ETV Bharat / state

ಪದವಿ ಪ್ರಮಾಣಪತ್ರವಿದ್ದರೆ 3 ವರ್ಷದ ಎಲ್‌ಎಲ್‌ಬಿ ಕೋರ್ಸ್​ಗೆ ಪಿಯುಸಿ ಪ್ರಮಾಣಪತ್ರ ಅಗತ್ಯವಿಲ್ಲ: ಹೈಕೋರ್ಟ್ - PU CERTIFICATE NOT REQUIRED FOR LLB

ಮೂರು ವರ್ಷಗಳ ಕಾನೂನು ಪದವಿಗೆ ನೋಂದಣಿ ಮಾಡಿಸಿಕೊಳ್ಳಲು ಪದವಿ ಪ್ರಮಾಣಪತ್ರವಿದ್ದರೆ, ಪಿಯುಸಿ ಪ್ರಮಾಣಪತ್ರದ ಅಗತ್ಯತೆ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : 20 hours ago

ಬೆಂಗಳೂರು: ಬಾರ್ ಕೌನ್ಸಿಲ್ ಆಫ್ ಇಂಡಿಯಾ ನಿಯಮ 5ರ ಪ್ರಕಾರ ಮೂರು ವರ್ಷದ ಕಾನೂನು ಪದವಿಗೆ (ಎಲ್‌ಎಲ್‌ಬಿ) ನೋಂದಣಿಯಾಗಲು ಮೂರು ವರ್ಷದ ಯಾವುದೇ ಪದವಿ ಪ್ರಮಾಣ ಪತ್ರ ಹೊಂದಿದ್ದಲ್ಲಿ, ಪಿಯುಸಿ ಉತ್ತೀರ್ಣರಾದ ಪ್ರಮಾಣಪತ್ರದ ಅಗತ್ಯತೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಉದ್ಯೋಗ ಆಧಾರಿತ ಪದವಿಪೂರ್ವ ಶಿಕ್ಷಣ (ಜೆಒಸಿ) ಪಡೆದಿದ್ದ ಕಾರಣದಿಂದ ಕಾನೂನು ಪದವಿ ಅಧ್ಯಯನಕ್ಕೆ ಅವಕಾಶ ನೀಡದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರಮ ಪ್ರಶ್ನಿಸಿ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರಾಕೇಶ್ ಶೆಟ್ಟಿ ಎಂಬವರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಾರ್ ಕೌನ್ಸಿಲ್ ನಿಯಮ 5(ಎ) ಪ್ರಕಾರ 3 ವರ್ಷದ ಕಾನೂನು ಪದವಿಗೆ ನೋಂದಣಿ ಆಗಬೇಕಾದರೆ ಪದವಿ ಪ್ರಮಾಣಪತ್ರವನ್ನು ನೀಡಿದ್ದರೆ, ಪಿಯುಸಿ (ತತ್ಸಮಾನ) ಪ್ರಮಾಣದ ಅಗತ್ಯತೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಆದರೂ, ಐದು ವರ್ಷದ ಕಾನೂನು ಪದವಿಗೆ ಅರ್ಜಿ ಸಲ್ಲಿಸಿದಾಗ ಎಸ್​ಎಸ್​ಎಲ್​ಸಿ ಪಾಸಾದ ಬಳಿಕ ಎರಡು ವರ್ಷ (ಸಿಬಿಎಸ್​ಸಿ ಅಥವಾ ಐಸಿಎಸ್‌ಇ ಅಥವಾ ದ್ವಿತೀಯ ಪಿಯುಸಿ) ಅಧ್ಯಯನ ಅವಶ್ಯವಾಗಿರಲಿದೆ ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರ ರಾಕೇಶ್ ಶೆಟ್ಟಿ 1999ರಲ್ಲಿ ಕಂಪ್ಯೂಟರ್ ತಂತ್ರಾಶಗಳಲ್ಲಿ ಉದ್ಯೋಗ ಆಧಾರಿತ ಪದವಿ ಪೂರ್ವ ಶಿಕ್ಷಣ (ಜೆಒಸಿ) ಅಧ್ಯಯನ ಮಾಡಿದ್ದರು. ಬಳಿಕ 2008ರಲ್ಲಿ ವಾಣಿಜ್ಯ ವಿಭಾಗದಲ್ಲಿ ಪದವಿ (ಬಿಕಾಂ) ಪೂರ್ಣಗೊಳಿಸಿದ್ದರು.

