ಹಾವೇರಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಜಾಗೃತ ನಾಗರಿಕ ವೇದಿಕೆಯು ಶುಕ್ರವಾರ ಪ್ರತಿಭಟನೆ ಮತ್ತು ಪಂಜಿನ ಮೆರವಣಿಗೆ ನಡೆಸಿತು. ನಗರದ ಹುಕ್ಕೇರಿಮಠದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾವೇರಿ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಕರ್ಜಿಗಿ ಗೌರಿಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಬಣ್ಣದಮಠ ಅಭಿನವರುದ್ರ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಅಕ್ಕಿ ಆಲೂರಿನ ಚೆನ್ನವೀರ ಸ್ವಾಮೀಜಿ ಮತ್ತು ಅಗಡಿ ಅಕ್ಕಿಮಠದ ಬಸವಲಿಂಗ ಸ್ವಾಮೀಜಿ ಪಾಲ್ಗೊಂಡಿದ್ದರು.
ವಿವಿಧ ಹಿಂದೂಪರ ಸಂಘಟನೆಗಳ ಸದಸ್ಯರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ವಧರ್ಮ ಸಹಿಷ್ಣುರಾಗಿರುವ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ನಂತರ ಹುಕ್ಕೇರಿಮಠದಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.
ಪಂಜಿನ ಮೆರವಣಿಗೆಯಲ್ಲಿ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು, ಹಾವೇರಿ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಕರ್ಜಿಗಿ ಗೌರಿಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಬಣ್ಣದಮಠ ಅಭಿನವರುದ್ರ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಅಕ್ಕಿಆಲೂರಿನ ಚೆನ್ನವೀರ ಸ್ವಾಮೀಜಿ ಅಗಡಿ ಅಕ್ಕಿಮಠದ ಬಸವಲಿಂಗ ಸ್ವಾಮೀಜಿ ಪಂಜು ಹಿಡಿದು ಪಂಜಿನ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು, ಸದಸ್ಯರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಬಿತ್ತಿಪತ್ರ ಹಿಡಿದು ಆಕ್ರೋಶ ಹೊರಹಾಕಿದರು. ಹುಕ್ಕೇರಿಮಠದಿಂದ ಆರಂಭವಾದ ಪಂಜಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪಂಜಿನೆ ಮೆರವಣಿಗೆಯಲ್ಲಿ ಬಾಂಗ್ಲಾ ಸರ್ಕಾರದ ವಿರುದ್ಧ ಪ್ರತಿಭಟನಾನಿರತರು ಘೋಷಣೆ ಕೂಗಿದರು.
ಈ ಕೂಡಲೇ ಬಾಂಗ್ಲಾದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸುವಂತೆ ಆಗ್ರಹಿಸಿದರು. ಜೈಶ್ರೀರಾಮ ಘೋಷಣೆ ಕೂಗಿದ ಕಾರ್ಯಕರ್ತರು, ಭಾರತದ ಪರ ಜಯಘೋಷ ಹಾಕಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪಂಜಿನ ಮೆರವಣಿಗೆ ಹೊಸಮನಿ ಸಿದ್ದಪ್ಪ ವೃತ್ತದದಲ್ಲಿ ಬಂದು ಸೇರಿತು.
ಇದನ್ನೂ ಓದಿ: ಬಾಂಗ್ಲಾ ಹಿಂದೂ ನಾಯಕ ಕೃಷ್ಣದಾಸ್‌ಗಿಲ್ಲ ಜಾಮೀನು; ದಾಳಿ ಭೀತಿಯಿಂದ ವಾದ ಮಂಡಿಸಲು ವಕೀಲರ ಹಿಂದೇಟು