ETV Bharat / state

ಹುಬ್ಬಳ್ಳಿ ಯುವತಿ ಕೊಲೆ ಕೇಸ್: ಆರೋಪಿಯ ಹುಟ್ಟೂರು ಮುನವಳ್ಳಿ ಬಂದ್, ಗಲ್ಲು ಶಿಕ್ಷೆಗೆ ಆಗ್ರಹ - Hubballi College Girl Murder Case - HUBBALLI COLLEGE GIRL MURDER CASE

ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಪ್ರಕರಣ ಖಂಡಿಸಿ ಪ್ರಕರಣದ ಆರೋಪಿಯ ಹುಟ್ಟೂರಲ್ಲಿ ಇಂದು ಪ್ರತಿಭಟನೆ ನಡೆಯಿತು. ಎಲ್ಲ ಸಮುದಾಯದವರೂ ಬೆಂಬಲ ನೀಡಿದರು.

Etv Bharat
Etv Bharat
author img

By ETV Bharat Karnataka Team

Published : Apr 19, 2024, 4:29 PM IST

Updated : Apr 19, 2024, 5:43 PM IST

ಆರೋಪಿಯ ಹುಟ್ಟೂರು ಮುನವಳ್ಳಿ ಬಂದ್

ಬೆಳಗಾವಿ: ಹುಬ್ಬಳ್ಳಿ ಕಾಲೇಜು ಕ್ಯಾಂಪಸ್‌ನಲ್ಲಿ ನಿನ್ನೆ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಆರೋಪಿಯ ಹುಟ್ಟೂರು ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣ ಬಂದ್ ಮಾಡಿ ಇಂದು ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದರು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

ಮುನವಳ್ಳಿಯ ಪಂಚಲಿಂಗೇಶ್ವರ ದೇವಸ್ಥಾನ ಕ್ರಾಸ್ ಬಳಿ ಯರಗಟ್ಟಿ-ಸವದತ್ತಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಮಾನವೀಯವಾಗಿ ಯುವತಿ ಹತ್ಯೆಗೈದ ಆರೋಪಿ ಫಯಾಜ್​​ಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಬಂದ್​​ಗೆ ಎಲ್ಲ ಸಮುದಾಯದವರೂ ಬೆಂಬಲ ನೀಡಿದರು. ಪಟ್ಟಣದ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ವ್ಯಾಪಾರಿಗಳು ಮುಚ್ಚಿದರು. ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೂರು ಕೆಎಸ್ಆರ್‌ಪಿ, ಒಂದು ಡಿಆರ್ ತುಕಡಿ ಸೇರಿ ನೂರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಅಲ್ಲದೇ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮುನವಳ್ಳಿಯಲ್ಲಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಈರಣ್ಣ ಕಡಾಡಿ, "ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂಥ ಘಟನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮತ ಬ್ಯಾಂಕ್​​ಗೋಸ್ಕರ ತುಷ್ಠೀಕರಣ ನೀತಿಯಿಂದಾಗಿ ಇಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮೇಶ್ವರಂ ಕೆಫೆ ಮತ್ತು ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಕೇವಲ ಬಂಧಿಸಿದರೆ ಸಾಲದು. ಯುಪಿ ಮಾದರಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕು" ಎಂದರು. ಮುಂಜಾಗೃತಾ ಕ್ರಮವಾಗಿ ಮುನವಳ್ಳಿಯ ಸಾಯಿನಗರದಲ್ಲಿರುವ ಆರೋಪಿಯ ಮನೆಗೆ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಕಾಲೇಜು‌ ಕ್ಯಾಂಪಸ್​ನಲ್ಲಿ ಯುವತಿಯ ಕೊಲೆ: ಪೊಲೀಸ್ ಕಮೀಷನರ್ ಹೇಳಿದ್ದೇನು? - College Girl Murder

ಮಾಧ್ಯಮಗಳ ಜೊತೆಗೆ ಮಾತನಾಡಿದ ಡಾ.ಭೀಮಾಶಂಕರ ಗುಳೇದ, "ಯುವತಿ ಕೊಲೆಯಿಂದ ಪಟ್ಟಣದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿತ್ತು. ಶಾಂತಿಯುತ ಪ್ರತಿಭಟನೆಗೆ ಅವಕಾಶ ಮಾಡಿಕೊಡಲಾಗಿತ್ತು. ಆರೋಪಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಈಗಾಗಲೇ ಹುಬ್ಬಳ್ಳಿ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಸವದತ್ತಿ ಹಾಗೂ ಮುನವಳ್ಳಿಯಲ್ಲಿ ಶಾಂತಿ ಸುವ್ಯವಸ್ಥೆ ಚೆನ್ನಾಗಿದೆ. ಅದನ್ನು ಕಾಪಾಡಿಕೊಳ್ಳಲು ನಮಗೆ ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ. ಕೊಲೆಯಲ್ಲಿ ಆರೋಪಿ ಕುಟುಂಬಸ್ಥರ ಪಾತ್ರ ಇಲ್ಲ. ಕೊಲೆ ಆರೋಪಿ ಮೇಲೆ ಮಾತ್ರ ಜನರ ಆಕ್ರೋಶ ಇದೆ. ಈವರೆಗೆ ಆರೋಪಿ ಮನೆ ಕಡೆಗೆ ಯಾರೂ ಹೋಗಿಲ್ಲ. ಹೀಗಾಗಿ ಜನರಿಗೆ ಧನ್ಯವಾದ ಹೇಳುತ್ತೇನೆ" ಎಂದರು.

ಎಬಿವಿಪಿ ಪ್ರತಿಭಟನೆ: ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಳಗಾವಿಯ ಚೆನ್ನಮ್ಮನ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. 50ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ನಗರದ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. 1 ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇದೇ ವೇಳೆ ಎಬಿವಿಪಿ ಮುಖಂಡ ರೋಹಿತ್ ಉಮಾನಾಬಾದಿಮಠ ಮಾಧ್ಯಮಗಳ ಜೊತೆಗೆ ಮಾತನಾಡಿ, "ಕೊಲೆ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ, ಗೃಹ ಸಚಿವರು ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಅಂತಾ ಹೇಳಿದ್ದಾರೆ. ಗೃಹ ಸಚಿವರ ಹೇಳಿಕೆ ನೋಡಿದ್ರೆ ಹಾಸ್ಯಾಸ್ಪದ ಎನಿಸುತ್ತಿದೆ" ಎಂದು ಕಿಡಿಕಾರಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು: ಪ್ರಲ್ಹಾದ್​ ಜೋಶಿ ಆಗ್ರಹ - Pralhad Joshi

Last Updated : Apr 19, 2024, 5:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.