ETV Bharat / state

ಬೆಂಗಳೂರು: ಆಸ್ತಿ ತೆರಿಗೆ 'ಒಟಿಎಸ್' ಪಾವತಿಗೆ ಇನ್ನೂ ಒಂದು ತಿಂಗಳು ಕಾಲಾವಕಾಶ - Property Tax OTS

ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ 'ಒಂದು ಬಾರಿ ಪರಿಹಾರ ಯೋಜನೆ' (ಒಟಿಎಸ್​)ಯನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ.

ಬಿಬಿಎಂಪಿ
ಬಿಬಿಎಂಪಿ (ETV Bharat)
author img

By ETV Bharat Karnataka Team

Published : Aug 2, 2024, 5:52 PM IST

Updated : Aug 2, 2024, 6:11 PM IST

ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ಒಂದು ಬಾರಿ ಪರಿಹಾರ ಯೋಜನೆಯ ಕಾಲಾವಧಿ ಜು.31ರಂದು ಮುಕ್ತಾಯಗೊಂಡಿದ್ದು, ಸಾರ್ವಜನಿಕರ ಒತ್ತಡದ ಮೇರೆಗೆ ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರ ವರೆಗೆ ವಿಸ್ತರಣೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರ 11ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಈವರೆಗೂ ಸುಮಾರು 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವರಿಯಾಗಿ 400 ಕೋಟಿ ರೂ ತೆರಿಗೆ ಸಂಗ್ರಹವಾಗಿದೆ. ಈ ನಿಟ್ಟಿನಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿತ್ತು. ಸರ್ವರ್ ಸಮಸ್ಯೆಯಾಗಿತ್ತು ಹಾಗೂ ಮತ್ತೆ ಕೆಲವರು ಚೆಕ್ ನೀಡಿದ್ದಾರೆ. ಆದ್ದರಿಂದ ಜು.31ರ ವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದರು.

ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮುಂದಿನ ದಿನದಲ್ಲಿ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ಸರಿಹೊಂದಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯ ಗಾಬರಿಯಾಗುವುದು ಬೇಡ ಎಂದು ತಿಳಿಸಿದರು.

ಬಿಜೆಪಿ ಪಾದಯಾತ್ರೆಗೆ ಅರ್ಥವಿಲ್ಲ: ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಜನಾಂದೋಲನ ಯಾತ್ರೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯ ಪಾದಯಾತ್ರೆಗೆ ಯಾವುದೇ ಅರ್ಥವಿಲ್ಲ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದಾದರೂ ಹೊಸ ಹಗರಣಗಳಿದ್ದರೆ ಅವರು ಹೇಳಲಿ. ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರವಾಗಿದೆ. ಹೀಗಾಗಿ ನಾವು ಅವರ ಕಾಲದ ಹಗರಣಗಳ ಬಗ್ಗೆ, ಬಜೆಟ್​ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರತಿನಿತ್ಯ ಮೂರ್ನಾಲ್ಕು ಪ್ರಶ್ನೆ ಕೇಳುತ್ತೇವೆ, ಅವರು ಉತ್ತರ ನೀಡಲಿ ಎಂದು ಸವಾಲು ಹಾಕಿದರು.

ಈ ಜನಾಂದೋಲನ ಸಭೆ ರಾಜ್ಯಾದ್ಯಂತ ಮಾಡುತ್ತೀರಾ ಎನ್ನುವ ಪ್ರಶ್ನೆಗೆ, ನಾವು ಮೊದಲು ಅವರ ಅವಧಿಯಲ್ಲಿ ಈ ರೀತಿಯ ಅಕ್ರಮಗಳು ನಡೆದಿದ್ದವು, ಇದರ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನೆ ಮಾಡುತ್ತೇವೆ. ಅವರು ಉತ್ತರ ನೀಡಲಿ. ಆಮೇಲೆ ನಾವು ರಾಜ್ಯ ಮಟ್ಟದ ಸಭೆಯ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.

ನನ್ನ ಮೇಲೆ ದಾಳಿ ಮಾಡಲು ಇಡಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ನಾನು ಚಹಾ, ಬಿಸ್ಕೆಟ್ ರೆಡಿ ಮಾಡಿಕೊಂಡು ಕಾಯುತ್ತಿದ್ದೇನೆ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಕುರಿತು ಮಾತನಾಡಿ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಹುಲ್ ಗಾಂಧಿ ಅವರು ಪ್ರತಿಪಕ್ಷದ ನಾಯಕರಾಗಿದ್ದಾರೆ. ಅವರು, ಅವರದೇ ಆದ ರೀತಿಯಲ್ಲಿ ಮಾಹಿತಿ ಪಡೆದಿರುತ್ತಾರೆ. ಇನ್ನು ಸಾಂವಿಧಾನಿಕ ಸಂಸ್ಥೆಗಳು ಯಾವ ರೀತಿ ವರ್ತಿಸುತ್ತಿವೆ ಎಂದು ನೀವೆಲ್ಲರೂ ನೋಡುತ್ತಿದ್ದೀರಿ. ತನಿಖೆ ಹೆಸರಲ್ಲಿ ಅಧಿಕಾರಿಗಳಿಗೆ ಒತ್ತಡ ಹಾಕಿ ಮುಖ್ಯಮಂತ್ರಿಗಳು ಮತ್ತು ನನ್ನ ಹೆಸರು ಹೇಳುವಂತೆ ಬೆದರಿಸುವುದು ನಡೆಯುತ್ತಿದೆ. ಸಿಬಿಐ ಏನೇನು ಮಾಡುತ್ತಿದೆ ಎಂಬ ಪಟ್ಟಿ ನನ್ನ ಬಳಿ ಇದೆ. ನಿಧಾನವಾಗಿ ಅದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಅಗತ್ಯವಸ್ತುಗಳು ರವಾನೆ - Humanitarian Aid To Wayanad

Last Updated : Aug 2, 2024, 6:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.