ETV Bharat / state

ಗಾಳಿ ಆಂಜನೇಯ ದೇವಸ್ಥಾನದ ಹುಂಡಿ ಹಣ ಕಳವು; ಅರ್ಚಕ, ಟ್ರಸ್ಟಿಗಳ ವಿರುದ್ಧ ಎಫ್‌ಐಆರ್‌ - Gali Anjaneya Temple

ಬೆಂಗಳೂರು ನಗರದ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಟ್ರಸ್ಟಿ ಹಾಗೂ ಅರ್ಚಕರೇ ಹುಂಡಿ ಹಣ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Money stolen
ಹುಂಡಿ ಹಣ ಕಳವಿನ ಸಿಸಿಟಿವಿ ವಿಡಿಯೋದಿಂದ ತೆಗೆದ ಚಿತ್ರ (ETV Bharat)
author img

By ETV Bharat Karnataka Team

Published : Oct 1, 2024, 10:33 PM IST

ಬೆಂಗಳೂರು: ನಗರದ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನದ ಹುಂಡಿ ಹಣ ಎಣಿಕೆ ವೇಳೆ ಹಣ ಕದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ದೇವಾಲಯದ ಟ್ರಸ್ಟಿ ಹಾಗೂ ಅರ್ಚಕರ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ದೇವಾಲಯ ಭಕ್ತ ಮೋಹನ್ ಎಂಬವರು ನೀಡಿದ ದೂರು ಆಧರಿಸಿ ಹನುಮಂತಪ್ಪ, ನಾಗರಾಜ್, ಶ್ರೀನಿವಾಸ್ ರಾಮಾನುಜ, ಗೋಪಿನಾಥ್, ರಾಮಾನುಜ ಭಟ್ಟಾಚಾರ್ಯ ಮತ್ತು ಸುರೇಶ್ ಸೇರಿದಂತೆ ಇನ್ನಿತರರ ಮೇಲೆ ಎಫ್ಐಆರ್ ದಾಖಲಾಗಿದೆ.

ದೇವಾಲಯದ ಹುಂಡಿ ಹಣ ಎಣಿಸುವಾಗ ಹಣದ ಬಂಡಲ್​ಗಳನ್ನು ಅರ್ಚಕರು ಹಾಗೂ ಟ್ರಸ್ಟಿಗಳೇ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೆಲವು ವರ್ಷಗಳ ಹಿಂದೆ ಕೃತ್ಯವೆಸಗಿರುವುದು ತಿಳಿದುಬಂದಿದ್ದು, ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಘಟನೆ ಮುನ್ನೆಲೆಗೆ ಬಂದಿದೆ.

1984ರಿಂದ ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್ ಮಾಡಲಾಗಿದ್ದು, ಇದಕ್ಕೆ ಮೇಲಿನ ಆರೋಪಿಗಳೆಲ್ಲರೂ ಟ್ರಸ್ಟಿಗಳಾಗಿದ್ದಾರೆ. ಭಕ್ತರಿಂದ ಬರುವ ದೇಣಿಗೆ ಹಣ ಹಾಗೂ ಬೆಳ್ಳಿ ಸಾಮಗ್ರಿಯನ್ನು ದೇವಾಲಯದ ಅಭಿವೃದ್ಧಿಗೆ ಬಳಸದೇ ಸ್ವಂತ ಲಾಭಕ್ಕಾಗಿ ಉಪಯೋಗಿಸಿಕೊಂಡು ದೇವಸ್ಥಾನದ ಪ್ರಗತಿಗೆ ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ಮೂಲಕ ಭಕ್ತರು ಹಾಕುವ ಹಣವನ್ನು ಟ್ರಸ್ಟ್​ನ ಖಾತೆಗೆ ಲಿಂಕ್ ಮಾಡದೇ ಅರ್ಚಕರ ಖಾತೆಗಳಿಗೆ ಲಿಂಕ್ ಮಾಡಿಕೊಂಡು ಹಣವನ್ನು ಸ್ವಂತ ಬಳಕೆಗೆ ವಿನಿಯೋಗಿಸಿದ್ದಾರೆ. ಇದನ್ನು ಪ್ರಶ್ನಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಮೋಹನ್ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ದಿನ ಮೂರು ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ ; ಸಿಸಿಟಿವಿ ಕ್ಯಾಮರಾ ಮರೆಮಾಚಿದ ಮುಸುಕುಧಾರಿ - money stolen

ETV Bharat Logo

Copyright © 2024 Ushodaya Enterprises Pvt. Ltd., All Rights Reserved.