ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ 14 ಜನರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಕೆರೆ ಏರಿಯ ಮೇಲೆ ನಡೆದಿದೆ. ಬಹುತೇಕ ಗಾಯಾಳುಗಳು ಜಗಳೂರು ತಾಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. ಗಂಭೀರ ಗಾಯಗೊಂಡ ಇಬ್ಬರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹೂವಿನಹಡಗಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆ ನಡೆದ ವೇಳೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು. ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಬಂಟ್ವಾಳ ಬಳಿ ಭೀಕರ ಕಾರು ಅಪಘಾತ: ನವವಿವಾಹಿತೆ ಸಾವು, ಪತಿ ಗಂಭೀರ