ETV Bharat / state

8500 ಕೋಟಿ ರೂ. ವೆಚ್ಚದಲ್ಲಿ ಶರಾವತಿ ವಿದ್ಯುತ್​ಗಾರದಲ್ಲಿ ಪಂಪ್ ಸ್ಟೋರೇಜ್ ನಿರ್ಮಾಣ: ಸಚಿವ ಕೆ ಜೆ ಜಾರ್ಜ್

author img

By ETV Bharat Karnataka Team

Published : Feb 3, 2024, 4:38 PM IST

Updated : Feb 3, 2024, 11:05 PM IST

ಲಿಂಗನಮಕ್ಕಿ ಅಣೆಕಟ್ಟೆಯಿಂದ ಜಲವಿದ್ಯುತ್ ಉತ್ಪಾದಿಸಿ ನೀರು ವಾಪಸ್ ನದಿಗೆ ಕಳುಹಿಸದೇ ಅದನ್ನು ಮರು ಬಳಕೆ ಮಾಡಲು ಪಂಪ್ ಸ್ಟೋರೇಜ್ ಮಾಡಲಾಗುತ್ತಿದೆ. ಇದರಿಂದ 24 ಗಂಟೆ ವಿದ್ಯುತ್ ಉತ್ಪಾದನೆ ಮಾಡಬಹುದು ಎಂದು ಸಚಿವ ಕೆ ಜೆ ಜಾರ್ಜ್ ತಿಳಿಸಿದರು.

Minister KJ George spoke to the media.
ಸಚಿವ ಕೆ ಜೆ ಜಾರ್ಜ್ ಮಾಧ್ಯಮದವರ ಜೊತೆ ಮಾತನಾಡಿದರು.

ಶಿವಮೊಗ್ಗ: ಶರಾವತಿ ವಿದ್ಯುತ್ ಉತ್ಪಾದನೆ ವಿಭಾಗದಲ್ಲಿ ಪಂಪ್ ಸ್ಟೋರೇಜ್ ನಿರ್ಮಿಸಲು ತೀರ್ಮಾನ ತೆಗೆದುಕೊಂಡಿದ್ದೇವೆ. ಇದಕ್ಕಾಗಿ 8,500 ಕೋಟಿ ರೂ. ವೆಚ್ಚ ಮಾಡಿ ಪಂಪ್ ಸ್ಟೋರೇಜ್ ನಿರ್ಮಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಶರಾವತಿ, ವರಾಹಿಯಲ್ಲೂ ಸಹ ಪಂಪ್ ಸ್ಟೋರೇಜ್: ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲಿಂಗನಮಕ್ಕಿ ಅಣೆಕಟ್ಟೆಯಿಂದ ಜಲವಿದ್ಯುತ್ ಉತ್ಪಾದಿಸಿ ನೀರು ವಾಪಸ್ ನದಿಗೆ ಕಳುಹಿಸದೇ ಅದನ್ನು ಮರು ಬಳಕೆ ಮಾಡಲು ಪಂಪ್ ಸ್ಟೋರೇಜ್ ಮಾಡಲಾಗುತ್ತಿದೆ. ಇದರಿಂದ 24 ಗಂಟೆ ವಿದ್ಯುತ್ ಉತ್ಪಾದನೆ ಮಾಡಬಹುದು. ಶರಾವತಿ ಅಲ್ಲದೇ ವರಾಹಿಯಲ್ಲೂ ಸಹ ಪಂಪ್ ಸ್ಟೋರೇಜ್ ನಿರ್ಮಿಸಿ ಹೆಚ್ಚು ವಿದ್ಯುತ್ ಉತ್ಪಾದನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಇರುವ ವಿದ್ಯುತ್ ಅಭಾವ ನೀಗಿಸಲು ಕ್ರಮ ತೆಗೆದುಕೊಂಡಿದ್ದೇವೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದರು.

1.62 ಕೋಟಿ ಕುಟುಂಬಗಳಿಗೆ ನಿರಂತರ ವಿದ್ಯುತ್ ಕೊಡುತ್ತಿದ್ದೇವೆ. ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದೇವೆ. ಮೊದಲು ಮಳೆಗಾಲ ಬಂದಾಗ ಕಲ್ಲಿದ್ದಲು ವಿದ್ಯುತ್​ ಸ್ಥಾವರಗಳನ್ನು ನಾವು ವಾರ್ಷಿಕ ಮೆಂಟೆನೆನ್ಸ್ ಗಾಗಿ ಬಂದ್ ಮಾಡುತ್ತಿದ್ದೆವು. ಈ ವರ್ಷವೂ ಹಾಗೆ ಮಾಡಿದ್ದೆವು. ಆದರೆ ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಯಿತು. 16-17 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಕಳೆದ ವರ್ಷ 8-9 ಮೆಗಾವ್ಯಾಟ್ ಬೇಡಿಕೆ ಇತ್ತು. ಈ ವರ್ಷ ಅದು ದ್ವಿಗುಣವಾಯಿತು. ಇದರಿಂದ ರೈತರಿಗೆ 7 ಗಂಟೆ ಸತತ ವಿದ್ಯುತ್ ನೀಡುವುದನ್ನು ಈಗ 5 ಗಂಟೆಗೆ ಇಳಿಸಿದ್ದೇವೆ ಎಂದು ಸಚಿವರು ವಿವರಿಸಿದರು.

