ETV Bharat / state

ಸಿಇಟಿಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿಸುವ ಬಗ್ಗೆ ಚಿಂತನೆ: ಉನ್ನತ ಶಿಕ್ಷಣ ಸಚಿವ ಸುಧಾಕರ್ - CET Computer Based Test

author img

By ETV Bharat Karnataka Team

Published : Jul 14, 2024, 10:24 AM IST

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿಸುವ (ಸಿಬಿಟಿ) ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

Education Minister Sudhakar
ಕೆ-ಸೆಟ್ 23ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ (ETV Bharat)
ಉನ್ನತ ಶಿಕ್ಷಣ ಸಚಿವ ಸುಧಾಕರ್ (ETV Bharat)

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರತೀ ವರ್ಷ ವೃತ್ತಿಪರ ಕೋರ್ಸ್​​ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿಸುವ (ಸಿಬಿಟಿ) ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಕೆಇಎ ಅಧ್ಯಕ್ಷರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.

ಶನಿವಾರ ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ-ಸೆಟ್ 23ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತಿತರ ಒಂದೆರಡು ರಾಜ್ಯಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸಿಬಿಟಿ ಮಾದರಿಯಲ್ಲಿ ನಡೆಸಿರುವುದನ್ನು ಅಧ್ಯಯನ ಮಾಡಲಾಗಿದೆ. ಸಿಇಟಿಯನ್ನು ಕಂಪ್ಯೂಟರ್ ಆಧರಿಸಿ ನಡೆಸಲು ಹೆಚ್ಚಿನ ಮೂಲಸೌಕರ್ಯವೂ ಅಗತ್ಯವಿರುತ್ತದೆ. ಒಟ್ಟಾರೆ, ಸಾಧಕ-ಬಾಧಕಗಳನ್ನು ಗಣನೆಗೆ ತೆಗೆದುಕೊಂಡು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ವಿವರಿಸಿದರು.

ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ ಸರ್ಕಾರ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ. ಈ ಸಂಪನ್ಮೂಲದ ಸದುಪಯೋಗ ಪೂರ್ಣ ಪ್ರಮಾಣದಲ್ಲಿ ಆಗುತ್ತದೆಯೇ ಎಂಬ ಬಗ್ಗೆಯೂ ಆಲೋಚಿಸಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಕಂಪ್ಯೂಟರ್ ಆಧಾರಿತವಾಗಿ ಸಿಇಟಿ ನಡೆಸಿದ್ದ ಸಂಸ್ಥೆಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲಾಗಿದೆ ಎಂದು ತಿಳಿಸಿದರು.

ಸಿಇಟಿ ಅರ್ಜಿ ತುಂಬುವ ಹಂತದಲ್ಲಿ, ಮುಖ್ಯವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆ ವಿದ್ಯಾರ್ಥಿಗಳು ಬಹುತೇಕ ಸೈಬರ್ ಸೆಂಟರ್​​ಗಳಿಗೆ ಹೋಗಿ ಅರ್ಜಿ ತುಂಬುತ್ತಿದ್ದು, ಗ್ರಾಮೀಣ ವಿದ್ಯಾರ್ಹತೆ, ಮೀಸಲಾತಿ, ಮತ್ತಿತರೆ ಮಾಹಿತಿಗಳನ್ನು ನೀಡುವಾಗ ಹೆಚ್ಚಿನ ಪ್ರಮಾಣದಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ ಎಂದರು.

ಜೊತೆಗೆ, ಸಿಇಟಿ ಅರ್ಜಿ ತುಂಬುವ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಪೂರ್ವ ತಯಾರಿ ನೀಡಲು ಆ್ಯಪ್ ಒಂದನ್ನು ಸಿದ್ಧಪಡಿಸಲಾಗುತ್ತಿದೆ. ಇದು, ಬಹುಮಟ್ಟಿಗೆ ಕೊನೆಯ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಇದರ ಜತೆಗೆ ಕಾಲೇಜು ಹಂತದಲ್ಲೇ ಅರ್ಜಿ ಭರ್ತಿ ಮಾಡಿಸುವ ಉದ್ದೇಶವೂ ಇದೆ ಎಂದು ತಿಳಿಸಿದರು.

ಕೆ-ಸೆಟ್​ನಲ್ಲಿ ಅರ್ಹರಾದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿಕೊಳ್ಳಲು ಸರ್ಕಾರ ಆದ್ಯತೆ ಮೇರೆಗೆ ಗಮನ ನೀಡಲಿದೆ. ಹಣಕಾಸು ಇಲಾಖೆ ಒಪ್ಪಿಗೆ ಸಿಕ್ಕ ನಂತರ ನೇಮಕಾತಿ ಆಗಲಿದೆ. ಜೊತೆಗೆ, ಮುಂಬರುವ ದಿನಗಳಲ್ಲಿ ಮಂಜೂರಾತಿ ಹುದ್ದೆಗಳು ಹಾಗೂ ಅತಿಥಿ ಬೋಧಕರ ನಡುವಿನ ಅಂತರವನ್ನು ತಗ್ಗಿಸುವುದಕ್ಕೂ ಒತ್ತು ಕೊಡಲಾಗುತ್ತದೆ ಎಂದರು.

