ETV Bharat / state

ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷವನ್ನು ಎದುರಿಸಲು ಸರ್ವ ರೀತಿಯಲ್ಲೂ ನಾವು ಸಜ್ಜು: ಸಚಿವ ಡಾ.ಎಂ.ಸಿ.ಸುಧಾಕರ್​ - M C SUDHAKAR

ವಿರೋಧ ಪಕ್ಷಗಳು ವಿನಾಕಾರಣ ಸರ್ಕಾರದ ಬಳಿ ಅಭಿವೃದ್ಧಿಗೆ ದುಡ್ಡಿಲ್ಲ ಅಂತಿವೆ. ಆದರೆ, ನಿರಂತರವಾಗಿ ನಮ್ಮ ಕಾರ್ಯಕ್ರಮಗಳನ್ನು ಕೊಡುತ್ತಿದ್ದೇವೆ. ನಮ್ಮ ಬಜೆಟ್ ಗಾತ್ರ 3 ಲಕ್ಷ 71 ಸಾವಿರ ಕೋಟಿ ಇದೆ- ಸಚಿವ ಡಾ.ಎಂ.ಸಿ.ಸುಧಾಕರ್​.

ಸಚಿವ ಡಾ.ಎಂ.ಸಿ.ಸುಧಾಕರ್​
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ (ETV Bharat)
author img

By ETV Bharat Karnataka Team

Published : Dec 3, 2024, 10:54 PM IST

ಬೆಳಗಾವಿ: ವಿರೋಧ ಪಕ್ಷದವರು ಹತಾಶರಾಗಿ ಮುಖ್ಯಮಂತ್ರಿ ಮತ್ತು ಇತರರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಸರ್ಕಾರದ ಆಡಳಿತದ ಅವಧಿಯಲ್ಲಿನ ವಕ್ಫ್ ಸೇರಿ ಮತ್ತಿತರ ಸಮಸ್ಯೆಗಳನ್ನು ಈಗ ಎತ್ತಿಕೊಂಡು ಸಮಾಜವನ್ನು ಜಾತಿ ಹೆಸರಿನಲ್ಲಿ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲವನ್ನೂ ಬೆಳಗಾವಿ ಅಧಿವೇಶನದಲ್ಲಿ ಸಮರ್ಥವಾಗಿ ಎದುರಿಸಲು ನಾವು ಸಜ್ಜಾಗಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದೂವರೆ ವರ್ಷದಲ್ಲಿ ನಮ್ಮ ಸರ್ಕಾರ ಮಾಡಿರುವ ಸಾಧನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಅದೇ ರೀತಿ ಹಲವು ಅಭಿವೃದ್ಧಿ ಕೆಲಸಗಳನ್ನ ಕೈಗೆತ್ತಿಕೊಂಡಿದ್ದೇವೆ. ವಿರೋಧ ಪಕ್ಷಗಳು ವಿನಾಕಾರಣ ಅಭಿವೃದ್ಧಿಗೆ ಸರ್ಕಾರದ ಬಳಿ ದುಡ್ಡಿಲ್ಲ ಅಂತಾರೆ. ಆದರೆ, ನಿರಂತರವಾಗಿ ನಮ್ಮ ಕಾರ್ಯಕ್ರಮಗಳನ್ನು ಕೊಡುತ್ತಿದ್ದೇವೆ. ನಮ್ಮ ಬಜೆಟ್ ಗಾತ್ರ 3 ಲಕ್ಷ 71 ಸಾವಿರ ಕೋಟಿ ಇದೆ ಎಂದರು.

ಸಾಮಾನ್ಯ ಕಾರ್ಯಕ್ರಮಗಳ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚುವರಿಯಾಗಿ ಹಣ ಒದಗಿಸಿದ್ದೇವೆ. ಯಾವುದೇ ಇತರೆ ಯೋಜನೆಗಳನ್ನು ನಿಲ್ಲಿಸಿ ನಾವು ಕೆಲಸ ಮಾಡುತ್ತಿಲ್ಲ. 1 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆ ಒಳಗೊಂಡಂತೆ 63 ಸಾವಿರ ಕೋಟಿ ಇತರೆ ಯೋಜನಗೆಳಿಗೆ ವ್ಯಯ ಮಾಡುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.

