ETV Bharat / state

ಮುಸ್ಲಿಮರ ಓಲೈಕೆಗೆ ಸಿಎಂ, ಡಿಸಿಎಂ ಭಾರಿ ಪೈಪೋಟಿ ನಡೆಸಿದ್ದಾರೆ: ಆರ್​ ಅಶೋಕ್ ಟೀಕೆ - Deputy Chief Minister DK Shivakumar

ಮುಸ್ಲಿಮರ ಓಲೈಕೆಯಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಭಾರಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರ್.ಅಶೋಕ್ ಎಕ್ಸ್​ ಪೋಸ್ಟ್​ ಮೂಲಕ ಟೀಕಿಸಿದ್ದಾರೆ.

R ASHOK TWEET
ಆರ್​ ಅಶೋಕ್
author img

By ETV Bharat Karnataka Team

Published : Jan 29, 2024, 12:57 PM IST

ಬೆಂಗಳೂರು: ಮೋಹಲ್ಲಾಗಳಿಗೆ ನೀಡಲು ಈ ಸರ್ಕಾರಕ್ಕೆ ಹಣವಿದೆ. ರೈತರಿಗೆ ನೀಡಲು ಮಾತ್ರ ಹಣವಿಲ್ಲ. ಮುಸ್ಲಿಮರ ಓಲೈಕೆಯಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಭಾರಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ ನಡೆಸಿದ್ದಾರೆ.

ಮೊನ್ನೆ ತಾನೇ ರಾಜ್ಯದಲ್ಲಿ ಮುಸ್ಲಿಂ ಪರ ಸರ್ಕಾರ ಇದೆ, ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಮುಸ್ಲಿಮರ ದಯೆಯಿಂದ ಎಂದು ಹಿಂದೂ ಮತದಾರರಿಗೆ ಅಪಮಾನ ಮಾಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲೆ ಪೈಪೋಟಿ ಬಿದ್ದಂತೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಹಲ್ಲಾ ಅಭಿವೃದ್ಧಿಗೆ 1,000 ಕೋಟಿ ರೂಪಾಯಿ ನೀಡಲು ಮುಂದಾಗಿದ್ದಾರೆ. ಮೋಹಲ್ಲಾಗಳಿಗೆ 1000 ಕೋಟಿ ರೂಪಾಯಿ ನೀಡಲು ಕಾಂಗ್ರೆಸ್​ ಸರ್ಕಾರದ ಬಳಿ ಹಣ ಇದೆ. ಆದರೆ ಬರ ಬಂದು ಎಂಟು ತಿಂಗಳಾದರೂ ರೈತರಿಗೆ 2,000 ರೂಪಾಯಿ ಪರಿಹಾರ ನೀಡಲು ಹಣವಿಲ್ಲ ಎಂದು ಎಕ್ಸ್​ ಪೋಸ್ಟ್​ ಮೂಲಕ ಆರ್​. ಅಶೋಕ್ ಟೀಕಿಸಿದ್ದಾರೆ.

  • ಮುಸ್ಲಿಮರ ಓಲೈಕೆಯಲ್ಲೂ ಸಿಎಂ @siddaramaiah ಹಾಗೂ ಡಿಸಿಎಂ @DKShivakumar ಭಾರಿ ಪೈಪೋಟಿ.

    ಮೊನ್ನೆ ತಾನೇ ರಾಜ್ಯದಲ್ಲಿ ಮುಸ್ಲಿಂ ಪರ ಸರ್ಕಾರ ಇದೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಮುಸ್ಲಿಮರ ದಯೆಯಿಂದ ಎಂದು ಹಿಂದೂ ಮತದಾರರಿಗೆ ಅಪಮಾನ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಪೈಪೋಟಿ ಬಿದ್ದಂತೆ ಈಗ ಮುಖ್ಯಮಂತ್ರಿ… pic.twitter.com/y0FSJqGmrh

    — R. Ashoka (ಆರ್. ಅಶೋಕ) (@RAshokaBJP) January 29, 2024 " class="align-text-top noRightClick twitterSection" data=" ">

ಸಿಎಂ ಸಿದ್ದರಾಮಯ್ಯನವರೇ, ಮುಸ್ಲಿಮರ ತುಷ್ಟೀಕರಣ ಮಾಡಲು ನಿಮ್ಮ ಕಾಂಗ್ರೆಸ್ ಪಕ್ಷ ಯಾವ ಮಟ್ಟಕ್ಕಾದರೂ ಹೋಗುತ್ತದೆ ಎಂದು ಪದೇ ಪದೇ ನಿರೂಪಿಸುತ್ತಲೇ ಇದ್ದೀರಿ. ಆದರೆ ಜಾತಿ, ಮತ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ಅನ್ನ ನೀಡುವ ರೈತರನ್ನೂ ನಿಮ್ಮ ಓಲೈಕೆ ರಾಜಕಾರಣದಲ್ಲಿ ಬಲಿಪಶು ಮಾಡಬೇಡಿ. ಬರದಿಂದ ಹೈರಾಣಾಗಿ 800ಕ್ಕೂ ಹೆಚ್ಚು ರೈತರು ಈಗಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷಾಂತರ ಕೃಷಿ ಕಾರ್ಮಿಕರು ಮನೆ ಮಠ ಬಿಟ್ಟು ಗುಳೆ ಹೋಗಿದ್ದಾರೆ. ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರ ಬಲಿಯಾಗಬೇಕು? ಈ ಕೂಡಲೇ ರೈತರ ಖಾತೆಗೆ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಿ. ನಿಮ್ಮ ಕೈಲಾಗಾದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಜಾಗದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶವಿಲ್ಲ: ಸಚಿವ ಚಲುವರಾಯಸ್ವಾಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.