ETV Bharat / state

545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ - PSI PROVISIONAL SELECT LIST OUT

545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ರಾಜ್ಯ ಪೊಲೀಸ್​ ಇಲಾಖೆ ಪ್ರಕಟಿಸಿದೆ.

ರಾಜ್ಯ ಪೊಲೀಸ್​ ಇಲಾಖೆ
ರಾಜ್ಯ ಪೊಲೀಸ್​ ಇಲಾಖೆ (ETV Bharat)
author img

By ETV Bharat Karnataka Team

Published : Oct 21, 2024, 5:45 PM IST

ಬೆಂಗಳೂರು: 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ಭರ್ತಿಗೆ (ಪಿಎಸ್ಐ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಪರೀಕ್ಷೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಗೃಹ​ ಇಲಾಖೆ ಪ್ರಕಟಿಸಿದೆ.

ಪಿಎಸ್ಐ ನೇರ ನೇಮಕಾತಿ ಕುರಿತಂತೆ 2021ರಲ್ಲಿ ಗೃಹ ಇಲಾಖೆಯು ಅಧಿಸೂಚನೆ ಹೊರಡಿಸಿತ್ತು. 2022ರ ನ.3ರಂದು ಪರೀಕ್ಷೆ ನಡೆದಿತ್ತು. ನೇಮಕಾತಿಯಲ್ಲಿ ಅಕ್ರಮ ಕಂಡುಬಂದ ಕಾರಣ ನೇಮಕಾತಿಯಾಗಿದ್ದ 545 ಮಂದಿಯ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಮರುಪರೀಕ್ಷೆ ನಡೆಸುವಂತೆ ಆದೇಶಿಸಿತ್ತು.

ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ನಿರ್ದೇಶಿಸಿ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಸರ್ಕಾರ ಕೆಇಎಗೆ ವಹಿಸಿತ್ತು. ಇದರಂತೆ ಜನವರಿ 23ರಂದು ಪರೀಕ್ಷೆ ನಡೆದಿತ್ತು.

ಇದನ್ನೂ ಓದಿ: ಶಿವಮೊಗ್ಗದಲ್ಲಿದೆ ಉದ್ಯೋಗವಕಾಶ; ಗುತ್ತಿಗೆ ಆಧಾರದ ಮೇಲೆ ನೇಮಕಾತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.