ಹಲವು ವರ್ಷಗಳ ಕಾಲ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿದ ಬಳಿಕ 2024ರಲ್ಲಿ ಕಾನೂನು ಪದವಿ ಪಡೆಯಲು ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಜೊತೆಗೆ, 2024-25ರ ಸಾಲಿಗೆ ಶುಲ್ಕ ಪಾವತಿ ಮಾಡಿದ್ದರು.

ಇದಾದ ಬಳಿಕ, 2021ರ ಆಗಸ್ಟ್ 6ರ ಸರ್ಕಾರದ ಆದೇಶದಂತೆ ಜೆಒಸಿಯನ್ನು ಪಿಯುಸಿಗೆ ಸಮಾನವಾದ್ದು ಎಂದು ಪರಿಗಣಿಸಲಾಗುವುದಿಲ್ಲ. ಹೀಗಾಗಿ, ಅರ್ಜಿದಾರರು ನೋಂದಣಿಗೆ ಅರ್ಹತೆ ಹೊಂದಿರುವುದಿಲ್ಲ ಎಂದು ತಿಳಿಸಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ನೋಂದಣಿಯನ್ನು ನಿರಾಕರಿಸಿತ್ತು. ಈ ಕುರಿತು ಇ-ಮೇಲ್ ಸಂದೇಶವನ್ನು ರವಾನಿಸಿತ್ತು. ಇದನ್ನು ಪ್ರಶ್ನಿಸಿ ರಾಕೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಪೆರಿಫೆರಲ್ ರಿಂಗ್ ರಸ್ತೆಗೆ ಭೂ ಸ್ವಾಧೀನ ಎತ್ತಿಹಿಡಿದ ಹೈಕೋರ್ಟ್

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಕಾನೂನು ಪದವಿಗೆ ಎಸ್​ಎಸ್​ಎಲ್​ಸಿ, ಪಿಯುಸಿ ಹಾಗೂ ಪದವಿ ಅಗತ್ಯವಿದೆ ಎಂದು ಹೇಳಲಾಗಿದೆ. ಆದರೆ, ಅರ್ಜಿದಾರರು ಎಲ್ಲ ಅರ್ಹತೆ ಪಡೆದಿದ್ದಾರೆ'' ಎಂದು ಪೀಠಕ್ಕೆ ವಿವರಿಸಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವಿಶ್ವವಿದ್ಯಾಲಯದ ಪರ ವಕೀಲರು, ''ಜೆಒಸಿಯಲ್ಲಿ ಭಾಷಾ ಅಧ್ಯಯನ ಇರುವುದಿಲ್ಲ. ಇದಕ್ಕಾಗಿ ಅದನ್ನು ಪಿಯುಸಿ ಎಂದು ಪರಿಗಣಿಸದಂತೆ ಸರ್ಕಾರ ಆದೇಶಿಸಿದೆ. ಆದ್ದರಿಂದ ಅರ್ಜಿದಾರರು ಕಾನೂನು ಪದವಿ ನೋಂದಣಿಗೆ ಅರ್ಹರಾಗುವುದಿಲ್ಲ'' ಎಂದು ಪೀಠಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಬಳ್ಳಾರಿ ಖನಿಜ ಪ್ರತಿಷ್ಠಾನ ಟ್ರಸ್ಟ್‌ ಸಂಗ್ರಹಿಸಿದ ನಿಧಿಯಲ್ಲಿ ಶೇ.28ರಷ್ಟನ್ನು ವಿಜಯನಗರಕ್ಕೆ ವರ್ಗಾಯಿಸಲು ಕೋರಿದ್ದ ಅರ್ಜಿ ವಜಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.