ETV Bharat / state

ಪುನೀತ್ ಕೆರೆಹಳ್ಳಿ ಪ್ರಕರಣ: ಪೊಲೀಸ್‌ ಠಾಣೆ ಮುಂದೆ ಹಿಂದೂಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ - Puneeth Kerehalli

ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಅನಾಗರಿಕ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

PUNEETH KEREHALLI
ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಪೊಲೀಸರು (ETV Bharat)
author img

By ETV Bharat Karnataka Team

Published : Jul 31, 2024, 2:30 PM IST

ಶಾಸಕ ಹರೀಶ್​ ಪೂಂಜ ಪ್ರತಿಕ್ರಿಯೆ (ETV Bharat)

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಬಂದ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಅನಾಗರಿಕ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿ ಬಸವೇಶ್ವರ ನಗರ ಠಾಣೆಯ ಮುಂದೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅನುಮತಿ ಇಲ್ಲದಿದ್ದರೂ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಕಾರ್ಯಕರ್ತರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದರು. ಈ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗು ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡುವರೆಗೂ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಇದಾದ ಕೆಲ ಹೊತ್ತಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದರು.

ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಪುಂಜಾ, "ನ್ಯಾಯ ಕೇಳುವುದಕ್ಕೆ ಬಂದ ನಮ್ಮ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರನ್ನು ಕಾಂಗ್ರೆಸ್ ಸರ್ಕಾರ ಗೂಂಡಾಗಳಂತೆ ಬಳಸಿಕೊಳ್ಳುತ್ತಿದೆ. ಜೈಪುರದಿಂದ ನಗರಕ್ಕೆ ಸಾಗಾಟ ಮಾಡಿದ್ದ ಮಾಂಸ ಯಾವುದು ಎಂಬುದರ ಬಗ್ಗೆ ವರದಿ ಇನ್ನೂ ಬಂದಿಲ್ಲ‌. ವರದಿ ಬರುವ ಮುನ್ನವೇ ಹೇಗೆ ನೀವು ಅದು ಕುರಿ ಮಾಂಸ ಎನ್ನುತ್ತೀರಿ?. ಕಾಂಗ್ರೆಸ್ ಸರ್ಕಾರ‌ ಹಿಂದೂ‌ ಕಾರ್ಯಕರ್ತತನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ" ಎಂದು ಆಕ್ರೋಶ ಹೊರಹಾಕಿದರು.

ಮಾಜಿ ಸಂಸದ ಪ್ರತಾಪ್​ ಸಿಂಹ (ETV Bharat)

ಶಿಸ್ತುಕ್ರಮಕ್ಕೆ ಪ್ರತಾಪ್​ ಸಿಂಹ ಆಗ್ರಹ: ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ಮಾಡಿರುವ ಎಸಿಪಿ ಚಂದನ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಮಾಜಿ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಭಾರಿ ಡಿಸಿಪಿ ಟಿ.ಹೆಚ್.ಶೇಖರ್ ಅವರಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಬಂಧನದ ವೇಳೆ ಪುನೀತ್ ಕೆರೆಹಳ್ಳಿಯೊಂದಿಗೆ ಎಸಿಪಿ ಚಂದನ್ ನಡೆದುಕೊಂಡಿರುವ ರೀತಿ ಸರಿಯಿಲ್ಲ. ಹೀಗಾಗಿ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಾಪ್ ಸಿಂಹ ವಿರುದ್ಧ ದೂರು: ಮತ್ತೊಂದೆಡೆ, ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದ ವಿಜಯನಗರ ಎಸಿಪಿ ಚಂದನ್ ಅವರಿಗೆ ಬೆದರಿಕೆ ಹಾಕಿರುವುದನ್ನು ಖಂಡಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಆಮ್ ಆದ್ಮಿ ಪಕ್ಷದ ಯುವ ಘಟಕದ ಅಧ್ಯಕ್ಷ ಜಿ.ಹೆಚ್.ಲೋಹಿತ್ ಕುಮಾರ್ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ಪ್ರಯೋಗಾಲಯದಿಂದ ವರದಿ ಬಂದಿದೆ: ಸಚಿವ ಪರಮೇಶ್ವರ್​ - MEAT ISSUE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.