ETV Bharat / state

ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವಕ್ಕೆ ಭರ್ಜರಿ ಸಿದ್ಧತೆ - CONGRESS SESSION CENTENARY PROGRAM

1924ರಲ್ಲಿ ಡಿ. 26ರ ಮಧ್ಯಾಹ್ನ 3 ಗಂಟೆಗೆ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ನಡೆದಿತ್ತು. ಅದೇ ಸಮಯದಲ್ಲಿ ನಾಳೆ ಕೂಡ ಕಾಂಗ್ರೆಸ್​ ​ಕಾರ್ಯಕಾರಿ ಸಮಿತಿ ಸಭೆ ಜರುಗಲಿದೆ.

CONGRESS SESSION CENTENARY PROGRAM
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವಕ್ಕೆ ಸಿದ್ಧತೆ (ETV Bharat)
author img

By ETV Bharat Karnataka Team

Published : 12 hours ago

ಬೆಂಗಳೂರು/ಬೆಳಗಾವಿ: ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮಕ್ಕೆ ಕುಂದಾನಗರಿಯಲ್ಲಿ ಭರದ ಸಿದ್ಧತೆ ನಡೆದಿದೆ.

ಕಾಂಗ್ರೆಸ್ ಅಧಿವೇಶನದ ಚಿತ್ರ ಪ್ರದರ್ಶನ: ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದೆ. ದೇಶ, ರಾಜ್ಯದ ವಿವಿಧ ಭಾಗಗಳಿಂದ ಅಂದಾಜು 1.50 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಬೆಳಗಾವಿಯ ಗಲ್ಲಿ ಗಲ್ಲಿಗಳಲ್ಲಿ ಮಹಾತ್ಮಗಾಂಧಿ ಹೆಜ್ಜೆ ಗುರುತುಗಳನ್ನು ನೆನಪಿಸುವ ಸ್ವಾತಂತ್ರ್ಯ ಹೋರಾಟದ ಸನ್ನಿವೇಶವನ್ನು ಜನರಿಗೆ ಪರಿಚಯಿಸುವ ಕೆಲಸ ನಡೆಯುತ್ತಿದೆ. ಮತ್ತೊಂದೆಡೆ ವೃತ್ತಗಳು, ಮುಖ್ಯರಸ್ತೆಗಳು, ದ್ವಾರಗಳಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಚಿತ್ರ ಪ್ರದರ್ಶಿಸಲಾಗಿದೆ.

CONGRESS SESSION CENTENARY PROGRAM
ಸಿದ್ಧತೆ ಪರಿಶೀಲಿಸುತ್ತಿರುವ ಕಾಂಗ್ರೆಸ್​ ನಾಯಕರು (ETV Bharat)

ನಗರದ ಸಿಪಿಎಡ್ ಮೈದಾನದಲ್ಲಿ ಡಿ.27ರಂದು ನಡೆಯಲಿರುವ ಸಮಾವೇಶದಲ್ಲಿ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು ಸೇರಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸುವ ಅಂದಾಜು 1.50 ಲಕ್ಷ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ದೂರದ ಊರುಗಳಿಂದ ಬರುವವರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ 5 ಸಾವಿರಕ್ಕೂ ಅಧಿಕ ಜನರಿಗೆ ವಸತಿ ವ್ಯವಸ್ಥೆ ಇರಲಿದೆ.

ಗಣ್ಯರಿಗೆ ವಿಶೇಷ ಆತಿಥ್ಯ: ಡಿ.26ರಂದು ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಭೆಗೆ ಆಗಮಿಸುತ್ತಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ನಾಲ್ಕು ರಾಜ್ಯದ ಮುಖ್ಯಮಂತ್ರಿಗಳು, 150 ಸಂಸದರು ಸೇರಿ ಸುಮಾರು 215 ಗಣ್ಯರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ.

ಭದ್ರತೆಗೆ 10 ಸಾವಿರ ಪೊಲೀಸರು: ರಾಜ್ಯ ಸರ್ಕಾರದ ಹತ್ತು ಸಚಿವರಿಗೆ ಉಸ್ತುವಾರಿ ವಹಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಈ ಎಲ್ಲ ನಾಯಕರ ಆಗಮನದ ಹಿನ್ನೆಲೆಯಲ್ಲಿ ಸರ್ಕಾರ ಭದ್ರತೆಗೆ 10 ಸಾವಿರ ಪೊಲೀಸರನ್ನು ನಿಯೋಜಿಸಿದೆ.

ಗುರುವಾರ (ಡಿ. 26ರಿಂದ) ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. ನಾಳೆ ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಜರುಗಲಿದೆ.

ಡಿ.27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: 1924ರ ಬೆಳಗಾವಿ ಕಾಂಗ್ರೆಸ್​ ಅಧಿವೇಶನಕ್ಕೆ 100 ವಸಂತ: 'ಕೈ'ನಿಂದ ನವ ಸತ್ಯಾಗ್ರಹ ಬೈಠಕ್​

ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರತಿಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಹೇಳಿದ್ದಾರೆ.

ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಮುಖ 500ರಿಂದ 600 ಮಂದಿ ಕಾಂಗ್ರೆಸ್ ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಗಾಂಧೀಜಿ ಪುತ್ಥಳಿ ಉದ್ಘಾಟನೆಗೆ ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.