ETV Bharat / state

ಪೆನ್​ಡ್ರೈವ್​ ಹಂಚಿಕೆ ಆರೋಪ: ಎಫ್​ಐಆರ್​ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಪ್ರೀತಂ ಗೌಡ - PEN DRIVE SHARING CASE

ಪೆನ್‌ಡ್ರೈವ್‌ ಹಂಚಿಕೆ ಆರೋಪ ಸಂಬಂಧ ದಾಖಲಾದ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಹಿಂಪಡೆದಿದ್ದಾರೆ.

preetham gowda
ಹೈಕೋರ್ಟ್‌, ಪ್ರೀತಂ ಗೌಡ (ETV Bharat)
author img

By ETV Bharat Karnataka Team

Published : Nov 28, 2024, 9:45 PM IST

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮೇಲಿನ ಲೈಂಗಿಕ ಹಗರಣ ಪ್ರಕರಣದ ಕುರಿತಾದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಹಿಂಪಡೆದರು.

ಈ ಸಂಬಂಧ ವಿಚಾರಣೆ ವೇಳೆ ಪ್ರೀತಂ ಗೌಡ ಪರವಾಗಿ ವಕಾಲತ್ತು ಹಾಕಿದ್ದ ಸಂದೀಪ್‌ ಪಾಟೀಲ್‌, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಅರ್ಜಿ ಹಿಂಪಡೆಯುವ ಕುರಿತು ಮೆಮೊ ಸಲ್ಲಿಕೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದರೆ ಅದನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಮುಕ್ತವಾಗಿರಿಸಿ, ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು.

ಪ್ರಕರಣದ ಹಿನ್ನೆಲೆ: ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್‌ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 354ಎ, 354ಡಿ, 354ಬಿ ಮತ್ತು 506ರ ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ಗಳಾದ 67, 66ಇ ಅಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನು ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದೆ. ಇದರ ರದ್ಧತಿ ಕೋರಿ ಪ್ರೀತಂ ಗೌಡ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ: ದರ್ಶನ್​ ಶಸ್ತ್ರಚಿಕಿತ್ಸೆ ಕುರಿತು ಈವರೆಗೂ ವೈದ್ಯರು ನಿರ್ಧರಿಸಿಲ್ಲ- ವಕೀಲರ ವಾದ: ವಿಚಾರಣೆ ನಾಳೆಗೆ ಮುಂದೂಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.