ETV Bharat / state

ಕೊಳವೆಬಾವಿ ಕೊರೆಯಿಸುವ ಮುನ್ನ ಪೂರ್ವಾನುಮತಿ ಕಡ್ಡಾಯ: ವಿಜಯಪುರ ಡಿಸಿ - Vijayapura DC

ವಿಜಯಪುರ ಡಿಸಿ ಟಿ.ಭೂಬಾಲನ್ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು.

author img

By ETV Bharat Karnataka Team

Published : Apr 5, 2024, 9:37 PM IST

meeting of officers was held.
ಡಿಸಿ ಟಿ ಭೂಬಾಲನ್ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಿತು.

ವಿಜಯಪುರ: ಯಾವುದೇ ಕೊಳವೆಬಾವಿ ಕೊರೆಯುವ ಪೂರ್ವದಲ್ಲಿ ಸ್ಥಳೀಯ ಆಡಳಿತದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಕಂದಾಯ, ಶಾಲಾ ಶಿಕ್ಷಣ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಹಾಗೂ ಜಿ.ಪಂ ಅಧಿಕಾರಿಗಳೊಂದಿಗೆ ತುರ್ತು ವಿಡಿಯೋ ಸಂವಾದ ಸಭೆ ನಡೆಸಿ ಅವರು ಮಾತನಾಡಿದರು.

ಇಂಡಿ ತಾಲೂಕಿನ ಲಚ್ಯಾಣ ತೋಟದ ಕೊಳವೆಬಾವಿಯಲ್ಲಿ ಸಿಲುಕಿದ್ದ ಮಗುವಿನ ಪ್ರಕರಣ ಮತ್ತೊಮ್ಮೆ ಭವಿಷ್ಯದಲ್ಲಿ ಮರುಕಳಿಸದಿರಲು ಗ್ರಾಮ, ಪಟ್ಟಣ ನಗರ ಯಾವುದೇ ಪ್ರದೇಶದಲ್ಲಿ ಕೊಳವೆಬಾವಿ ಕೊರೆಯವ ಮುನ್ನ ರೈತರು, ಸಾರ್ವಜನಿಕರು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯ. ಸಫಲ/ವಿಫಲವಾದ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚುವ ವ್ಯವಸ್ಥೆಯಾಗಬೇಕು. ಈ ಕುರಿತು ಸ್ಥಳಿಯ ಆಡಳಿತಾಧಿಕಾರಿಗಳು ಸೂಚನಾ ಫಲಕಗಳಲ್ಲಿ ಅಳವಡಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಈಗಾಗಲೇ ಕೊಳವೆಬಾವಿಗಳ ಸುರಕ್ಷತೆ ಕುರಿತಂತೆ ಸರಕಾರದ ಸುತ್ತೋಲೆ ಇದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಗ್ರಾ.ಪಂ ಅಧಿಕಾರಿ, ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರು ಸರಕಾರದ ಈ ಸುತ್ತೋಲೆ ನಿರ್ದೇಶನಗಳನ್ನು ಪಾಲಿಸಬೇಕು. ಇನ್ನು ಮುಂದೆ ಯಾವುದೇ ಅವಘಡ ಜರುಗಿದಲ್ಲಿ ಸ್ಥಳೀಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ದ ಇಲಾಖೆಯಿಂದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ವಾರದೊಳಗಾಗಿ ಜಿಲ್ಲೆಯಲ್ಲಿರುವ ಸರಕಾರಿ ಕೊಳವೆಬಾವಿಗಳ ಮಾಹಿತಿಯನ್ನು ನೀಡಬೇಕು, ಚಾಲ್ತಿಯಲ್ಲಿರುವ ಮತ್ತು ದುರಸ್ತಿಯಲ್ಲಿರುವ ಕುರಿತ ಮಾಹಿತಿ ನೀಡಬೇಕು. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ನಿರಾಕ್ಷೇಪಣಾ ಪತ್ರ ಪಡೆಯದೆ ಕೊಳವೆಬಾವಿಗೆ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ನೀಡಬಾರದೆಂದು ಸೂಚಿಸಿದರು.

ಗುರುವಾರ ನಡೆದ ಎಸ್ಸೆಸ್ಸೆಲ್ಸಿ ತೃತೀಯ ಭಾಷಾ ಪತ್ರಿಕೆ ಪರೀಕ್ಷಾ ಸಮಯದಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿ ಕೊಡಲಾಗಿದೆ ಎಂಬ ದೂರು ಬಂದಿದ್ದು, ಈ ಕುರಿತಂತೆ ಸಂಬಂಧಿಸಿದವರ ವಿರುದ್ದ ಈಗಾಗಲೇ ಶಿಸ್ತು ಕ್ರಮ ಜರುಗಿಸಲಾಗಿದೆ. ಶನಿವಾರ ನಡೆಯುವ ದ್ವಿತೀಯ ಭಾಷಾ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆಗೆ ಜಿಲ್ಲೆಯ ಎಲ್ಲ 127 ಪರೀಕ್ಷಾ ಕೇಂದ್ರಗಳಲ್ಲಿ ಚಾಲ್ತಿಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಕ್ಕೆ ಸಮರ್ಪಕವಾಗಿ ನೀರಿನ ಟ್ಯಾಂಕರ್​ಗಳನ್ನು ಕಳುಹಿಸಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಸಮಿತಿಯಿಂದ ವಿವಿಧ ಚಟುವಟಿಕೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿ.ಪಂ.ಸಿಇಒ ರಿಶಿ ಆನಂದ, ಎಸ್ಪಿ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಇದನ್ನೂಓದಿ: ವಿಜಯಪುರ: ಬೋರ್​ವೆಲ್​ಗೆ ಬಿದ್ದಿದ್ದ ಬಾಲಕನ ರಕ್ಷಣೆ; ಸಾವು ಗೆದ್ದು ಬಂದ ಸಾತ್ವಿಕ್​ - Boy Rescued from Borewell

ETV Bharat Logo

Copyright © 2024 Ushodaya Enterprises Pvt. Ltd., All Rights Reserved.