ETV Bharat / state

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಫ್ರೀಡಂ ಪಾರ್ಕ್​ನಲ್ಲಿ ನಡೆದ ಬೃಹತ್ ಪ್ರತಿಭಟನೆ
ಫ್ರೀಡಂ ಪಾರ್ಕ್​ನಲ್ಲಿ ನಡೆದ ಬೃಹತ್ ಪ್ರತಿಭಟನೆ (ETV Bharat)
author img

By ETV Bharat Karnataka Team

Published : 8 hours ago

ಬೆಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ನಗರದ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬಾಂಗ್ಲಾದೇಶ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ, ಬಾಂಗ್ಲಾದೇಶದ ರಾಷ್ಟ್ರಧ್ವಜ ಮತ್ತು ಪ್ರಧಾನಿ ಮಹಮ್ಮದ್ ಯೂನಸ್ ಭಾವಚಿತ್ರವನ್ನು ಬೂಟಿನಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಬೇಲಿ ಮಠದ ಶಿವರುದ್ರ ಮಹಾಸ್ವಾಮಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಂತಿ, ಸೌಹಾರ್ದತೆ ನೆಲೆಸಲು ವಿಶ್ವಸಂಸ್ಥೆಗೆ ಪತ್ರ ಬರೆಯಬೇಕು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸೆ, ದೌರ್ಜನ್ಯ ಖಂಡನೀಯ. ಹಿಂದೂ ಸಮಾಜ ಜಾಗೃತರಾಗಿ ಸಂಘಟಿತರಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮಗೂ ಇಂತಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದರು.

ಫ್ರೀಡಂ ಪಾರ್ಕ್​ನಲ್ಲಿ ನಡೆದ ಬೃಹತ್ ಪ್ರತಿಭಟನೆ
ಫ್ರೀಡಂ ಪಾರ್ಕ್​ನಲ್ಲಿ ನಡೆದ ಬೃಹತ್ ಪ್ರತಿಭಟನೆ (ETV Bharat)

ಪ್ರಜಾಪ್ರಭುತ್ತ ಮತ್ತು ರಾಜಪ್ರಭುತ್ವಕ್ಕೆ ವ್ಯತ್ಯಾಸವಿದೆ. ಒಂದು ರಾಜ್ಯವನ್ನು ಕಾಪಾಡಬೇಕಾದರೆ ರಾಜರು ಮತ್ತು ಸೈನ್ಯ ಎಚ್ಚರವಿದ್ದರೆ ಸಾಕು. ಆದರೆ ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ರಾಜರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಅಧಿಕಾರಿಗಳು, ಈ ಲೆಕ್ಕದಲ್ಲಿ ನಾವೆಲ್ಲ ನಮ್ಮ ಬಹುಮತವನ್ನು ಸರ್ಕಾರಕ್ಕೆ ತಲುಪಿಸಿ, ಸರ್ಕಾರದ ಹಿಂದೆ ಬೆಂಬಲವಾಗಿ ನಿಂತು ಇಡೀ ವಿಶ್ವದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ದರ್ಪ, ದೌರ್ಜನ್ಯಗಳನ್ನು ವಿರೋಧಿಸುವತ್ತ ನಾವು ಒಂದಾಗಬೇಕಿದೆ ಎಂದು ಕರೆ ನೀಡಿದರು.

ಕ್ಯಾಥೋಲಿಕ್ ಕ್ರಿಶ್ಚಿಯನ್ ಅಸೋಸಿಯೇಶನ್ ರಾಜ್ಯ ಸಂಯೋಜಕ ಶಾಂತಕುಮಾರ್ ಕನಡಿ ಮಾತನಾಡಿ, ಮಾನವೀಯ ಹಾಗೂ ನೈತಿಕ ಮೌಲ್ಯಗಳಿಗೆ ಧಕ್ಕೆಯಂಟಾದಾಗ ಎಲ್ಲ ಹಿಂದೂಗಳು ಒಂದುಗೂಡಬೇಕು. ಬಾಂಗ್ಲಾ ದೇಶದಲ್ಲಿ ಜನಾಂಗೀಯ ಹಿಂಸೆ ಮಿತಿ ಮೀರಿದ್ದು, ಆ ನೆಲೆಯಲ್ಲಿ ಶಾಂತಿಗೆ ಭಂಗ ತರುವ ಕೆಲಸವಾಗುತ್ತಿದೆ. ಆದರೆ, ಇಲ್ಲಿನ ಮುಸಲ್ಮಾನ ಬಾಂಧವರು ಇಂತಹ ವಿಚಾರದಲ್ಲಿ ಮೌನವಹಿಸಿರುವುದು ಸರಿಯಲ್ಲ ಎಂದು ಖಂಡನೆ ವ್ಯಕ್ತಪಡಿಸಿದರು.

