ETV Bharat / state

ಅಶ್ವಿನಿ ಪುನೀತ್​​ ರಾಜ್​ಕುಮಾರ್​ ನಿಂದನೆ; ಪೊಲೀಸರಿಗೆ ದೂರು ನೀಡಿದ ಅಭಿಮಾನಿಗಳು - Ashwini Puneeth Rajkumar - ASHWINI PUNEETH RAJKUMAR

ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಕಿಡಿಗೇಡಿಗಳು ಅಶ್ವಿನಿ ಪುನೀತ್​ ರಾಜ್​ಕುಮಾರ್‌ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ್ದು, ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಿನಿ ಪುನೀತ್​​ ರಾಜ್​ಕುಮಾರ್​ ಅವರನ್ನು ನಿಂದಿಸಿದ ಕಿಡಿಗೇಡಿಗಳ ವಿರುದ್ಧ ಅಪ್ಪು ಅಭಿಮಾನಿಗಳ ದೂರು

author img

By ETV Bharat Karnataka Team

Published : Apr 5, 2024, 5:16 PM IST

Updated : Apr 5, 2024, 5:28 PM IST

ಅಶ್ವಿನಿ ಪುನೀತ್​​ ರಾಜ್​ಕುಮಾರ್​ ನಿಂದನೆ

ಬೆಂಗಳೂರು: ಗಜಪಡೆ ಹೆಸರಿನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಕಿಡಿಗೇಡಿಗಳು ಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್‌ ಕುರಿತು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟ್​ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಇಂದು ಅಪ್ಪು ಅಭಿಮಾನಿಗಳು ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು.

ಮಾರ್ಚ್ 19ರಂದು ರಾಯಲ್‌ ಚಾಲೆಂಜರ್ಸ್‌ ಬ್ಯಾಂಗಲೋರ್‌ ಎಂದಿದ್ದ ಹೆಸರು ಬದಲಾವಣೆಗೆ ಆರ್‌ಸಿಬಿ ಅನ್‌ಬಾಕ್ಸ್‌ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಲವರು ಆರ್‌ಸಿಬಿ ಪಂದ್ಯ ಸೋಲುವುದಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಕಾರ್ಯಕ್ರಮಕ್ಕೆ ಬಂದಿದ್ದೇ ಕಾರಣ ಎಂದು ನಿಂದಿಸಿ ಪೋಸ್ಟ್‌ ಮಾಡಿದ್ದರು.

ಸೋಷಿಯಲ್‌ ಮೀಡಿಯಾದಲ್ಲಿ ತೀವ್ರ ರೀತಿ ವಿರೋಧ ವ್ಯಕ್ತವಾಗುತ್ತಿದ್ದಂತೆ ನಕಲಿ ಎಕ್ಸ್ ಖಾತೆಯನ್ನ 'ಸುದೀಪ್ ಅಭಿಮಾನಿ' ಬದಲಾಯಿಸಿದ್ದಾರೆ. ಈ ಮೂಲಕ ಪುನೀತ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸಾಮರಸ್ಯ ಕದಡಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಈ ಸಂಬಂಧ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಅಪ್ಪು ಹುಡುಗರು ಸಂಘಟನೆಯ ಅಧ್ಯಕ್ಷ ಟಿ.ಆಂಜನೇಯ ಆಗ್ರಹಿಸಿದ್ದಾರೆ‌.

ಇದನ್ನೂ ಓದಿ: ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್, ಆರೋಪಿಗಳ ವಿರುದ್ಧ ಪ್ರಕರಣ ದಾಖಲು - Honeytrap Case

Last Updated : Apr 5, 2024, 5:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.