ETV Bharat / state

ಪ್ರಧಾನಿ ಮೋದಿ ಆಧಾರರಹಿತ ಆರೋಪ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್​

ಪ್ರಧಾನಮಂತ್ರಿಗಳು ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರು ಈ ಆರೋಪಗಳನ್ನು ಸಾಬೀತುಪಡಿಸಲಿ. ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ತಿರುಗೇಟು ನೀಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್​
ಡಿಸಿಎಂ ಡಿ.ಕೆ. ಶಿವಕುಮಾರ್​ (ETV Bharat)
author img

By ETV Bharat Karnataka Team

Published : Nov 10, 2024, 3:19 PM IST

ಬೆಂಗಳೂರು: "ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, "ಪ್ರಧಾನಮಂತ್ರಿಗಳು ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರು ಈ ಆರೋಪಗಳನ್ನು ಸಾಬೀತುಪಡಿಸಲಿ. ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ. ಕೇಂದ್ರ ಸಚಿವರುಗಳು ಯಾವ್ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು" ಎಂದು ತಿರುಗೇಟು ನೀಡಿದರು.

ಡಿಸಿಎಂ ಡಿ.ಕೆ. ಶಿವಕುಮಾರ್​ (ETV Bharat)

"ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ನಾಯಕರು ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಈ ಸುಳ್ಳು ಆರೋಪ ಮಾಡುತ್ತಿರುವ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡುತ್ತಿದ್ದು, ಅವರಿಗಾಗಿ 30 ವಿಶೇಷ ಬಸ್ ಹಾಗೂ ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮ ರಾಜ್ಯದ 30 ಜಿಲ್ಲೆಗಳಿಗೂ ಭೇಟಿ ನೀಡಿ, ನಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ದೂರವಾಣಿ ಸಂಖ್ಯೆಗಳನ್ನು ಒದಗಿಸಿ ಪತ್ರ ಬರೆಯುತ್ತಿದ್ದೇನೆ" ಎಂದು ತಿಳಿಸಿದರು.

ಬಿಜೆಪಿಗೆ ಭಯ ಶುರುವಾಗಿದೆ: ಮೋದಿ ಅವರು ಪದೇ ಪದೆ ಕರ್ನಾಟಕದ ಪ್ರಸ್ತಾಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, "ಇದರಿಂದ ಏನೂ ಆಗುವುದಿಲ್ಲ. ಜನ ಈಗಾಗಲೇ ಅವರಿಗೆ ಉತ್ತರ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ತನ್ನ ಶಕ್ತಿ ಹೆಚ್ಚಿಸಿಕೊಳ್ಳುತ್ತಿದೆ ಎಂಬ ಭಯ ಶುರುವಾಗಿದೆ" ಎಂದು ಟೀಕಿಸಿದರು.

ಸಚಿವ ಚಲುವರಾಯಸ್ವಾಮಿ ಮೇಲೆ ಹಲ್ಲೆಯಾಗಿದೆ ಎಂಬ ಕೇಂದ್ರ ಸಚಿವ ಹೆಚ್​. ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, "ಈ ರೀತಿ ಏನೂ ಆಗಿಲ್ಲ. ಎಲ್ಲವೂ ಸುಳ್ಳು. ಈ ರೀತಿ ಹೇಳಿದವರಿಗೂ ಮೋಸ ಮಾಡಿದ್ದಾರೆ ಎಂದು ಯಾರೋ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಹೇಳಿದರು. ಇದಕ್ಕೆಲ್ಲಾ ಆಧಾರ ಇದೆಯೇ? ಇಂತಹ ಆಧಾರರಹಿತ ಹೇಳಿಕೆ ನೀಡಲು ನಾನು ತಯಾರಿಲ್ಲ. ನಾನು ಹಿಟ್ ಅಂಡ್ ರನ್ ಮಾಡುವುದಿಲ್ಲ" ಎಂದರು.

ಇದನ್ನೂ ಓದಿ: ಚುನಾವಣೆಯ ಫಲಿತಾಂಶ ಬಂದ ನಂತರ ಎಲ್ಲ ಆರೋಪಗಳಿಗೆ ಉತ್ತರ ಸಿಗಲಿದೆ: ಬಿಎಸ್​ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.