ETV Bharat / state

ಶಕ್ತಿ ಯೋಜನೆ ಮರುಚಿಂತನೆಗೆ ಮಹಿಳೆಯರಿಂದಲೇ ಒತ್ತಡ: ಡಿ.ಕೆ.ಶಿವಕುಮಾರ್

ಕರ್ನಾಟಕ ಸಾರಿಗೆ ಸಂಸ್ಥೆಯನ್ನು ವ್ಯವಹಾರಕ್ಕಾಗಿ ಹುಟ್ಟುಹಾಕಿಲ್ಲ, ನಾಗರಿಕರ ಸೇವೆಗಾಗಿ ಮೀಸಲಿಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

DCM REACT ON SHAKTI SCHEME
ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)
author img

By ETV Bharat Karnataka Team

Published : Oct 30, 2024, 6:32 PM IST

ಬೆಂಗಳೂರು: "ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿ ಇದೆ. ಉಚಿತ ಪ್ರಯಾಣ ಬೇಡ ಎಂದು ಅನೇಕ ಹೆಣ್ಣು ಮಕ್ಕಳು ಟ್ವೀಟ್ ಹಾಗೂ ಇಮೇಲ್ ಮೂಲಕ ತಮ್ಮ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚಿಸುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಮುಂಭಾಗ ಬುಧವಾರ ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಭಾಷಣ (ETV Bharat)

"ನಾವು ಹಣ ಕೊಡಲು ಮುಂದಾದರೂ ಕಂಡಕ್ಟರ್ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ.5ರಿಂದ 10ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಹೀಗಾಗಿ, ಶೀಘ್ರದಲ್ಲೇ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇನೆ" ಎಂದರು.

"ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕೆಎಸ್​ಆರ್​ಟಿಸಿ ಸಂಸ್ಥೆ ಹೆಸರು ಮಾಡಿದೆ. ಕಳೆದ ಒಂದು ವರ್ಷದಲ್ಲಿ 112 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಸಾಧನೆಗೆ ಸಂಸ್ಥೆಯ ನೌಕರರ ಶ್ರಮ ಕಾರಣ" ಎಂದು ಹೇಳಿದರು.

"ಐರಾವತ ಎಂದರೆ ಇಂದ್ರನ ವಾಹನ, ಆನೆ. ಆನೆಯಂತೆ ಬಲಶಾಲಿ ಎಂದರ್ಥ. ಈ ಬಸ್ಸಿಗೆ 1.60 ಕೋಟಿ ರೂ ಎಂದು ವೋಲ್ವೋ ಸಂಸ್ಥೆಯವರು ಹೇಳಿದ್ದಾರೆ. ಈಗಂತೂ ನಾವು ಒಂದು ಕಾರು ತೆಗೆದುಕೊಳ್ಳಬೇಕು ಎಂದರೆ ಒಂದು ಕೋಟಿ ಮೀರುತ್ತದೆ" ಎಂದು ತಿಳಿಸಿದರು.

"ಕೆಎಸ್​ಆರ್​ಟಿಸಿ ಪ್ರಾರಂಭವಾದಾಗ ಕೇವಲ 120 ಬಸ್​ಗಳಿದ್ದವು. ಇಂದು 24,282 ಬಸ್​ಗಳಿವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6,200 ಬಸ್​ಗಳ ಖರೀದಿಗೆ ಮುಂದಾಗಿದೆ. ಇದರಲ್ಲಿ 3,400 ಬಸ್‌ಗಳನ್ನು ಖರೀದಿ ಮಾಡಲಾಗಿದೆ. ಸುಮಾರು 9 ಸಾವಿರ ಡ್ರೈವರ್ ಹಾಗೂ ಕಂಡಕ್ಟರ್​​ಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ" ಎಂದರು.

"ಅನುಕಂಪದ ಆಧಾರದ ಮೇಲೆ ಒಂದು ಸಾವಿರಕ್ಕೂ ಹೆಚ್ಚು ನೌಕರರ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ನೌಕರರ ಕುಟುಂಬದವರಿಗೆ ಒಂದು ಕೋಟಿ ರೂ. ಪರಿಹಾರ ನೀಡಲಾಗಿದೆ. ಇಡೀ ಭಾರತದಲ್ಲಿಯೇ ಇಲ್ಲದ ಅತ್ಯುತ್ತಮವಾದ ವ್ಯವಸ್ಥೆ ನಮ್ಮಲ್ಲಿದೆ" ಎಂದರು.

"ಕರ್ನಾಟಕ ಸಾರಿಗೆ ಸಂಸ್ಥೆಯನ್ನು ವ್ಯವಹಾರಕ್ಕಾಗಿ ಹುಟ್ಟುಹಾಕಿಲ್ಲ. ನಾಗರಿಕರ ಸೇವೆಗಾಗಿ ಇದನ್ನು ಮೀಸಲಿಡಲಾಗಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ, ಇಂಧನ ಬೆಲೆ ಹೆಚ್ಚಾದ ತಕ್ಷಣ ಟಿಕೆಟ್ ದರವೂ ಹೆಚ್ಚಾಗಬೇಕು ಎನ್ನುವ ನಿಯಮ ಮಾಡಲಾಗಿತ್ತು. ಸಂಸ್ಥೆಯಲ್ಲಿ ಈಗ ಶಿಸ್ತು ಬಂದಿದೆ. ಚಾಲಕರು ನಿಯಮಕ್ಕೆ ಅನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಸುಮಾರು 1.80 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ" ಎಂದರು.

ಇದನ್ನೂ ಓದಿ: ಸಿಎಂ ಆಗಿದ್ದಾಗ್ಲೇ ಚನ್ನಪಟ್ಟಣಕ್ಕೆ ಏನೂ ಮಾಡದ ಕುಮಾರಣ್ಣ ಈಗೇನು ಮಾಡ್ತಾರೆ?: ಡಿ.ಕೆ.ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.