ETV Bharat / state

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ; ಮತ ಎಣಿಕೆಗೆ ಕ್ಷಣಗಣನೆ - ಯಾರಿಗೆ ವಿಜಯಮಾಲೆ? - CHANNAPATNA BY ELECTION COUNTING

ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆದಿದೆ.

C.P. Yogeshwar and Nikhil Kumaraswamy
ಸಿ ಪಿ ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Nov 22, 2024, 9:26 PM IST

Updated : Nov 22, 2024, 10:56 PM IST

ರಾಮನಗರ : ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕಾ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಮನಗರದ ಅರ್ಚಕರಹಳ್ಳಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು.

ಶುಕ್ರವಾರ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳ ಸಮಕ್ಷಮದಲ್ಲಿ ಶನಿವಾರ (ನ. 23ರಂದು) ಬೆಳಗ್ಗೆ 6.45ಕ್ಕೆ ಮತಯಂತ್ರಗಳನ್ನಿಟ್ಟಿರುವ ಸ್ಟ್ರಾಂಗ್ ರೂಂ ಅನ್ನು ತೆರೆಯಲಾಗುವುದು. 7.30 ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಪ್ರಾರಂಭಿಸಲಾಗುವುದು. ಬೆಳಗ್ಗೆ 8 ಗಂಟೆಗೆ ಇವಿಎಂ ಯಂತ್ರಗಳಲ್ಲಿ ಮತ ಎಣಿಕೆ ಆರಂಭವಾಗಲಿದೆ. ಒಟ್ಟಾರೆ 20 ಸುತ್ತುಗಳಲ್ಲಿ ಮತ ಎಣಿಕಾ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್​ ಅವರು ಮಾತನಾಡಿದರು (ETV Bharat)

ಶೇ 88.81 ರಷ್ಟು ಅತೀ ಹೆಚ್ಚು ಮತದಾನ: ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 3 ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಒಂದು ಕೊಠಡಿಯಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ. ಇನ್ನೆರಡು ಕೊಠಡಿಗಳಲ್ಲಿ ಇವಿಎಂ ಮತ ಯಂತ್ರಗಳ ಮತ ಎಣಿಕೆ ನಡೆಯಲಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,886 (ಶೇ. 88.81) ಮತಗಳು ಚಲಾವಣೆಗೊಂಡಿದೆ ಎಂದಿದ್ದಾರೆ.

14 ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿಯೊಂದು ಟೇಬಲ್‌ಗಳಿಗೂ ಎರಡು ರಾಜಕೀಯ ಪಕ್ಷದ ಏಜೆಂಟರುಗಳಿಗೆ ಪಾಸ್ ನೀಡಲಾಗಿದೆ. ಪಕ್ಷೇತರದ ಏಜೆಂಟರುಗಳಿಗೂ ಸಹ ಪಾಸ್‌ಗಳನ್ನು ನೀಡಲಾಗಿದೆ. ಟೇಬಲ್‌ವೈಸ್ ರಾಂಡಮ್ ಆಗಿ 27 ಜನರಿಗೆ ಪಾಸ್‌ಗಳನ್ನು ನೀಡಲಾಗಿದೆ ಎಂದರು.

ಮತ ಎಣಿಕೆಗೆ 69 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 250 ಜನ ಏಜೆಂಟರುಗಳು ಇರುತ್ತಾರೆ. ಬಿಗಿಯಾದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅಂದು ಜಿಲ್ಲೆಯಾದ್ಯಂತ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆಯ ಸೆಕ್ಷನ್ 163ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

channapatna-assembly
ಚನ್ನಪಟ್ಟಣ ಕ್ಷೇತ್ರದಲ್ಲಿ ಗೆಲುವಿನ ಪಟ್ಟಿ (ETV Bharat)

ಜಿದ್ದಾಜಿದ್ದಿ ಕಣವಾಗಿರುವ ಬೊಂಬೆನಗರಿ ಚನ್ನಪಟ್ಟಣ ಕ್ಷೇತ್ರ - ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಸೋಲು ಗೆಲುವಿನ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದು, ಕಾಂಗ್ರೆಸ್‍ನಿಂದ ಮಾಜಿ ಸಚಿವ ಸಿ. ಪಿ ಯೋಗೇಶ್ವರ್ ಹಾಗೂ ಎನ್‍ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇವರಿಬ್ಬರಲ್ಲಿ ಯಾರು ಗೆಲುವಿನ ನಗೆ ಬೀರಲಿದ್ದಾರೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಸಾಕಷ್ಟು ಆರೋಪ, ಪ್ರತ್ಯಾರೋಪ, ಜಿದ್ದಾಜಿದ್ದಿ, ಹಣದ ಹೊಳೆಯನ್ನು ಕಂಡಿದ್ದ ಚುನಾವಣೆಯಲ್ಲಿ ಮತದಾರ ಯಾರ ಪರ ಮತಚಲಾಯಿಸಿದ್ದಾನೆ ಎಂಬುದು ಒಂದು ಕಡೆಯಾದರೆ, ಎರಡು ಪಕ್ಷದವರು ತಮ್ಮ ಅಭ್ಯರ್ಥಿಯ ಪರ ಬಾಜಿ ಕಟ್ಟುವಲ್ಲಿ ನಿರತರಾಗಿದ್ದಾರೆ.

