ETV Bharat / state

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದಿರುವವರನ್ನು ಪತ್ತೆ ಹಚ್ಚಿ: ಆರ್​. ಅಶೋಕ್​ - R ASHOK

ಹಸುಗಳ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಪತ್ತೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

ಆರ್​. ಅಶೋಕ್​
ಆರ್​. ಅಶೋಕ್​ (ETV Bharat)
author img

By ETV Bharat Karnataka Team

Published : Jan 13, 2025, 5:39 PM IST

ಬೆಂಗಳೂರು: "ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು, ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಪತ್ತೆ ಮಾಡಲಿ" ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ, ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು" ಎಂದರು.

"ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್​ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ" ಎಂದು ಆಗ್ರಹಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿಸುವ ಹುನ್ನಾರ: "ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ. ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು" ಎಂದು ಕಿವಿಮಾತು ಹೇಳಿದರು.

ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ: ಮತ್ತೊಂದೆಡೆ, ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ಮುಖಂಡ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮಾತನಾಡಿ, "ಹಸುಗಳ ಕೆಚ್ಚಲು ಕೊಯ್ದ ಘಟನೆ ಒಂದು ಷಡ್ಯಂತ್ರ ಮತ್ತು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಓಡಿಸಿ ಜಾಗ ಕಬ್ಜ ಮಾಡುವ ದುಷ್ಕೃತ್ಯ. ಚಾಮರಾಜಪೇಟೆ ಕ್ಷೇತ್ರದಿಂದ ಐದು ಬಾರಿ ಆಯ್ಕೆಯಾದ ಜಮೀರ್ ಅಹ್ಮದ್ ಖಾನ್ ಅವರು, ಮೂರು ಹಸು ಖರೀದಿಸಿ ನೀಡುವುದಾಗಿ ಹೇಳಿಕೆ ನೀಡಿದ್ದು, ಅದು ಇನ್ನಷ್ಟು ಆಘಾತಕಾರಿ" ಎಂದರು.

"ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹೀಗಾಗಿದೆ. ಇವರಿಗೆ ಮಾನವೀಯತೆ ಇಲ್ಲವೇ? ಹಸು ಖರೀದಿಸಿ ಕೊಡಲು ಇದೇನು ಆಟದ ಸಾಮಗ್ರಿಯೇ?. ಇದರಿಂದ ಹಿಂದೂಗಳಿಗೆ ದೊಡ್ಡ ಆಘಾತವಾಗಿದೆ. ರಾಜ್ಯ ಸರ್ಕಾರ ಅದೃಷ್ಟ ಚೆನ್ನಾಗಿದ್ದ ಕಾರಣ ಚಾಮರಾಜಪೇಟೆಯಲ್ಲಿ ರಕ್ತಪಾತವಾಗಲಿಲ್ಲ. ಕೋಮುದಂಗೆ ಆಗುವ ಸಾಧ್ಯತೆ ಇತ್ತು" ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿ ಬಂಧನ

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ: ಜೋಶಿ‌ ಕಿಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.