ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಿಶೇಷ ತನಿಖಾ ತಂಡದ (ಎಸ್‍ಐಟಿ) ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದು, ಪ್ರಜ್ವಲ್ ರೇವಣ್ಣ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಇದನ್ನೂ ಓದಿ: ಅಸಹಜ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್ ರೇವಣ್ಣ ಜು.1ರ ವರೆಗೆ ಸಿಐಡಿ ವಶಕ್ಕೆ - MLC Suraj Revanna Case