ETV Bharat / state

ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಪ್ರಜ್ವಲ್ ರೇವಣ್ಣ - anticipatory bail - ANTICIPATORY BAIL

ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ.

High Court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 12, 2024, 10:03 PM IST

ಬೆಂಗಳೂರು : ಅತ್ಯಾಚಾರ ಆರೋಪದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪ್ರಜ್ವಲ್ ರೇವಣ್ಣ ಹಿಂಪಡೆದಿದ್ದಾರೆ.

ಎಸ್ಐಟಿ ಪೊಲೀಸರು ದಾಖಲಿಸಿರುವ ಎಫ್ಐಆರ್​ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮ ಕುಮಾರ್ ಅವರು, ಮೇ 31 ರಂದು ಪ್ರಜ್ವಲ್ ಬಂಧನದ ಹಿನ್ನೆಲೆ ಅರ್ಜಿಯು ಅನೂರ್ಜಿತಗೊಂಡಿದೆ ಎಂದು ಪ್ರಜ್ವಲ್ ಜೂನ್ 12 ರಂದು ವಿಚಾರಾಣಾಧೀನ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿದ್ದಾರೆ.

ಹೀಗಾಗಿ, ಅವರು ಈಗ ಹೈಕೋರ್ಟ್​ಗೆ ನಿರೀಕ್ಷಣಾ ಜಾಮೀನು ಹೇಗೆ ಕೋರಲಾಗುತ್ತದೆ? ಹೀಗಾಗಿ, ಅರ್ಜಿಯು ಊರ್ಜಿತವಾಗುವುದಿಲ್ಲ ಎಂದರು. ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ತಾವು ನಿರ್ಧರಿಸಿದ್ದೇವೆ. ಇದನ್ನು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ಪೀಠವು ಅರ್ಜಿ ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು. ಅಲ್ಲದೇ, ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವ ಸ್ವಾತಂತ್ರ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಆಗ ಪೀಠವು ಕಾನೂನಿನಡಿ ಲಭ್ಯವಿರುವ ಎಲ್ಲಾ ಸ್ವಾತಂತ್ರ್ಯವೂ ಅರ್ಜಿದಾರರಿಗೆ ಮುಕ್ತವಾಗಿರಲಿದೆ ಎಂದಿತು.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಸಿಐಡಿಯ ಸೈಬರ್ ಅಪರಾಧ ವಿಭಾಗದ ಪೊಲೀಸರು ವಿವಿಧ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿದ್ದರು.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ - Prajwal Revanna

ETV Bharat Logo

Copyright © 2025 Ushodaya Enterprises Pvt. Ltd., All Rights Reserved.