ETV Bharat / state

ಹಾಸನ: ಪ್ರೊಬೆಷನರಿ ಸೇವೆಗೆ ವರದಿ ಮಾಡಿಕೊಳ್ಳಲು ತೆರಳುವಾಗ ಅಪಘಾತ; ಯುವ ಐಪಿಎಸ್ ಅಧಿಕಾರಿ ಸಾವು! - PROBATIONARY IPS OFFICER DIED

ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದ ಐಪಿಎಸ್‌ ಯುವ ಅಧಿಕಾರಿ ಮೈಸೂರು - ಹಾಸನ ರಸ್ತೆಯ ಕಿತ್ತಾನೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್, ಅಪಘಾತಗೊಂಡ ಪೊಲೀಸ್​ ಬೋಲೇರೋ ಜೀಪ್
ಮೃತ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್, ಅಪಘಾತಗೊಂಡ ಪೊಲೀಸ್​ ಬೋಲೇರೋ ಜೀಪ್ (ETV Bharat)
author img

By ETV Bharat Karnataka Team

Published : Dec 2, 2024, 6:52 AM IST

ಹಾಸನ: ಐಪಿಎಸ್​ ಅಧಿಕಾರಿಯಾಗಿ ಅಧಿಕಾರದ ದಂಡ ಹಿಡಿದು ಕಾರ್ಯ ಆರಂಭಿಸಬೇಕಿದ್ದ ಯುವ ಅಧಿಕಾರಿಯೊಬ್ಬರು ವಿಧಿಯಾಟದಲ್ಲಿ ಸಾವನ್ನಪ್ಪಿದ್ದಾರೆ. ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದ ಐಪಿಎಸ್‌ ಅಧಿಕಾರಿ ಭೀಕರ ಅಪಘಾತದಲ್ಲಿ ಕೊನೆಯುಸಿರೆಳದಿದ್ದಾರೆ.

ಹರ್ಷಬರ್ಧನ್ (26) ಮೃತ ಪ್ರೊಬೆಷನರಿ ಐಪಿಎಸ್ ಅಧಿಕಾರಿ. ಭಾನುವಾರ ಮೈಸೂರು-ಹಾಸನ ರಸ್ತೆಯ ಕಿತ್ತಾನೆ ಗ್ರಾಮದ ಬಳಿ ಹರ್ಷಬರ್ಧನ್ ಅವರಿದ್ದ ಬೋಲೇರೋ ಜೀಪ್​ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷಬರ್ಧನ್ ​ತಲೆಗೆ ತೀವ್ರ ಗಾಯವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತಕ ಉಸಿರಾಟದಲ್ಲಿದ್ದ ಹರ್ಷಬರ್ಧನ್ ​ಅವರು ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ.

ಯಾರು ಈ ಐಪಿಎಸ್ ಅಧಿಕಾರಿ ಹರ್ಷಬರ್ಧನ್?: ಮಧ್ಯಪ್ರದೇಶ ಮೂಲದ ಹರ್ಷಬರ್ಧನ್ ಬಿಇ ಸಿವಿಲ್‌ ಇಂಜಿನಿಯರಿಂಗ್‌ ಪದವೀಧರರಾಗಿದ್ದು, 2023ನೇ ಸಾಲಿನ​ ಕರ್ನಾಟಕ ಕೇಡರ್​ ಐಪಿಎಸ್ ಅಧಿಕಾರಿಯಾಗಿದ್ದರು. ಮೈಸೂರು ಪೊಲೀಸ್ ತರಬೇತಿ ಕೇಂದ್ರದಲ್ಲಿ 4 ವಾರಗಳ ಕಾಲ ತರಬೇತಿ ಪೂರ್ಣಗೊಳಿಸಿದ್ದರು. 6 ತಿಂಗಳು ಹಾಸನದಲ್ಲಿ ಡಿಸ್ಟ್ರಿಕ್ಟ್ ಪ್ರಾಕ್ಟಿಕಲ್ ಟ್ರೈನಿಂಗ್ ಪಡೆಯಬೇಕಿತ್ತು. ಆದ್ದರಿಂದ ಪ್ರೊಬೇಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು.

ನಿನ್ನೆ ಮೈಸೂರಿನ ಪೊಲೀಸ್ ಅಕಾಡೆಮಿಯಿಂದ ನಿರ್ಗಮಿಸಿ, ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎದುರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಹಾಸನಕ್ಕೆ ಆಗಮಿಸಬೇಕಿತ್ತು. ಹೀಗಾಗಿ ಇವರನ್ನು ಕರೆತರಲು ಹಾಸನದ ಡಿಎಆರ್​ ಪೊಲೀಸ್ ಪೇದೆ ಮಂಜೆಗೌಡ, ಹಾಸನ ಗ್ರಾಮಾಂತರ ಠಾಣೆಯ ಇನ್ಸ್​​ಪೆಕ್ಟರ್ ಬೋಲೇರೋ ಜೀಪಲ್ಲಿ ಮೈಸೂರಿಗೆ ಹೋಗಿ ಹರ್ಷಬರ್ಧನ್​ ಅವರನ್ನು ಕರೆತರುತ್ತಿದ್ದರು. ಅವರು ಹೊಳೆನರಸೀಪುರ ಮಾರ್ಗವಾಗಿ ಹಾಸನಕ್ಕೆ ತಲುಪಬೇಕಿತ್ತು.

