ETV Bharat / state

ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ: ತೆರಿಗೆ ಸಂಗ್ರಹದ ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ; ಸಿಎಂ ಖಡಕ್​ ಎಚ್ಚರಿಕೆ - Commercial Tax Department Meeting

author img

By ETV Bharat Karnataka Team

Published : Jun 11, 2024, 2:30 PM IST

ತೆರಿಗೆ ಸಂಗ್ರಹದ ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Commercial Tax Department  CM Siddaramaiah  Bengaluru  Commercial Tax Department Meeting
ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. (ETV Bharat)

ಬೆಂಗಳೂರು: ''ತೆರಿಗೆ ಸಂಗ್ರಹದ ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ'' ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಖಡಕ್ ಸೂಚನೆ ನೀಡಿದ್ದಾರೆ.

''ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಿದರು.

''ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ'' ಎಂದು ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ. ಶಿಖಾ ಉಪಸ್ಥಿತರಿದ್ದರು.

ಸಭೆಯಲ್ಲಿ ಅಧಿಕಾರಿಗಳು ಸಿಎಂ‌ ನೀಡಿದ ಸೂಚನೆಗಳೇನು?:

  • ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು
  • IGST ನಕಾರಾತ್ಮಕ ಸೆಟಲ್ ಮೆಂಟ್ ಆಗುವ ಕಡೆ ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು
  • ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿದೆ
  • ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಸೂಚನೆ
  • ಅಂದಾಜು, ಜಾರಿ, ಮೇಲ್ಮನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. Action plan ಸಿದ್ದಪಡಿಸಬೇಕು. ಮೇಲ್ಮನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು
  • ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದ ಸಚಿವರ ರಾಜೀನಾಮೆ ಪಡೆಯಬೇಕು: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಆಗ್ರಹ - MLA Shivaganga Basavaraj

ETV Bharat Logo

Copyright © 2024 Ushodaya Enterprises Pvt. Ltd., All Rights Reserved.