ವೆಬ್ ಕಾಸ್ಟಿಂಗ್ ಬಗ್ಗೆ ಮೆಚ್ಚುಗೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆ-ಸೆಟ್ ಸೇರಿದಂತೆ ಹಲವು ನೇಮಕಾತಿ ಪರೀಕ್ಷೆಗಳನ್ನು ಸಮರ್ಥವಾಗಿ ನಡೆಸುತ್ತಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (ಎಐ), ಮುಖಚಹರೆ ಗುರುತಿಸುವಿಕೆ, ಬೆರಳಚ್ಚು ಬಳಕೆ, ಬಯೋಮೆಟ್ರಿಕ್ಸ್ ಮತ್ತಿತರ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ವೆಬ್ ಕಾಸ್ಟಿಂಗ್ ಮೂಲಕ ನಿಯಂತ್ರಣ ಮಾಡುತ್ತಿರುವುದು ಉತ್ತಮ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೆಸೆಟ್-2024 - ನವೆಂಬರ್ 24ಕ್ಕೆ ಪರೀಕ್ಷೆ: 2023ನೇ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ಮುಗಿಸಿ ಪ್ರಮಾಣ ಪತ್ರ ನೀಡಿದ ದಿನವೇ 2024ನೇ ಸಾಲಿನ ಅಧಿಸೂಚನೆಯನ್ನೂ ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರು ಬಿಡುಗಡೆ ಮಾಡಿದರು.

ಜುಲೈ 22ರಿಂದ ಆಗಸ್ಟ್ 22ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 26 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನವಾಗಿದೆ. ನವೆಂಬರ್ 24ರಂದು ಪರೀಕ್ಷೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಿದ ಕೆಇಎ ಮತ್ತು ಸಿಬ್ಬಂದಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಖಾಸಗಿ ವಿವಿಗೆ ಅನುಮತಿ ಇಲ್ಲ: ರಾಜ್ಯದಲ್ಲಿ ಹೊಸದಾಗಿ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮತಿ ನೀಡುವ ಉದ್ದೇಶ ಇಲ್ಲ. ಇದೇ ಅಭಿಪ್ರಾಯ ಮುಖ್ಯಮಂತ್ರಿಯವರದ್ದೂ ಆಗಿದೆ ಎಂದು ಸುಧಾಕರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸುಪ್ರೀಂ ಕೋರ್ಟ್ ಆದೇಶದ ನಂತರ ತೀರ್ಮಾನ: ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಅದರ ಅಂತಿಮ ಆದೇಶ ನೋಡಿಕೊಂಡು ಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್​​ಗಳಿಗೆ ಒಮ್ಮೆಗೇ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆ ರಾಜ್ಯದಲ್ಲಿ ಇದ್ದು, ಅದೇ ರೀತಿ ಮಾಡಿದರೆ ಹೆಚ್ಚು ಅನುಕೂಲ. ಹೀಗಾಗಿ ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾಯುತ್ತಿರುವುದಾಗಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವೈದ್ಯಕೀಯ ಕೋರ್ಸ್​​ಗಳ ಪ್ರವೇಶಕ್ಕೆ ಕೇವಲ ನೀಟ್ ಅಂಕಗಳನ್ನೇ ಆಧಾರವಾಗಿ ಇಟ್ಟುಕೊಂಡಿರುವುದರ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಇದರ ಬದಲು ಅರ್ಹತಾ ಪರೀಕ್ಷೆಯ (ದ್ವಿತೀಯ ಪಿಯುಸಿ) ಶೇ. 50ರಷ್ಟು ಅಂಕಗಳನ್ನೂ ರ‍್ಯಾಂಕ್​​​​ಗೆ ಪರಿಗಣಿಸಿದರೆ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜರ್ಮನ್ ಶೆಫರ್ಡ್​ ಶ್ವಾನಗಳಿಗಾಗಿ ಮಾಲೀಕರು-ಸಾಕಿದವರ ಕಿತ್ತಾಟ: ಪೊಲೀಸ್​ ಠಾಣೆಯಲ್ಲಿ ಸುಖಾಂತ್ಯ - German Shepherd Dogs

ETV Bharat Logo

Copyright © 2024 Ushodaya Enterprises Pvt. Ltd., All Rights Reserved.