ETV Bharat / state

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ ಅಭಯ - CM Siddaramaiah assurance - CM SIDDARAMAIAH ASSURANCE

ಮುಧೋಳ ತಾಲೂಕಿನ ರೈತರ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಈ ವೇಳೆ ಘಟಪ್ರಭಾ ನದಿಯ ಪ್ರವಾಹದಿಂದಾಗಿ ಈವೆರೆಗೆ ಆಗಿರುವ ಬೆಳೆಹಾನಿಗೆ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

Farmers delegation of Mudhol taluk visited CM
ಸಿಎಂ ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗ (ETV Bharat)
author img

By ETV Bharat Karnataka Team

Published : Aug 28, 2024, 1:36 PM IST

ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿದ್ದರಾಮಯ್ಯ, "ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34,639 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019ರಲ್ಲಿ 15,088 ಹೆಕ್ಟೇರ್‌, 2021ರಲ್ಲಿ 7,051 ಹೆಕ್ಟೇರ್ ಮತ್ತು 2024‌ ರಲ್ಲಿ 12,500 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.

"ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರ್​ಗೆ ರೂ. 22,500 ರಂತೆ ಪರಿಹಾರಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17,000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಠವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು. ಎನ್‌.ಡಿ.ಆರ್.ಎಫ್‌ ಮತ್ತು ಎಸ್.ಡಿ.ಆರ್.ಎಫ್‌ ಮಾನದಂಡಗಳನ್ನು ಪರಿಗಣಿಸದೇ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು" ಎಂದು ರೈತರು ಮನವಿ ಸಲ್ಲಿಸಿದರು.

ಈ ವೇಳೆ ಅಬಕಾರಿ ಸಚಿವ ಆರ್.‌ಬಿ. ತಿಮ್ಮಾಪುರ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ನೀತಿ ಆಯೋಗದ ಜೊತೆ ಸಭೆ: ಪ್ರಗತಿಪರ ಮತ್ತು ಸಮೃದ್ಧ ಭಾರತಕ್ಕೆ ಕೊಡುಗೆ ನೀಡಲು ನಮ್ಮ ರಾಜ್ಯ ಬದ್ಧ - ಸಿಎಂ - NITI Aayoga

ETV Bharat Logo

Copyright © 2025 Ushodaya Enterprises Pvt. Ltd., All Rights Reserved.