ETV Bharat / state

ಪಾಠ ಮಾಡುವಾಗ ಧಾರ್ಮಿಕ ನಿಂದನೆ ಆರೋಪ: ಶಿಕ್ಷಕಿ ಅಮಾನತಿಗೆ ಆಗ್ರಹ - religious abuse allegation

ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಧಾರ್ಮಿಕ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

protest-against-alleged-religious-abuse-while-teaching
ಪಾಠ ಮಾಡುವಾಗ ಧಾರ್ಮಿಕ ನಿಂದನೆ ಆರೋಪ: ಶಿಕ್ಷಕಿ ಅಮಾನತಿಗೆ ಆಗ್ರಹ
author img

By ETV Bharat Karnataka Team

Published : Feb 10, 2024, 5:48 PM IST

ಮಂಗಳೂರು: ಪಾಠ ಮಾಡುತ್ತಿರುವಾಗಲೇ ಶಿಕ್ಷಕಿಯೊಬ್ಬರು ಧಾರ್ಮಿಕ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಶಾಲೆಗೆ ಮುತ್ತಿಗೆ ಹಾಕಿ ಹೆತ್ತವರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆದಿದೆ.

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಶಿಕ್ಷಕಿ ಮೇಲೆ ಈ ಆರೋಪ ಕೇಳಿ ಬಂದಿದೆ. ಶುಕ್ರವಾರ ಏಳನೇ ತರಗತಿಗೆ ಈ ಶಿಕ್ಷಕಿ 'Work is Worship' ಪಾಠ ಮಾಡುತ್ತಿದ್ದರು‌. ಈ ವೇಳೆ ಅವರು ಧಾರ್ಮಿಕ‌ ನಿಂದನೆ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳು ಈ ವಿಷಯವನ್ನು ಮನೆಯಲ್ಲಿ ಹೇಳಿದ್ದಾರೆ. ವಿಚಾರ ತಿಳಿದು ಪೋಷಕಿಯೊಬ್ಬರು ಈ ಶಿಕ್ಷಕಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಡಿಯೋ ವೈರಲ್ ಆಗಿದೆ‌.

ಶಿಕ್ಷಕಿಯ ಅಮಾನತಿಗೆ ಗಡುವು: ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಶನಿವಾರ ಮಧ್ಯಾಹ್ನ ವೇಳೆ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಮಧ್ಯಾಹ್ನ ಸೇರಬೇಕೆಂಬ ಆಡಿಯೋ ಕೂಡಾ ವೈರಲ್ ಆಗಿದೆ. ಮಧ್ಯಾಹ್ನ 2 ಗಂಟೆಗೆ ಶಾಲಾ ಆವರಣದಲ್ಲಿ ಸೇರಬೇಕಾಗಿ ಸಂದೇಶ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗೆ ಪೊಲೀಸ್ ಭದ್ರತೆ ನೀಡಲಾಗಿತ್ತು. ಮಧ್ಯಾಹ್ನವಾಗುತ್ತಲೇ ಶಾಲಾ ಆವರಣದಲ್ಲಿ ಜಮಾವಣೆಯಾದ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಿಕ್ಷಕಿಯ ಅಮಾನತಿಗೆ ಪಟ್ಟು ಹಿಡಿದರು. ಅಲ್ಲದೆ ಶಿಕ್ಷಕಿಯ ಅಮಾನತು ಮಾಡಬೇಕೆಂದು ಮುಖ್ಯ ಶಿಕ್ಷಕರಿಗೆ ಮೂರು ದಿನಗಳ ಗಡುವು ನೀಡಿದ್ದಾರೆ.

ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್, ''ಧಾರ್ಮಿಕವಾಗಿ ಮತ್ತು ಪ್ರಧಾನಮಂತ್ರಿಗಳ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಾಂಶುಪಾಲರ ಜೊತೆಗೆ ಮಾತನಾಡಲಾಗಿದೆ. ಅವರು ಶಾಲಾ ಶಿಕ್ಷಕಿ‌ ಆ ರೀತಿ ಮಾತಾಡಿಲ್ಲ ಎಂದು ಹೇಳಿದ್ದಾರೆ. ಪ್ರಾಂಶುಪಾಲರು ಕಾಲಾವಕಾಶ ಕೇಳಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಮಾಹಿತಿ ನೀಡುತ್ತೇನೆ ಅಂದಿದ್ದಾರೆ. ಆ ಬಳಿಕ ಈ ಬಗ್ಗೆ ಪರಿಶೀಲಿಸಲಾಗುವುದು'' ಎಂದು ತಿಳಿಸಿದರು.

ಇದನ್ನೂ ಓದಿ: ರಾಯಚೂರು: ಒಂದೇ ಕಾಮಗಾರಿಗೆ 2 ಬಾರಿ ಬಿಲ್ ಮಂಜೂರು ಮಾಡಿದ ಅಧಿಕಾರಿಗಳ ಅಮಾನತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.