ETV Bharat / state

ಹೆಚ್ಚುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಗೆ ಕಡಿವಾಣ ಹಾಕಬೇಕು: ಎಎಪಿ ಜಗದೀಶ್ ಸದಂ - private schools Fee collection - PRIVATE SCHOOLS FEE COLLECTION

ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ 15 ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

AAP leader Jagdish V Sadam spoke.
ಎಎಪಿ ಮುಖಂಡ ಜಗದೀಶ್ ವಿ ಸದಂ ಮಾತನಾಡಿದರು. (ETV Bharat)
author img

By ETV Bharat Karnataka Team

Published : May 8, 2024, 5:19 PM IST

Updated : May 8, 2024, 6:02 PM IST

ಎಎಪಿ ಜಗದೀಶ್ ಸದಂ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. (ETV Bharat)

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅವ್ಯವಸ್ಥೆಯಿಂದಾಗಿ ಪಾಲಕರು ಖಾಸಗಿ ಶಾಲೆಗಳ ಮೊರೆ ಹೋಗುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆ ಮಿತಿ ಮೀರುತ್ತಿದ್ದು, ಇದಕ್ಕೆ ಕಡಿವಾಣ ಬೀಳಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಒತ್ತಾಯಿಸಿದ್ದಾರೆ.

ರಾಜ್ಯ ಎಎಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಖಾಸಗಿ ಶಾಲೆಗಳ ಮೇಲೆ ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಆದರೆ, ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ 15 ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ, ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಹೈಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸದಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಸಹ ಖಾಸಗಿ ಶಾಲೆಗಳೊಂದಿಗೆ ಕೈಜೋಡಿಸಿದೆ. ಈ ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ಶುಲ್ಕ ದಂಧೆಯಿಂದ ಪೋಷಕರನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ವಸೂಲಿಗೆ ಶುಲ್ಕ ನಿಯಂತ್ರಣ ಪ್ರಾಧಿಕಾರವು ತಡೆ ನೀಡಬೇಕು. ಇದೀಗ ಚುನಾವಣೆಯು ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನಹರಿಸಬೇಕಿದೆ. ಕೂಡಲೇ ಸಭೆ ಕರೆದು ನ್ಯಾಯಾಲಯದ ಆದೇಶದ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಬಡ ಕುಟುಂಬವೊಂದು ತನ್ನ ಗಳಿಕೆಗಿಂತ ಶೇ 40ರಷ್ಟು ಹೆಚ್ಚುವರಿಯಾಗಿ ಮಗುವೊಂದರ ಶಿಕ್ಷಣಕ್ಕೆ ಖರ್ಚು ಮಾಡಬೇಕಿದೆ. ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿದಾಗ, ಪೋಷಕರು ಮಕ್ಕಳ ಶಾಲೆ ಬದಲಿಸುವ ಅನಿವಾರ್ಯತೆ ಎದುರಾಗುತ್ತದೆ. ಸರ್ಕಾರ ಶುಲ್ಕ ದಂಧೆಗೆ ಕಡಿವಾಣ ಹಾಕಬೇಕಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೆ ಭೇಟಿ ನೀಡಿ ಎಷ್ಟು ಶುಲ್ಕ ಹೆಚ್ಚಿಸಲಾಗಿದೆ ಎಂಬುದರ ಮೇಲೆ ನಿಗಾ ಇಡಬೇಕು. ಹೆಚ್ಚು ಶುಲ್ಕ ಏರಿಕೆ ಕಂಡು ಬಂದಲ್ಲಿ ಅಂತಹ ಶಾಲೆಗಳೊಂದಿಗೆ ಚರ್ಚಿಸಿ ಶುಲ್ಕ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ ಹೇಳಿದರು.

ರಾಜಕಾರಣಿಗಳ ಒಡೆತನದಲ್ಲಿ ಖಾಸಗಿ ಶಾಲೆಗಳು: ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ, ಶಿಕ್ಷಣದ ಹಕ್ಕು ಪ್ರತಿಯೊಬ್ಬರಿಗೂ ಇದೆ. ಹೀಗಿದ್ದರೂ ಅಧಿಕ ಶುಲ್ಕ ನೀಡಬೇಕಾಗಿದೆ. ರಾಜ್ಯದ ರಾಜಕಾರಣಿಗಳ ಒಡೆತನದಲ್ಲಿಯೇ ಬಹುತೇಕ ಖಾಸಗಿ ಶಾಲೆಗಳು ಮತ್ತು ವೈದ್ಯಕೀಯ ಸಂಸ್ಥೆಗಳಿವೆ. ಹೀಗಾಗಿಯೇ ಶುಲ್ಕ ದಂಧೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಬಟ್ಟೆ, ಶೂಗಳನ್ನು ಎಲ್ಲಿಂದ ಕೊಂಡುಕೊಳ್ಳಬೇಕು ಎಂಬುದನ್ನು ಶಾಲೆಗಳೇ ನಿರ್ಧರಿಸುತ್ತಿವೆ. ಇದು ವ್ಯಾಪಾರವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಪೋಷಕರು ಎಚ್ಚೆತ್ತುಕೊಳ್ಳಬೇಕು. ಶುಲ್ಕವನ್ನಷ್ಟೇ ಅಲ್ಲೆದೇ ಶಾಲೆಗಳು ಬೇರೆ ಯಾವುದಕ್ಕೆಲ್ಲ ಹಣ ವಸೂಲಿ ಮಾಡುತ್ತಿವೆ ಎಂಬುದರತ್ತ ಗಮನಹರಿಸಬೇಕು ಎಂದು ತಿಳಿಸಿದರು.

ಇದನ್ನೂಓದಿ:ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ರಿಸಲ್ಟ್​ ಹೀಗೆ ನೋಡಬಹುದು - SSLC RESULT

Last Updated : May 8, 2024, 6:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.