ETV Bharat / state

ಬೆಂಗಳೂರಲ್ಲಿ ನಾಳೆ ಪಿಎಸ್ಐ ಮರುಪರೀಕ್ಷೆ: ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತೆ ಶುಭ ಕೋರಿದ ಪರಮೇಶ್ವರ್ - ಗೃಹ ಸಚಿವ ಪರಮೇಶ್ವರ್

ಪಿಎಸ್​ಐ ನೇಮಕಾತಿ ಮರು ಪರೀಕ್ಷೆ ನಾಳೆ ಬೆಂಗಳೂರಿನ 117 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Etv Bharat
Etv Bharat
author img

By ETV Bharat Karnataka Team

Published : Jan 22, 2024, 8:36 PM IST

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಬ್ - ಇನ್ಸ್​ಪೆಕ್ಟರ್ (ಸಿವಿಲ್) (ಪುರುಷ-ಮಹಿಳಾ) ನೇರ ನೇಮಕಾತಿ ಮರುಪರೀಕ್ಷೆ ಮಂಗಳವಾರ ನಡೆಯಲಿದೆ. ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಪಿಎಸ್‌ಐ ಮರು ಪರೀಕ್ಷೆ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಾಳೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್ -1 (50 ಅಂಕ) ಹಾಗೂ ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಪತ್ರಿಕೆ -2 (150 ಅಂಕ) ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವುದರಿಂದ ಬೆಳಗ್ಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ನೀರಿನ ಬಾಟಲ್, ಮೊಬೈಲ್‌ಗಳನ್ನು ನಿಷೇಧಿಸಲಾಗಿದೆ. ಮೊಬೈಲ್‌ನಲ್ಲಿ ಗುರುತಿನ ಚೀಟಿ ತೋರಿಸಲು ಅವಕಾಶವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ‌ ಪೋಸ್ಟ್ ಮಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, 'ನಾಳೆ ನಡೆಯಲಿರುವ ಪಿಎಸ್ಐ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. ಪರೀಕ್ಷೆ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ‌ ಕೈಗೊಳ್ಳಲಾಗಿದ್ದು, ಸುಸೂತ್ರವಾಗಿ ನಡೆಯಲಿದೆ. ಯಾವುದೇ ರೀತಿಯ ಆತಂಕವಿಲ್ಲದೇ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ' ಎಂದು ಶುಭ ಕೋರಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಸಬ್ - ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಗಳು ನಡೆಯುವ ಎಲ್ಲ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ನಾಳೆ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಕ್ತಾಯಗೊಳ್ಳುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ: ಪೊಲೀಸ್ ಆಯುಕ್ತ ದಯಾನಂದ್

ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ: ಇನ್ನು ಶುಕ್ರವಾರವಷ್ಟೇ ಪಿಎಸ್ಐ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಅಂತೆಯೇ ಚಂದ್ರಾಲೇಔಟ್ ಪೊಲೀಸರು, ಪಿಎಸ್​ಐಯೊಬ್ಬರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಳಿಕ ಸಿಸಿಬಿ ವಶಕ್ಕೆ ನೀಡಿದ್ದರು. ಬಳಿಕ ಸಿಸಿಬಿ ಪೊಲೀಸರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ವಿಚಾರಣೆ ನಡೆಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.