ಸಾಮಾಜಿಕ ಕಾರ್ಯಕರ್ತ ಗಿರಿಧರ್ ಉಪಾಧ್ಯಾಯ ಮಾತನಾಡಿ, ಬೆಂಗಳೂರಿನಲ್ಲಿಯೂ ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ. ಅವರನ್ನು ಪತ್ತೆ ಹಚ್ಚಿ, ಹೊರಗಟ್ಟುವ ಕೆಲಸವಾಗಬೇಕು. ಇಲ್ಲವಾದಲ್ಲಿ ಬಾಂಗ್ಲಾದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಲಿದೆ. ಬಾಂಗ್ಲಾದಲ್ಲಿ 1,400 ಹಿಂದೂ ಶಿಲ್ಪಗಳು, ದೇವಾಲಯಗಳನ್ನು ನಾಶಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ ಎಸಗಲಾಗಿದೆ. ನರಮೇಧ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ರಕ್ಷಣೆಗೆ ಮುಂದಾಗಿಲ್ಲ. ಈ ಕುರಿತು ಹಿಂದೂಗಳು ಎಚ್ಚರಗೊಳ್ಳಬೇಕು ಎಂದು ಎಚ್ಚರಿಸಿದರು.

ತುಮಕೂರಿನಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ: ಮತ್ತೊಂದೆಡೆ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ತುಮಕೂರು ನಗರದಲ್ಲಿ ಮಠಾಧೀಶರು ಮತ್ತು ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಟೌನ್​ಹಾಲ್ ಸರ್ಕಲ್​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಮಠಗಳ ಮಠಾಧೀಶರು, ಬಿಜೆಪಿ ಶಾಸಕ ಜ್ಯೋತಿ ಗಣೇಶ್,​ ಮಾಜಿ ಶಾಸಕ ಸೊಗಡು ಶಿವಣ್ಣ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು.

ಉಡುಪಿಯಲ್ಲಿ ಬೃಹತ್‌ ಪ್ರತಿಭಟನೆ: ಮತ್ತೊಂದೆಡೆ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್‌ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿಯಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ನಡೆಯಿತು.

'ಅಹಿಂಸೆ ಎನ್ನುವುದಕ್ಕೆ ನಾವೇನು ಮಹಾತ್ಮ ಗಾಂಧಿಗಳಲ್ಲ': ಮತ್ತೊಂದೆಡೆ, ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿಯ ಗಡಗಿ ಚೆನ್ನಪ್ಪ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಮಾತನಾಡಿ, "ಅಹಿಂಸೆ ಎನ್ನುವುದಕ್ಕೆ ನಾವೇನು ಮಹಾತ್ಮ ಗಾಂಧಿಗಳಲ್ಲ, ನಾಥುರಾಮ್ ಗೋಡ್ಸೆ ಬರಬೇಕು. ಆಗ ಮಾತ್ರ ಹಿಂದೂಗಳ ರಕ್ಷಣೆ ಸಾಧ್ಯ. ಯುವಕರ ರಕ್ತ ಕುದಿಯುತ್ತಿದೆ. ಯಾವಾಗ ಅದು ಸ್ಪೋಟಗೊಳ್ಳುತ್ತೋ ಆಗ ಬಾಂಗ್ಲಾ ರಕ್ತದಲ್ಲಿ ಕೊಚ್ಚಿ ಹೋಗುತ್ತದೆ. ಬಾಂಗ್ಲಾದೇಶದಲ್ಲಿನ ದೌರ್ಜನ್ಯಗಳನ್ನು ನೋಡಿ ಸುಮ್ಮನೆ ಕುಳಿತುಕೊಳ್ಳಲು ನಾವೇನೂ ಬಳೆ ತೊಟ್ಟಿಲ್ಲ. ಕೇಂದ್ರ ಸರ್ಕಾರ ಸುಮ್ಮನೆ ಕೂತರೂ ಹಿಂದೂಗಳೆಲ್ಲ ಹೋಗಿ ಸರಿಯಾದ ಪಾಠ ಕಲಿಸಬೇಕು. ನಮಗೆ ಜನಸಂಖ್ಯೆ ನಿಯಂತ್ರಣ ಬೇಡ, ಆರು ಜನ ಮಕ್ಕಳನ್ನು ಹೆರುವ ಮೂಲಕ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು" ಎಂದರು.

ಇದನ್ನೂ ಓದಿ: ನಾನೊಬ್ಬ ಕೃಷ್ಣ ಭಕ್ತೆ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲಾಗದು: ಹೇಮಾಮಾಲಿನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.