ETV Bharat / state

ಬೆಂಗಳೂರು: ಕಾಲೇಜಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪ್ರಾಧ್ಯಾಪಕಿ - PROFESSOR TRIED TO COMMIT SUICIDE

ಬೆಂಗಳೂರಿನ ತಿಲಕ್​​ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಪಿಯು ಕಾಲೇಜಿನಲ್ಲಿ ಮಹಿಳಾ ಪ್ರಾಧ್ಯಾಪಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Bengaluru
ಬೆಂಗಳೂರು ನಗರ (ಸಂಗ್ರಹ ಚಿತ್ರ) (ETV Bharat)
author img

By ETV Bharat Karnataka Team

Published : Oct 14, 2024, 3:17 PM IST

Updated : Oct 14, 2024, 6:54 PM IST

ಬೆಂಗಳೂರು: ಪ್ರಾಧ್ಯಾಪಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಿಲಕ್ ನಗರದ ಖಾಸಗಿ ಪಿಯು ಕಾಲೇಜಿನಲ್ಲಿ ಇಂದು ನಡೆದಿದೆ. ಇಂಗ್ಲಿಷ್ ಪ್ರಾಧ್ಯಾಪಕಿ ಶಬಾನ (44) ಕ್ಲಾಸ್ ರೂಮ್‌ನಲ್ಲೇ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇಂದು ಕಾಲೇಜಿಗೆ ಬಂದಿದ್ದ ಶಬಾನ ಬೆಳಿಗ್ಗೆ ಪ್ರಾಂಶುಪಾಲರ ಕೊಠಡಿಗೆ ತೆರಳಿ ಮಾತನಾಡಿ ಹೊರಬಂದಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

"ತಿಲಕ್ ನಗರ ಠಾಣಾ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಿಂದ ದೊರೆತ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆಯ ಹೇಳಿಕೆ ಪಡೆದುಕೊಳ್ಳಲಾಗುತ್ತಿದೆ" ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Last Updated : Oct 14, 2024, 6:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.