ಕ್ಷೇತ್ರದಲ್ಲಿ ಜಾತಿವಾರು ಲೆಕ್ಕಾಚಾರ ಹೇಗಿದೆ: ಕ್ಷೇತ್ರದಲ್ಲಿ ಒಟ್ಟು 2,17,573 ಮತದಾರರಿದ್ದಾರೆ. ಈ ಪೈಕಿ 1,06,535 ಪುರುಷರು, ಹಾಗೂ 1,11,029 ಮಹಿಳಾ ಮತದಾರರಿದ್ದರೆ ಇತರ ವರ್ಗದಲ್ಲಿ 9 ಜನ ಮತದಾರರ ಹೆಸರು ದಾಖಲಾಗಿದೆ.

ಒಕ್ಕಲಿಗ ಮತದಾರರ ಬಲ ಹೊಂದಿರುವ ಈ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ಎರಡನೇ ಸ್ಥಾನದಲ್ಲಿದ್ದರೆ ದಲಿತರು ಮೂರನೇ ಸ್ಥಾನದಲ್ಲಿದ್ದು ಈ ಮತಗಳೇ ನಿರ್ಣಾಯಕವಾಗಿವೆ. ಜಾತಿ ಲೆಕ್ಕಾಚಾರದಲ್ಲಿ ನೋಡುವುದಾದರೆ, ಒಕ್ಕಲಿಗರು 1,05,000, ಪರಿಶಿಷ್ಟ ಜಾತಿಯ 40,000, ಮುಸ್ಲಿಂ ಸಮುದಾಯದ 35,000, ಲಿಂಗಾಯತರ 11,000, ಹಾಗೂ ಕುರುಬರು 8,000 ಇದ್ದರೆ, ಇತರೆ ವರ್ಗದ 31,000 ಮತಗಳಿವೆ. ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿರುವುದು ಈ ಕ್ಷೇತ್ರದ ವೈಶಿಷ್ಟ್ಯ. ಅವರೇ ಹೆಚ್ಚು ಮತದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಮೂರು ಚುನಾವಣೆಯಲ್ಲಿ ಏನೇನಾಯಿತು; 2011ರ ಚುನಾವಣೆಯಲ್ಲಿ ಬಿಜೆಪಿಯ ಸಿ ಪಿ ಯೋಗೇಶ್ವರ್ ಜೆಡಿಎಸ್‌ನ ಎಸ್‌ ಎಲ್‌ ನಾಗರಾಜು ವಿರುದ್ಧ ಜಯ ಗಳಿಸಿದ್ದರು. ಈ ಚುನಾವಣೆಯಲ್ಲಿ ಯೋಗೇಶ್ವರ್‌ 75,275 ಮತ ಪಡೆದುಕೊಂಡಿದ್ದರು. ಹತ್ತಿರದ ಸ್ಪರ್ಧಿ 57,472 ಮತಗಳನ್ನು ಗಳಿಸಿ 17,803 ಮತಗಳಿಂದ ಸೋಲು ಅನುಭವಿಸಿದ್ದರು.

ಇನ್ನು 2013ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಸಿ ಪಿ ಯೋಗೇಶ್ವರ್‌, ತಮ್ಮ ಎದುರಾಳಿ ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ ಎದುರು 6,464 ಮತಗಳ ಅಲ್ಪ ಅಂತರದಿಂದ ಜಯ ಪಡೆದು ಅಚ್ಚರಿ ಮೂಡಿಸಿದ್ದರು. ಈ ಚುನಾವಣೆಯಲ್ಲಿ ಯೋಗೇಶ್ವರ್‌ 80,099ಮತ ಪಡೆದರೆ, ಅನಿತಾ ಕುಮಾರಸ್ವಾಮಿ, 73,635 ವೋಟು ಪಡೆದುಕೊಂಡಿದ್ದರು.

2018ರ ಚುನಾವಣೆಯ ಹಣಾಹಣಿ ವೇಳೆಗೆ ಮರಳಿ ಪಕ್ಷ ಬದಲಾವಣೆ ಮಾಡಿದ್ದ ಯೋಗೇಶ್ವರ್‌ ಬಿಜೆಪಿ ಸೇರಿ ಕಣಕ್ಕಿಳಿದಿದ್ದರು. ಈ ಚುನಾವಣೆಯಲ್ಲಿ ಜೆಡಿಎಸ್‌ನ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಎದುರು ಸ್ಪರ್ಧಿಸಿ ಸೋಲನ್ನಪ್ಪಿದ್ದರು. ಇಲ್ಲಿ ಕುಮಾರಸ್ವಾಮಿ 87,995 ಮತಗಳನ್ನು ಪಡೆದಿದ್ದರೆ, ಯೋಗೇಶ್ವರ್‌ 66465 ಮತಗಳನ್ನು ಗಳಿಸಿದ್ದರು. ಪ್ರತಿಷ್ಠೆಯ ಪೈಪೋಟಿಯಲ್ಲಿ ಯೋಗೇಶ್ವರ್‌ 21,530 ವೋಟುಗಳ ಅಂತರದಿಂದ ಸೋಲು ಅನುಭವಿಸಿದ್ದರು.

2023 ರ ಚುನಾವಣೆಯಲ್ಲೂ ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ ಸೋಲು ಅನುಭವಿಸಿದ್ದರು. ಇದೀಗ ಮತ್ತೆ ಯೋಗೇಶ್ವರ್​​ ಉಪಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಬಾರಿ ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರು ಯೋಗೇಶ್ವರ್ ಎದುರಾಳಿಯಾಗಿದ್ದಾರೆ.

ಇದನ್ನೂ ಓದಿ : ನಾಳೆ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ: ಯಾರಿಗೆ ಗೆಲುವು, ಯಾರಿಗೆ ಸೋಲು, ಹೀಗಿದೆ ರಾಜಕೀಯ ನಾಯಕರ ಲೆಕ್ಕಾಚಾರ!

Last Updated : Nov 22, 2024, 10:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.