೇನೆ'' ಎಂದು ತಿಳಿಸಿದರು.

d k shivakumar
ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ (ETV Bharat)

ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಅವರ ಹೇಳಿಕೆಗೆ, ''ಈ ವಿಚಾರವಾಗಿ ಮಾತನಾಡಲು ಪ್ರತ್ಯೇಕವಾಗಿ ಮತ್ತೊಂದು ಸುದ್ದಿಗೋಷ್ಠಿ ನಡೆಸಿ ಉತ್ತರ ನೀಡುತ್ತೇನೆ. ಯಾರೆಲ್ಲಾ ಏನೇನು ಹೇಳಿದ್ದಾರೆ ಎಂದು ನೀವು ಪಟ್ಟಿ ಮಾಡಿಕೊಂಡಿರಿ, ಎಲ್ಲರಿಗೂ ಉತ್ತರ ನೀಡುತ್ತೇನೆ. ಅವರಿಗೆ ಹೊಸ ವರ್ಷದ ಸಂದರ್ಭದಲ್ಲಿ ಒಳ್ಳೆಯದಾಗಿಲಿ ಎಂದು ಶುಭ ಕೋರುತ್ತೇನೆ. ಅವರಿಗೆ ಸೂಜಿ ದಾರ ಕಳುಹಿಸಿಕೊಡುತ್ತೇನೆ. ಮೊದಲು ಅವರು ತಮ್ಮ ಒಡೆದ ಮನೆಯನ್ನು ಒಲಿದುಕೊಳ್ಳಲಿ'' ಎಂದರು.

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ದೆಹಲಿಯಲ್ಲಿ ಗ್ಯಾರಂಟಿ ಯೋಜನೆ ಘೋಷಣೆ ಮಾಡಿರುವುದು ಯಶಸ್ವಿಯಾಗಲಿದೆಯೇ ಎಂಬ ಪ್ರಶ್ನೆಗೆ, ''ನಾನು ಕಾಂಗ್ರೆಸ್ ಪಕ್ಷದ ನಾಯಕನಾಗಿ ಹಾಗೂ ಸದಸ್ಯನಾಗಿ ದೆಹಲಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಪ್ಯಾರಿ ದೀದಿ ಯೋಜನೆ ಘೋಷಣೆ ಮಾಡಲಾಗಿದೆ. ಪ್ರಿಯಾಂಕಾ ಗಾಂಧಿ ಅವರು ಇಲ್ಲಿಗೆ ಬಂದು ಹೇಗೆ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದರೋ ಅದೇ ರೀತಿ ನಾನು ಅಲ್ಲಿ ಯೋಜನೆ ಘೋಷಿಸಿದ್ದೇನೆ. ಜನ ಬದಲಾವಣೆ ತಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ನಮಗಿದೆ'' ಎಂದು ಹೇಳಿದರು.

ಇದನ್ನೂ ಓದಿ: 'ಗಾಂಧಿ ಭಾರತ' ಹೆಸರಿನಲ್ಲಿ‌ ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ - SIDDARAMAIAH

ಇದನ್ನೂ ಓದಿ: ವರ್ಷವಿಡೀ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಆಂದೋಲನ: ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ - CONGRESS WORKING COMMITTEE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.