ETV Bharat / state

ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟನೆಗೆ ಮುಂದಾದ ಪ್ರಾಥಮಿಕ ಶಾಲಾ ಶಿಕ್ಷಕರು - Primary school teachers protest - PRIMARY SCHOOL TEACHERS PROTEST

ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

education-department
ಶಿಕ್ಷಣ ಇಲಾಖೆ (ETV Bharat)
author img

By ETV Bharat Karnataka Team

Published : Aug 11, 2024, 3:58 PM IST

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆಗೆ ಮುಂದಾಗಿದ್ದಾರೆ‌. ಆಗಸ್ಟ್​ 12 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಶಾಲಾ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

2017ರ ವೃಂದ ಮತ್ತು ನೇಮಕಾತಿ ನಿಯಮಗಳು ಅದಕ್ಕಿಂತಲೂ ಮುಂಚೆ ನೇಮಕಾತಿಗೊಂಡಿರುವ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಕಾರ್ಯಾದೇಶ ಹೊರಡಿಸಿದೆ. ಅಲ್ಲದೆ ಮೂಲತಃ 1 ರಿಂದ 7 ಹಾಗೂ 8 ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದೆ. ಸರ್ಕಾರದ ಈ ಆದೇಶದಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ.

ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016 ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು ಎಂಬುದು ಶಿಕ್ಷಕರು ಮುಂದಿಟ್ಟಿರುವ ಬೇಡಿಕೆಯಾಗಿದೆ.

ಈ ಮೊದಲಿದ್ದ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಬಡ್ತಿಗೆ ಪರಿಗಣಿಸಬೇಕು.

ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೆ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ. ಆಗಸ್ಟ್ 1 ರಿಂದ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿರುವ ಶಿಕ್ಷಕರು ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ : ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ವಿಧಾನಸೌಧ ಮುತ್ತಿಗೆ ಯತ್ನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.