ETV Bharat / state

ಎತ್ತಿನಹೊಳೆ ಯೋಜನೆ ಏತ ಕಾಮಗಾರಿಗಳ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ - Yettinahole Project - YETTINAHOLE PROJECT

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಏತ ಕಾಮಗಾರಿಗಳ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ.

ಎತ್ತಿನ ಹೊಳೆ ಯೋಜನೆ
ಎತ್ತಿನ ಹೊಳೆ ಯೋಜನೆ (ETV Bharat)
author img

By ETV Bharat Karnataka Team

Published : Aug 23, 2024, 5:27 PM IST

ಬೆಂಗಳೂರು: ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಏತ ಕಾಮಗಾರಿಗಳ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ಇಂದು ಯಶಸ್ವಿಯಾಗಿ ನೆರವೇರಿತು.

ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ಪಶ್ಚಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿಎಂಸಿ ಪ್ರಮಾಣದ ಪ್ರವಾಹದ ನೀರನ್ನು 7 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ (Projected Population For 2023-24) ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸುವುದು.

ಜೊತೆಗೆ, 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿಎಂಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ. 50% ರಷ್ಟು ತುಂಬಿಸಿ ಅಂತರ್ಜಲ ಮರುಪೂರಣ ಮಾಡುವ 23,251.66 ಕೋಟಿ ರೂ.ಗಳ ಮೊತ್ತದ ಉದ್ದೇಶಿತ ರಾಜ್ಯದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದೆ ಎಂದಿದ್ದಾರೆ

2014ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ ವಿಯರ್ 1,4&5 ರಿಂದ ನೀರನ್ನೆತ್ತಿ (ಒಟ್ಟಾರೆ 35.50 ಕ್ಯುಮೆಕ್ಸ್) ವಿತರಣಾ ತೊಟ್ಟಿ-3ರ ವರೆಗೆ (Delivery Chamber-3) ಪೂರೈಸಿ ತದನಂತರ ವಿತರಣಾ ತೊಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ-4 ರ ಮುಖಾಂತರ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ.

ಗುರುತ್ವ ಕಾಲುವೆಯು ಒಟ್ಟು 252.61 ಕಿ.ಮೀ ಉದ್ದವಿದ್ದು, ಈ ಪೈಕಿ 42 ಕಿ.ಮೀ ವರಗಿನ ಕಾಮಗಾರಿಗಳು ಪೂರ್ಣಗೊಂಡಿದ್ದು, ನಂತರದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿರದ ಕಾರಣ, ಗುರುತ್ವ ಕಾಲುವೆಯ 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 132.50 ಕಿ.ಮೀ ದೂರದಲ್ಲಿರುವ ವಾಣ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದರನ್ವಯ ನವೆಂಬರ್-2023 ರಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್ 4&5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ-3 ರವರೆಗೆ ನೀರನ್ನು ಪೂರೈಸಲಾಗಿತ್ತು. ಪ್ರಸ್ತುತ ಇವುಗಳ ಜೊತೆ ವಿಯರ್-1 ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟಿ 4 ರವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ 20.08.2024 ರಂದು ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವ ಕಾಲುವೆಯಲ್ಲಿನ ನೀರು 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ.

ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್‌ಗಳಿಂದ ಸೆಪ್ಟಂಬರ್ 5ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಪ್ರಸ್ತುತ ಪ್ರಗತಿಯಲ್ಲಿರುವ ಪೂರ್ವ ಪರೀಕ್ಷಾರ್ಥ ಚಟುವಟಿಗಳನ್ನು ಪೂರ್ಣಗೊಳಿಸಿ, ಶೀಘ್ರದಲ್ಲಿಯೇ ಅಧಿಕೃತವಾಗಿ ಮುಖ್ಯಮಂತ್ರಿಗಳ ಹಾಗೂ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಯೋಜನೆಯ ಕಾಮಗಾರಿಗಳಿಗೆ ಪ್ರಾಯೋಗಿಕ ಚಾಲನೆ ನೀಡಿ ರಾಜ್ಯಕ್ಕೆ ಸಮರ್ಪಿಸಲಾಗುವುದು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಜುಲೈ 2024ರ ಅಂತ್ಯದವರೆಗೆ ಒಟ್ಟಾರೆ ಸಂಚಿತ 16,152.05 ಕೋಟಿ ರೂ. ಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, ಯೋಜನೆಯನ್ನು 2026-27ನೇ ಸಾಲಿನಲ್ಲಿ 31.03.2027ರ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಎತ್ತಿನಹೊಳೆ ಯೋಜನೆಯ ಜಲಾನಯನ ಪ್ರದೇಶದಲ್ಲಿ ನಿರ್ಮಿಸಲಾಗಿರುವ 8 ವಿಯರ್‌ಗಳ ಹತ್ತಿರ ನೀರಿನ ಹರಿವನ್ನು ನಿಖರವಾಗಿ ಅಳೆಯುವ ಉದ್ದೇಶದಿಂದ (Real Time Discharge Measurement) ಜರ್ಮನ್ ತಂತ್ರಜ್ಞಾನವನ್ನೊಳಗೊಂಡ Telemetry ವ್ಯವಸ್ಥೆಯನ್ನು 2018 ರಲ್ಲಿ ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರಿನ ಹಂಗಾಮಿನಲ್ಲಿ ಜೂನ್ 1 ರಿಂದ ಆಗಸ್ಟ್ 20 ರವರೆಗೆ 13.34 ಟಿಎಂಸಿ ನೀರು ದಾಖಲಾಗಿರುವ ಪೈಕಿ ತಿರುವುಗೊಳಿಸಬಹುದಾದಂತಹ ನೀರಿನ ಪ್ರಮಾಣ 9.23 ಟಿಎಂಸಿ ಗಳಾಗಿರುತ್ತದೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದ 10 ಪ್ರಮುಖ ನದಿಗಳು ಕಲುಷಿತ​! ಹಸಿರು ನ್ಯಾಯಮಂಡಳಿಗೆ ಪ್ರಮಾಣಪತ್ರ ಸಲ್ಲಿಕೆ - River Pollution

ETV Bharat Logo

Copyright © 2025 Ushodaya Enterprises Pvt. Ltd., All Rights Reserved.