ಆದರೆ, ಹಾಸನ ಗಡಿ 3 ಕಿಲೋ ಮೀಟರ್ ಇರುವಾಗಲೇ ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್​ ಜೀಪ್ 3-4 ಪಲ್ಟಿಯಾಗಿ ರಸ್ತೆ ಪಕ್ಕದ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ಐಪಿಎಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದರು. ಚಾಲಕ ಮಂಜೇಗೌಡ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಜೀವನದಲ್ಲಿ ಐಪಿಎಸ್ ಅಧಿಕಾರಿಯಾಗಿ ಗೆಲ್ಲಬೇಕಿದ್ದ ಹರ್ಷಬರ್ಧನ್​ ಮಾತ್ರ ಸಾವನ್ನು ಗೆಲ್ಲದೇ, ಕೊನೆಯುಸಿರೆಳೆದಿದ್ದಾರೆ.

ಹರ್ಷಬರ್ಧನ್ ಸಾವಿಗೆ ಸಂತಾಪ ಸೂಚಿಸಿದ ಐಜಿಪಿ: ಅವಘಡದಲ್ಲಿ ಜೀಪ್ ಸಂಪೂರ್ಣ ಜಖಂಗೊಂಡಿದೆ. ಹರ್ಷಬರ್ಧನ್​ ಪ್ರೊಬೆಷನರಿ ಅವಧಿಯ ಭಾಗವಾಗಿ ಹಾಸನದಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಣೆ ಆರಂಭಿಸಬೇಕಾಗಿತ್ತು. ಘಟನೆ ತಿಳಿದ ಬಳಿಕ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಐಪಿಎಸ್ ಅಧಿಕಾರಿಯ ಸಾವಿಗೆ ಸಂತಾಪ ಸೂಚಿಸಿದರು.

ಜೀವನದಲ್ಲಿ ತನ್ನ ಗುರಿ ಸಾಧಿಸಿದ್ದ ಹರ್ಷವರ್ಧನ್​ ಇಂದು ಅಧಿಕಾರಿಯಾಗಿ ದಂಡವನ್ನಿಡಿದು ಹೊಸ ಪಯಣವನ್ನು ಆರಂಭಿಸಬೇಕಿತ್ತು. ಆದರೆ ಜವರಾಯನ ಅಟ್ಟಹಾಸಕ್ಕೆ ಅಮವಾಸ್ಯೆಯಂದೆ ತನ್ನ ಜೀವನದ ಕೊನೆ ಪಯಣ ಮುಗಿಸಿದ್ದು ನಿಜಕ್ಕೂ ದುರಂತವೇ ಸರಿ.

ಸಂತಾಪ ಸೂಚಿಸಿದ ಸಿಎಂ: "ಹಾಸನ - ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು" ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಜಯೇಂದ್ರ ಪೋಸ್ಟ್: "ಕರ್ನಾಟಕ ಕೇಡರ್​ಗೆ ಆಯ್ಕೆಯಾಗಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಹಾಸನಕ್ಕೆ ತೆರಳುವಾಗ ಮಾರ್ಗಮಧ್ಯೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ದುರದೃಷ್ಟಕರ. ಐಪಿಎಸ್ ಹುದ್ದೆಗೆ ಆಯ್ಕೆಯಾಗುವುದು ಸುಲಭದ ಮಾತಲ್ಲ, ಹರ್ಷಬರ್ಧನ್ ಅವರ ಯಶಸ್ಸಿನ ಹಿಂದಿನ ಅವರ ಪರಿಶ್ರಮ, ಕುಟುಂಬದ ತ್ಯಾಗ ಹಾಗೂ ಪ್ರೋತ್ಸಾಹವನ್ನು ಮರೆಯಲಾಗದು. ಭವಿಷ್ಯತ್ತಿನಲ್ಲಿ ನಾಡಿನ ಸೇವೆಗೆ ಮಹತ್ವದ ಕೊಡುಗೆ ನೀಡಬಹುದಾದ ಒಬ್ಬ ಅಧಿಕಾರಿಯು ನಿರ್ದಯವಾಗಿ ಸಾವನ್ನಪ್ಪಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಮೃತ ಹರ್ಷಬರ್ಧನ್ ಅವರ ಕುಟುಂಬದವರಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭೀಕರ ಅಪಘಾತ: ಬಳ್ಳಾರಿಯ ಇಬ್ಬರು ವೈದ್ಯರು, ಓರ್ವ ವಕೀಲ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.