ಬೆಳಗಾವಿ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಆಗುತ್ತೆ ಎಂಬ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶೋಕ್​ ಅವರು ಪಾಪ ಖಾಲಿ ಕುಳಿತಿದ್ದಾರೆ. ವಿರೋಧ ಪಕ್ಷವಾಗಿ ಏನಾದರೂ ಬಾಯಿ ಬಡಿದುಕೊಳ್ಳಬೇಕು ಅಲ್ಲವೇ?. ಬಾಯಿ ಚಪಲಕ್ಕೆ ಮಾತಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ಎಂದರು. ಈಗ ಡಿಸೆಂಬರ್ ಅಂತಿದ್ದಾರೆ. ಆದರೆ, ವಸ್ತುಸ್ಥಿತಿ ಬೇರೆನೇ ಇದೆ. ಇತ್ತಿಚೆಗೆ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಯ ಗಳಿಸಿದ್ದೇವೆ. ಹಾಗಾಗಿ, ಬಿಜೆಪಿಯವರು ಎಷ್ಟೇ ಟೀಕೆ ಮಾಡಲಿ, ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸಲಿ. ನಮ್ಮ ಸರ್ಕಾರ ಮತ್ತಷ್ಟು ಸದೃಢವಾಗುತ್ತದೆ ಎಂದು ತಿರುಗೇಟು ಕೊಟ್ಟರು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಬಗ್ಗೆ ಮಾತನಾಡಿ, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರು ಬಲಿಷ್ಠರಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್​ ಮತ್ತು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಜನರಿಗೆ ನಮ್ಮ ಕಾರ್ಯಕ್ರಮ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಜನರ ವಿಶ್ವಾಸ ಉಳಿಸಿಕೊಂಡು ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು‌.

ಸಚಿವ ಡಾ.ಎಂ.ಸಿ.ಸುಧಾಕರ್​ (ETV Bharat)

ಅಂಕಪಟ್ಟಿ ಗೊಂದಲ ಬಗ್ಗೆ ಹೇಳಿದ್ದೇನು?: ತಂತ್ರಜ್ಞಾನದ ಬಳಕೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ತಂತ್ರಜ್ಞಾನದ ದುರ್ಬಳಕೆಯೂ ಅಧಿಕವಾಗುತ್ತಿದೆ. ಹೀಗಾಗಿ, ನೇಮಕಾತಿ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅಂಕಪಟ್ಟಿ ಸೇರಿದಂತೆ ಎಲ್ಲ ದಾಖಲೆಗಳನ್ನು ಪರಿಶೀಲಿಸಬೇಕಾಗುತ್ತದೆ. ವೆರಿಫಿಕೇಶನ್ ಸಂದರ್ಭದಲ್ಲಿ ತಂತ್ರಜ್ಞಾನದ ದುರ್ಬಳಕೆ ಮೂಲಕ ತಪ್ಪು ಮಾಹಿತಿ ಕೊಟ್ಟಿರುವ ಬಗ್ಗೆಯೂ ಪರಿಶೀಲನೆ ಮಾಡಬೇಕಾಗುತ್ತದೆ. ಹೀಗಾಗಿ, ನಮ್ಮ ಯುಯುಸಿಎಂಎಸ್(UUCMS) ಪೋರ್ಟಲ್​ಗೆ ವಿಶ್ವವಿದ್ಯಾಲಯವೇ ಅಂಕಪಟ್ಟಿ ಅಪ್‌ಲೋಡ್ ಮಾಡಿದಾಗ ಅದನ್ನು ಯಾರೂ ತಿದ್ದುಪಡಿ ಮಾಡಲು ಸಾಧ್ಯವಾಗುವುದಿಲ್ಲ. ಇದು ನೈಜತೆಯಿಂದ ಕೂಡಿರುವ ಸಂಗತಿ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವೇ ಹೆಚ್ಚು. ಆದರೆ, ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವಿಲ್ಲ. ಇದಕ್ಕಾಗಿ ಈ ಕುರಿತು ಅರಿವು ಮೂಡಿಸುವ ಕೆಲಸವೂ ಆಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು: ಸಚಿವ ಡಾ.ಎಂ.ಸಿ.ಸುಧಾಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.