ETV Bharat / state

ಚನ್ನಪಟ್ಟಣ ಉಪಚುನಾವಣೆ: ನ.12ರ ಸಂಜೆಯಿಂದ ನ.14ರವರೆಗೆ ನಿಷೇಧಾಜ್ಞೆ - PROHIBITION

ನವೆಂಬರ್​ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ನ.12ರಿಂದ ನಿಷೇಧಾಜ್ಞೆ ಇರಲಿದೆ.

ಚನ್ನಪಟ್ಟಣ ಉಪ ಚುನಾವಣೆ
ಚನ್ನಪಟ್ಟಣ ಉಪಚುನಾವಣೆ (ETV Bharat)
author img

By ETV Bharat Karnataka Team

Published : Nov 6, 2024, 10:19 AM IST

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನ.13ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ.12ರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದ್ದಾರೆ.

ಸಾರ್ವಜನಿಕ ಶಾಂತಿ ಸುವ್ಯವಸ್ಥೆ, ಮುಕ್ತ ಮತ್ತು ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಮಾಹಿತಿ (ETV Bharat)

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಂತೆ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2024ರ ನ.12ರ ಮಂಗಳವಾರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಿವಿಧ ಷರತ್ತುಗಳನ್ನು ವಿಧಿಸಿ, ನಿಷೇಧಾಜ್ಞೆ ಹೊರಡಿಸಲಾಗಿದೆ.

ನಿಷೇಧಿತ ಅವಧಿಯಲ್ಲಿ ಯಾವುದೇ ಬಹಿರಂಗ, ಸಾರ್ವಜನಿಕ ಸಭೆ, ಸಮಾರಂಭ, ಜಾಥಾ, ಮೆರವಣಿಗೆ ಇತ್ಯಾದಿಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಿದೆ. ಮತದಾನ ಮುಕ್ತಾಯದ ಮುಂಚಿನ 48 ಗಂಟೆಗಳ ಅವಧಿಯಲ್ಲಿ ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿರುತ್ತದೆ. ಹಾಗೇ ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾ ಪ್ರಚಾರಕ್ಕಾಗಿ ಮನೆಮನೆಗೆ ಮತಗಳನ್ನು ಯಾಚಿಸಲು ಐದು ಜನಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ.

ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದು, ಹಿಡಿದು ಓಡಾಡುವಂತಿಲ್ಲ. ಭಿತ್ತಿ ಪತ್ರ ಹಂಚುವ ಮೂಲಕ ವಾಹನದಲ್ಲಿ ಪ್ರಚಾರ ಮಾಡುವುದು, ಘೋಷಣೆ, ಭಾಷಣ ಮಾಡುವಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆಯು ಮದುವೆ, ಮುಂಜಿ, ಶವಸಂಸ್ಕಾರ ಕಾರ್ಯಗಳಿಗೆ ಅನ್ವಯವಾಗುವುದಿಲ್ಲ.

ಆದರೆ ಈ ಕಾರ್ಯಕ್ರಮದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಗಳನ್ನು ನಡೆಸುವಂತಿಲ್ಲ. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರೆಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವುದು ಮಾಡುವಂತಿಲ್ಲ.

ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸುವಂತಿಲ್ಲ. ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ ಹಾಗೂ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ನಿಬಂಧನೆಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಪ್ರಚಾರ ಅಖಾಡಕ್ಕಿಳಿದ ದೇವೇಗೌಡರು: ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಮತಬೇಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.