ETV Bharat / state

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಹಕ್ಕು, ಸಣ್ಣ ಹಾನಿಯೂ ಸಹಜ: ಹೈಕೋರ್ಟ್ - High Court

ಪತ್ರಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಬಹುಮುಖ್ಯ ಹಕ್ಕು. ಈ ವೇಳೆ ಸಾರ್ವಜನಿಕ ಆಸ್ತಿಗೆ ಸಣ್ಣ-ಪುಟ್ಟ ಹಾನಿ ಸಂಭವಿಸುವುದು ಸಹಜ'' ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

author img

By ETV Bharat Karnataka Team

Published : Jul 6, 2024, 8:09 AM IST

Bengaluru  High Court  Protest is a right in a democracy
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಹಕ್ಕು, ಸಣ್ಣ ಹಾನಿಯೂ ಸಹಜ: ಹೈಕೋರ್ಟ್ (ETV Bharat)

ಬೆಂಗಳೂರು: ಪತ್ರಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಬಹುಮುಖ್ಯ ಹಕ್ಕು ಎಂದು ಬಲವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್, ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಸಣ್ಣ-ಪುಟ್ಟ ಹಾನಿ ಸಂಭವಿಸುವುದು ಸಹಜ ಎಂದು ತಿಳಿಸಿದೆ.

ಪೆಟ್ರೋಲ್ - ಡಿಸೇಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಹಾಗೂ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೆ, ಅರ್ಜಿದಾರ ಸುವಿನ್ ಗಣಪತಿ ವಿರುದ್ಧದ ದೂರು ಹಾಗೂ ಆ ಕುರಿತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದ ನ್ಯಾಯಪೀಠ, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರ ಅರುಣ್ ಶ್ಯಾಮ್, ಅರ್ಜಿದಾರರರ ಕಾನೂನು ಪಾಲಿಸುವ ನಾಗರಿಕರಾಗಿದ್ದಾರೆ. ಪ್ರಕರಣ ಸಂಬಂಧ ಅರ್ಜಿದಾರರು ಅನುಮತಿ ಪಡೆದುಕೊಂಡೇ ಪ್ರತಿಭಟನೆ ನಡೆಸಿದ್ದಾರೆ. ಆದರೆ, ರಾಜಕೀಯ ಪ್ರೇರಿತವಾಗಿ ಅವರ ವಿರುದ್ಧ ಇಲ್ಲ - ಸಲ್ಲದ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಆದ್ದರಿಂದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪ ವ್ಯಕ್ತಿಪಡಿಸಿದ ಸರ್ಕಾರಿ ವಕೀಲರು, ''ಪ್ರತಿಭಟನೆ ಶಾಂತಿಯಿಂದ ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಪ್ರತಿಭಟನೆ ನಡೆಸುವ ನೆಪದಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ. ಎರಡು ಗಂಟೆಗಳ ಹೆಚ್ಚು ಕಾಲ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅಡಚಣೆ ಮಾಡಿದ್ದಾರೆ. ಪರಿಣಾಮ ಸಾಮಾನ್ಯರಿಗೆ ಹಲವು ರೀತಿಯಲ್ಲಿ ತೊಂದರೆಯಾಗಿದೆ. ಆದ್ದರಿಂದ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬಾರದು'' ಎಂದು ಮನವಿ ಮಾಡಿದರು.

ಈ ವೇಳೆ ನ್ಯಾಯಪೀಠ, ''ಪತ್ರಿಭಟನೆ ಮಾಡುವುದು ಪ್ರಜಾಪ್ರಭುತ್ವದ ಬಹು ಮುಖ್ಯ ಹಕ್ಕು. ಪ್ರಕರಣದಲ್ಲಿ ರಸ್ತೆ ಡಾಂಬರ್​ಗೆ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಅದು ಸಹಜ, ಇದು ಪ್ರಯೋಗ ಶಾಲೆಯಲ್ಲಿ ನಡೆಯುವ ಪ್ರತಿಭಟನೆಯಲ್ಲ. ಬದಲಿಗೆ ಪೆಟ್ರೋಲ್- ಡೀಸೆಲ್ ಬೆಲೆ ವಿಚಾರವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುವ ಪ್ರತಿಭಟನೆಯಾಗಿದೆ. ಸಿಗರೇಟ್ ತಾಗಿದರೂ ಅಲ್ಪ ಪ್ರಮಾಣದಲ್ಲಿ ರಸ್ತೆಗೆ ಹಾನಿಯಾಗುತ್ತದೆ. ಅದಕ್ಕೆ ಏನೂ ಮಾಡಲು ಸಾಧ್ಯವಾಗುವುದಿಲ್ಲ'' ಎಂದು ಹೇಳಿದೆ.

ಈ ವೇಳೆ ಸರ್ಕಾರಿ ಪರ ವಕೀಲರು ಉತ್ತರಿಸಿ, ಒಂದು ರೂಪಾಯಿ ಹಾನಿಯಾದರೂ ಅಥವಾ 50 ಸಾವಿರ ರೂಪಾಯಿ ಹಾನಿಯಾದರೂ ಅದು ಸಾರ್ವಜನಿಕ ಆಸ್ತಿಯಲ್ಲವೇ. ಹಾಗಾಗಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ನ್ಯಾಯಪೀಠ ಪ್ರತಿಕ್ರಿಯಿಸಿ, ಸ್ಥಳ ಮಹಜರು ವರದಿಯಲ್ಲಿ ಸಾರ್ವಜನಿಕ ಆಸ್ತಿಯ ಹಾನಿ ಕುರಿತು ಉಲ್ಲೇಖಿಸಿಲ್ಲ. ಈ ರೀತಿ ಸಣ್ಣ-ಪುಟ್ಟ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಾಗುವುದಿಲ್ಲ ಎಂದು ಹೇಳಿತು. ಹಾಗೆಯೇ, ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಎಲ್ಲ ಕಾನೂನು ಪ್ರಕ್ರಿಯೆ ಹಾಗೂ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ 2024 ಜೂ.20 ರಂದು ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ನೇತೃತ್ವದಲ್ಲಿ ವಿರಾಜಪೇಟೆ ಬಿಜೆಪಿ ಕಚೇರಿ ಬಳಿ ಗುಂಪುಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಿಂದ ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡಿದೆ ಎಂದು ಆರೋಪಿಸಿ ವಿರಾಜ್ ಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಅರ್ಜಿದಾರರ ವಿರುದ್ಧ ದೂರು ದಾಖಲಾಗಿತ್ತು. ಅದನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ನ್ಯಾಯಬೆಲೆ ಅಂಗಡಿ ಅಕ್ಕಿ ಹೋಟೆಲ್‌ಗಳಿಗೆ ಮಾರಾಟ: ಹೈಕೋರ್ಟ್ ತೀವ್ರ ಅಸಮಾಧಾನ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.