ಈಗ ವಿದ್ಯುತ್ ಅಭಾವವಿಲ್ಲ: ಕಳೆದ ಒಂದು ತಿಂಗಳಿನಿಂದ ಮತ್ತೆ 7 ಗಂಟೆ ತಡೆ ರಹಿತ ವಿದ್ಯುತ್ ನೀಡುತ್ತಿದ್ದೇವೆ. ನಮಗೆ ಈಗ ವಿದ್ಯುತ್ ಅಭಾವವಿಲ್ಲ. ಆದರೆ ಒಂದು ವೇಳೆ ವಿದ್ಯುತ್ ಅಭಾವ ಉಂಟಾದರೆ, ವಿದ್ಯುತ್ ಖರೀದಿಸಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ನಿರಂತರ ಜ್ಯೋತಿ ಕಳಪೆ ಕಾಮಗಾರಿ ತನಿಖೆ ನಡೆದು ವರದಿ ಬಂದರೆ, ಯಾರೇ ತಪ್ಪು ಮಾಡಿದರು ಸಹ ಅವರನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸೇರಿದಂತೆ ಇತರೆ ಪಕ್ಷದವರಿಗೆ ನಮ್ಮ ಗ್ಯಾರಂಟಿ ನೋಡಿ ಸಹಿಲು ಅಗುತ್ತಿಲ್ಲ ಎಂದು ಈಗ ಸಿಎಂ ಹೇಳಿದ್ದಾರೆ. ಎಲ್ಲ ಗ್ಯಾರಂಟಿಯನ್ನು ನೀಡುತ್ತೇವೆ ಎಂದು ಹೇಳಿದ್ದರು. ಹಿಂದೆ ಬಂಗಾರಪ್ಪನವರು ಕೃಷಿಗೆ ಉಚಿತ ವಿದ್ಯುತ್ ಯೋಜನೆ ಜಾರಿಗೆ ತಂದರು. ಈಗಲೂ ಅದು ಮುಂದುವರಿದುಕೊಂಡು ಹೋಗಿದೆ. ಕಾಂಗ್ರೆಸ್ ಒಂದು ಬಾರಿ ಯೋಜನೆ ಜಾರಿ ಮಾಡಿದರೆ, ಅದನ್ನು ವಾಪಸ್ ಪಡೆಯುವುದಿಲ್ಲ ಎಂದು ಭರವಸೆ ನೀಡಿದರು.

ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ನಾನು ಉತ್ತರ ಕೊಡಲ್ಲ. ಇನ್ನು ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಅವರ ಆರೋಪಕ್ಕೆ ನಾನು ಉತ್ತರ ಕೊಡಲ್ಲ.‌ ನಮ್ಮ ಪಕ್ಷ ಚುನಾವಣೆಗೆ ಸದಾ ಸಿದ್ಧವಾಗಿರುತ್ತದೆ. ನಮ್ಮದು ಜನರ ಹಿತಕ್ಕಾಗಿ‌ ಇರುವ ಪಕ್ಷವಾಗಿದೆ ಎಂದು ತಿಳಿಸಿದರು.

ಅದ್ಧೂರಿ ಸ್ವಾಗತ: ಸಚಿವ ಕೆ.ಜೆ. ಜಾರ್ಜ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು‌ ತುಂಗಾ ಸೇತುವೆ ಬಳಿ ಅದ್ಧೂರಿಯಿಂದ ಸ್ವಾಗತಿಸಿದರು. ಪಟಾಕಿ ಸಿಡಿಸಿ, ಸೇಬಿನ ಹಾರ ಹಾಕಿ ಸ್ವಾಗತಿಸಿದರು. ಈ ವೇಳೆ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತಿತರರು ಹಾಜರಿದ್ದರು.

ಇದನ್ನೂಓದಿ:ನನ್ನ ಹೇಳಿಕೆ ತಿರುಚಿ ಬಿಜೆಪಿ ನಾಯಕರು ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ : ಡಿ ಕೆ ಸುರೇಶ್

Last Updated : Feb 3, 2024, 11:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.